ಪಬ್‌ನಲ್ಲಿ ಅಗ್ನಿ ಜ್ವಾಲೆ
Team Udayavani, Dec 30, 2017, 6:00 AM IST
ಮುಂಬೈ: ಮುಂಬೈನ ಕಮಲಾ ಮಿಲ್ಸ್ ಕಟ್ಟಡದಲ್ಲಿ ಗುರುವಾರ ಮಧ್ಯರಾತ್ರಿ ಸಂಭವಿಸಿದ ಅಗ್ನಿ ದುರಂತದಿಂದ 14 ಜನರು ಸಾವಿಗೀಡಾಗಿ, 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಪಬ್‌ನಲ್ಲಿ ಹುಟ್ಟುಹಬ್ಬ ಆಚರಣೆ ಮಾಡಿಕೊಳ್ಳುತ್ತಿದ್ದ ಯುವತಿ ಹಾಗೂ ಆಕೆಯ ಹಲವು ಸ್ನೇಹಿತೆಯರೂ ದುರ್ಘಟನೆಯಲ್ಲಿ ಮೃತಪಟ್ಟಿದ್ದಾರೆ.
ಮಧ್ಯರಾತ್ರಿ 12.30 ರ ಸುಮಾರಿಗೆ ಕಮಲಾ ಮಿಲ್ಸ್ ಕಟ್ಟಡದ ಕೊನೆಯ ಅಂತಸ್ತಿನಲ್ಲಿರುವ “1 ಅಬೋವ್’ ಹೆಸರಿನ ಪಬ್‌ನಲ್ಲಿ ಬೆಂಕಿ ಹೊತ್ತಿಕೊಂಡಿತ್ತು. ಸ್ವಲ್ಪ ಹೊತ್ತಿನಲ್ಲೇ ಕೆಳ ಮಹಡಿಯಲ್ಲಿರುವ ಮೋಜೋ ಪಬ್‌ಗ ವ್ಯಾಪಿಸಿ, ನಂತರ ಇಡೀ ಕಟ್ಟಡಕ್ಕೂ ಆವರಿಸಿಕೊಂಡಿದೆ. ಈ ಕಟ್ಟಡದಲ್ಲಿ ಹೋಟೆಲ್‌ಗಳು, ಮಾಧ್ಯಮ ಕಚೇರಿಗಳೂ ಇದ್ದವು. ಘಟನೆ ಬಗ್ಗೆ ಪ್ರಧಾನಿ ಮೋದಿ, ಸಿಎಂ ದೇವೇಂದ್ರ ಫಡ್ನವೀಸ್ ಸೇರಿದಂತೆ ಅನೇಕ ಗಣ್ಯರು ಆಘಾತ ವ್ಯಕ್ತಪಡಿಸಿದ್ದಾರೆ.
ಪೇರಿ ಕಿತ್ತ ಮ್ಯಾನೇಜರ್, ಸಿಬ್ಬಂದಿ:
ಬೆಂಕಿ ತಗಲುತ್ತಿದ್ದಂತೆಯೇ ಪಬ್‌ನ ಮ್ಯಾನೇಜರ್ ಮತ್ತು ಸಿಬ್ಬಂದಿ ಜಾಗ ಖಾಲಿ ಮಾಡಿದ್ದಾರೆ. ಗ್ರಾಹಕರನ್ನು ರಕ್ಷಿಸುವ ಬದಲಿಗೆ ಸ್ಥಳದಿಂದ ಪರಾರಿಯಾಗಿರುವ ಬಗ್ಗೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಗ್ರಾಹಕರು ಸುರಕ್ಷಿತವಾಗಿ ಹೊರಹೋಗುವುದಕ್ಕೆ ವ್ಯವಸ್ಥೆಗೂ ಸಿಬ್ಬಂದಿ ಹಾಗೂ ಮ್ಯಾನೇಜರ್ ಮುಂದಾಗಲಿಲ್ಲ. ಇದರಿಂದಾಗಿಯೇ 14 ಗ್ರಾಹಕರು ಸಾವನ್ನಪ್ಪುವಂತಾಯಿತು ಎಂದು ಪೊಲೀಸರು ಹೇಳಿದ್ದಾರೆ. ಸದ್ಯ ಮ್ಯಾನೇಜರ್‌ಗಾಗಿ ಹುಡುಕಾಟ ನಡೆಸಿದ್ದಾರೆ.
ಇನ್ನೊಂದೆಡೆ ಮುಂಬೈ ಪಾಲಿಕೆ ಅಧಿಕಾರಿಗಳು ಈಗಾಗಲೇ 3 ಬಾರಿ ಪಬ್ ವಿರುದ್ಧ ಕ್ರಮ ಕೈಗೊಂಡಿದ್ದಾರೆ ಎನ್ನಲಾಗಿದೆ. ಪಬ್‌ಗ 2016ರಲ್ಲಿ ಅನುಮತಿ ನೀಡಲಾಗಿತ್ತು. ಅದರ ನಿರ್ವಹಣೆ ಹೊಣೆ ಹೊತ್ತಿರುವ ಸಿ ಗ್ರೇಡ್ ಹಾಸ್ಪಿಟಾಲಿಟಿ ಕಂಪನಿಯ ಹೃತೇಶ್ ಸಾಂ Ì, ಜಿಗರ್ ಸಾಂ Ì ಮತ್ತು ಅಭಿಜೀತ್ ಮಂಕಾ ವಿರುದ್ಧ ದೂರು ದಾಖಲಿಸಿಕೊಳ್ಳಲಾಗಿದೆ. ಪ್ರಕರಣ ಸಂಬಂಧ ಐವರು ಪಾಲಿಕೆ ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿದೆ. ನಿಯೋಜಿತ ಅಧಿಕಾರಿ, ಜೂನಿಯರ್ ಇಂಜಿನಿಯರ್, ಸಬ್ ಇಂಜಿನಿಯರ್, ವೈದ್ಯಕೀಯ ಅಧಿಕಾರಿ ಹಾಗೂ ಅಗ್ನಿಶಾಮಕ ದಳದ ಸಹಾಯಕ ಅಧಿಕಾರಿಯನ್ನು ಅಮಾನತುಗೊಳಿಸಲಾಗಿದೆ.
ನಿಯಮ ಉಲ್ಲಂಘಿಸಿದ ಪಬ್:
ಇಡೀ ಪಬ್ ಅನ್ನು ಬಿದಿರು ಬಳಸಿಯೇ ನಿರ್ಮಿಸಲಾಗಿದೆ. ಕಮಲಾ ಮಿಲ್ಸ್‌ನ ಕಟ್ಟಡದ ಛಾವಣಿಯಲ್ಲಿ ಈ ಪಬ್ ಇರುವುದರಿಂದ ಬೆಂಕಿ ಹೊತ್ತಿಕೊಳ್ಳುವ ಸಂಭವ ಹೆಚ್ಚಿರುತ್ತದೆ. ಆದರೂ, ಇಲ್ಲಿ ಯಾವುದೇ ಅಗ್ನಿಶಾಮಕ ಸಾಧನಗಳು ಇರಲಿಲ್ಲ. ಅಷ್ಟೇ ಅಲ್ಲ, ತುರ್ತು ನಿರ್ಗಮನ ಪ್ರದೇಶವನ್ನೂ ಸಾಮಗ್ರಿಗಳನ್ನಿಟ್ಟು ಮುಚ್ಚಲಾಗಿತ್ತು. ಹೀಗಾಗಿ ಅಗ್ನಿ ಅನಾಹುತ ಸಂಭವಿಸಿದಾಗ ತಪ್ಪಿಸಿಕೊಳ್ಳುವ ಅವಕಾಶ ಕಡಿಮೆ ಇತ್ತು ಎಂದು ಪೊಲೀಸರು ವರದಿ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PAN 2.0 ಗೆ ಸಂಪುಟ ಅನುಮೋದನೆ: ಏನಿದು ಪ್ಯಾನ್ 2.0? ಇದರ ವೈಶಿಷ್ಟ್ಯವೇನು?
Essar Group: ಎಸ್ಸಾರ್ ಗ್ರೂಪ್ ನ ಸಹ ಸಂಸ್ಥಾಪಕ ಶಶಿ ರುಯಿಯಾ ನಿಧನ
RBI ಗವರ್ನರ್ ಶಕ್ತಿಕಾಂತ್ ದಾಸ್ ಚೆನ್ನೈ ಆಸ್ಪತ್ರೆಗೆ ದಾಖಲು; ಶೀಘ್ರವೇ ಡಿಸ್ ಚಾರ್ಜ್
26/11 Te*rror Attack: ಕರಾಳ ನೆನಪಿಗೆ 16 ವರ್ಷ-ಆರು ಧೀರ ಹೀರೋಗಳು..ಹುತಾತ್ಮರಿಗೆ ಗೌರವ
Maharashtra: ಮುಖ್ಯಮಂತ್ರಿ ಸ್ಥಾನಕ್ಕೆ ಏಕನಾಥ್ ಶಿಂದೆ ರಾಜೀನಾಮೆ… ಮುಂದಿನ ಸಿಎಂ ಯಾರು?
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Yadagiri: ಗ್ಯಾರಂಟಿಗಳಿಂದ ಹಿಂದೆ ಸರಿಯಲ್ಲ: ಸಚಿವ ದರ್ಶನಾಪುರ
Gundlupete:ಮರಿಯಾನೆ ಬೇಟೆಗೆ ಹೊಂಚುಹಾಕುತ್ತಿದ್ದ ಹುಲಿ ಮೇಲೆ ತಾಯಿಯಾನೆ ದಾಳಿ:ವಿಡಿಯೋ ವೈರಲ್
Pakistan: ಪಾಕ್ ಸೇನೆ ಮತ್ತು ಇಮ್ರಾನ್ ಸಂಘರ್ಷ- ಯುಎಇ ಮಧ್ಯಸ್ಥಿಕೆ ವಹಿಸಲಿ: ಐಎಸ್ ಐ
IPL 2025: ಮೆಗಾ ಹರಾಜಿನ ಬಳಿಕ ಎಲ್ಲಾ ಹತ್ತು ತಂಡಗಳು ಹೀಗಿವೆ ನೋಡಿ
UV Fusion: ಕರ್ನಾಟಕ: ನಮ್ಮೆಲ್ಲರ ಉಸಿರಾಗಲಿ ಕನ್ನಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.