7 ಕೋಟಿ ರೂ. ನಕಲಿ ನೋಟು ವಶ: 7 ಮಂದಿ ಬಂಧನ
Team Udayavani, Jan 27, 2022, 9:00 PM IST
ಮುಂಬಯಿ: ನಕಲಿ ನೋಟು ಮುದ್ರಣ ಮತ್ತು ಹಂಚುವಿಕೆ ಪ್ರಕರಣದ ಜಾಲ ಭೇದಿಸುವಲ್ಲಿ ಮುಂಬಯಿ ಪೊಲೀಸ್ ಕ್ರೈಂ ಬ್ರಾಂಚ್ ತಂಡ ಯಶಸ್ವಿಯಾಗಿದೆ.
ದಹಿಸರ್ ನಾಕಾ ಬಳಿ ನಕಲಿ ನೋಟು ತಯಾರಿಕೆಯಲ್ಲಿ ತೊಡಗಿದ್ದ ತಂಡದ 7 ಮಂದಿ ಸದಸ್ಯರನ್ನು ಬಂಧಿಸಿದ ಪೊಲೀಸರು ಅವರಿಂದ 2,000 ರೂ. ಮೌಲ್ಯದ ಸುಮಾರು 7 ಕೋಟಿ ರೂ. ನಕಲಿ ಭಾರತೀಯ ಕರೆನ್ಸಿಗಳನ್ನು ವಶಕ್ಕೆ ತೆಗೆದುಕೊಂಡಿದೆ
ಮುಂಬಯಿಯಲ್ಲಿ ನಕಲಿ ನೋಟುಗಳನ್ನು ಮುದ್ರಿಸಿ ಪ್ರತೀದಿನ ಚಲಾವಣೆಗೆ ತರಲಾಗುತ್ತಿದೆ ಎಂಬ ಸುಳಿವು ಪೊಲೀಸರಿಗೆ ಸಿಕ್ಕಿತ್ತು. ಈ ವೇಳೆ 2,000 ಮೌಲ್ಯದ ನಕಲಿ ನೋಟುಗಳನ್ನು ಮಾರಾಟ ಮಾಡಲು ನಾಲ್ವರು ದಹಿಸರ್ಗೆ ಬರುತ್ತಾರೆ ಎಂಬ ಮಾಹಿತಿ ಪೊಲೀಸರಿಗೆ ಲಭಿಸಿತು. ಅವರ ವಾಹನವನ್ನು ತಪಾಸಣೆ ನಡೆಸಿದಾಗ 2,000 ರೂ. ನೋಟುಗಳ 250 ಬಂಡಲ್ಗಳು ಪತ್ತೆಯಾಗಿವೆ.
ಹೆಚ್ಚಿನ ತನಿಖೆ ನಡೆಸಿದ ಪೊಲೀಸರಿಗೆ ಇದರ ಹಿಂದೆ ದೊಡ್ಡ ಗ್ಯಾಂಗ್ ಇರುವುದು ತಿಳಿಯಿತು. ಎಲ್ಲರನ್ನು ಬಂಧಿಸಿದ ಪೊಲೀಸರು ಆರೋಪಿಗಳ ಬಳಿಯಿಂದ ಆಧಾರ್ ಕಾರ್ಡ್, ಪ್ಯಾನ್ ಕಾರ್ಡ್, ಚಾಲನಾ ಪರವಾನಿಗೆ, ಚುನಾವಣಾ ಆಯೋಗದ ಗುರುತಿನ ಚೀಟಿ ಹಾಗೂ ವಿವಿಧ ಕಂಪೆನಿಗಳ ಮೊಬೈಲ್ ಫೋನ್ಗಳು, ಲ್ಯಾಪ್ಟಾಪ್ ಮತ್ತು ಕೆಲವು ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Oyo Rooms: ಮದುವೆಯಾಗದ ಜೋಡಿಗೆ ಇನ್ಮುಂದೆ ʼಓಯೋʼ ರೂಮ್ ಸಿಗೋದು ಕಷ್ಟ – ವರದಿ
Jammu and Kashmir: ಕಮರಿಗೆ ಬಿದ್ದ ವಾಹನ; ಕನಿಷ್ಠ ನಾಲ್ವರು ಸಾವು
Vavar Mosque: ಶಬರಿಮಲೆ ಯಾತ್ರಿಗಳು ವಾವರ ಮಸೀದಿಗೆ ಹೋಗಬಾರದು: ಬಿಜೆಪಿ ಶಾಸಕ
Viral: ಇನ್ಸ್ಟಾಗ್ರಾಮ್ನಲ್ಲಿ ಪರಿಚಯವಾದ 16ರ ಬಾಲಕನ ಜತೆ ಮನೆ ಬಿಟ್ಟು ಓಡಿದ 10ರ ಬಾಲಕಿ!
Pune: ಪಿಜ್ಜಾ ಆರ್ಡರ್ ಮಾಡುವ ಮುನ್ನ ಎಚ್ಚರ.. ಪಿಜ್ಜಾದಲ್ಲಿತ್ತು ಚಾಕುವಿನ ತುಂಡು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mannagudda: ಗಡ್ಡೆ ಗೆಣಸು ಸೊಪ್ಪುಗಳಿಗೆ ರಾಜ ಮರ್ಯಾದೆ!
Cosmetic surgery:ಸೌಂದರ್ಯವರ್ಧಕ ಶಸ್ತ್ರಚಿಕಿತ್ಸೆ ಮತ್ತು ಭಾರತೀಯ ಜನಸಮುದಾಯದ ಮೇಲೆ ಪರಿಣಾಮ
Oyo Rooms: ಮದುವೆಯಾಗದ ಜೋಡಿಗೆ ಇನ್ಮುಂದೆ ʼಓಯೋʼ ರೂಮ್ ಸಿಗೋದು ಕಷ್ಟ – ವರದಿ
Jammu and Kashmir: ಕಮರಿಗೆ ಬಿದ್ದ ವಾಹನ; ಕನಿಷ್ಠ ನಾಲ್ವರು ಸಾವು
Manipal ಪಾಯ್ಸನ್ ಇನ್ಫಾರ್ಮೇಶನ್ ಸೆಂಟರ್; ಸಮುದಾಯಕ್ಕೊಂದು ಉಪಕಾರಿ ಸೇವೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.