![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Jun 22, 2023, 7:30 AM IST
ಮುಂಬೈ: 100 ಕೋಟಿ ರೂ. ಕೋವಿಡ್ ಸೆಂಟರ್ ಹಗರಣಕ್ಕೆ ಸಂಬಂಧಿಸಿದಂತೆ ಉದ್ಧವ್ ಠಾಕ್ರೆ ಅವರ ಪುತ್ರ, ಆದಿತ್ಯ ಠಾಕ್ರೆಯ ಆಪ್ತಸಹಾಯಕರಾದ ಸುಜಿತ್ ಪಟ್ಕರ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಬುಧವಾರ ದಾಳಿ ನಡೆಸಿದ್ದಾರೆ.
ಶಿವಸೇನೆ (ಉದ್ಧವ್ ಬಣ)ನಾಯಕ ಸಂಜಯ್ ರಾವತ್ ಅವರ ಆಪ್ತ ಸಹಚರರಲ್ಲಿ ಓರ್ವರಾಗಿರುವ ಸುಜಿತ್, ಲೈಫ್ಲೈನ್ ಎನ್ನುವ ಹಾಸ್ಪಿಟಲ್ ಒಂದರ ಒಡೆತನವನ್ನು ಹೊಂದಿದ್ದಾರೆ.
ಕೊರೊನಾ ಸಂದರ್ಭದಲ್ಲಿ ರೂಪಿಸಲಾಗಿದ್ದ ಜಂಬೋ ಕೋವಿಡ್ ಸೆಂಟರ್‌ನ ನಿರ್ವಹಣೆಯನ್ನು ಮಂಬೈ ಮಹಾನಗರ ಪಾಲಿಕೆಯು ಇದೇ ಆಸ್ಪತ್ರೆಗೆ ವಹಿಸಿತ್ತು. ಇಂಥ ಯಾವುದೇ ಸೆಂಟರ್‌ಗಳನ್ನ ನಡೆಸಿರುವ ಅನುಭವವಿಲ್ಲದ ಸುಜಿತ್ ಅವರಿಗೆ ಈ ಹೊಣೆಗಾರಿಕೆ ನೀಡಲು ಹಗರಣ ನಡೆಸಲಾಗಿದೆ ಎಂದು ಆರೋಪಿಸಿ, ಬಿಜೆಪಿ ನಾಯಕ ಕಿರಿತ್ ಸೋಮಯ್ಯ ಕೇಸು ದಾಖಲಿಸಿದ್ದರು. ಈ ಹಿನ್ನೆಲೆ ಸುಜಿತ್ ನಿವಾಸ, ನಗರಪಾಲಿಕೆಯ ಕೆಲ ಅಧಿಕಾರಿಗಳಿಗೆ ಸಂಬಂಧಿಸಿದ ಆಸ್ತಿಗಳಿರುವ 15 ಸ್ಥಳಗಳಲ್ಲಿ ಇಡಿ ದಾಳಿ ನಡೆಸಿದೆ.
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
You seem to have an Ad Blocker on.
To continue reading, please turn it off or whitelist Udayavani.