ಮುಂಬೈ-ಗೋವಾ ಸೆಮಿ-ಹೈ-ಸ್ಪೀಡ್ ವಂದೇ ಭಾರತ್ ರೈಲಿಗೆ ಚಾಲನೆ
Team Udayavani, Jun 27, 2023, 6:57 PM IST
ಪಣಜಿ: ಪ್ರಧಾನಿ ನರೇಂದ್ರ ಮೋದಿ ಅವರು ಜೂನ್ 27 ರಂದು ಮುಂಬೈ-ಗೋವಾ ಸೆಮಿ-ಹೈ-ಸ್ಪೀಡ್ ವಂದೇ ಭಾರತ್ ರೈಲಿಗೆ ಚಾಲನೆ ನೀಡಿದರು.
ಮಂಗಳವಾರ ಬೆಳಗ್ಗೆ 11 ಗಂಟೆಗೆ ಭೋಪಾಲ್‍ನ ರಾಣಿ ಕಮಲಾಪತಿ ರೈಲು ನಿಲ್ದಾಣದಿಂದ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಮುಂಬೈ-ಗೋವಾ ವಂದೇ ಭಾರತ್ ಎಕ್ಸ್‍ಪ್ರೆಸ್ ಸೇರಿದಂತೆ ಇತರ ನಾಲ್ಕು ರೈಲುಗಳಿಗೆ ಮೋದಿ ಚಾಲನೆ ನೀಡಿದರು.
ವಂದೇ ಭಾರತ್ ರೈಲು ಗೋವಾದ ಮಡಗಾಂವ್ ರೈಲು ನಿಲ್ದಾಣದಿಂದ ಬೆಳಗ್ಗೆ 11 ಗಂಟೆಗೆ ಮುಂಬೈಗೆ ತೆರಳಿತು. ಉದ್ಘಾಟನೆಗೂ ಮುನ್ನ ಡೊಳ್ಳು ಬಾರಿಸುವ ಮೂಲಕ ರೈಲನ್ನು ಸ್ವಾಗತಿಸಲಾಯಿತು. ಗೋವಾ ರಾಜ್ಯಪಾಲ ಪಿ.ಎಸ್. ಶ್ರೀಧರನ್ ಪಿಳ್ಳೈ, ಮುಖ್ಯಮಂತ್ರಿ ಡಾ.ಪ್ರಮೋದ್ ಸಾವಂತ್, ಕೇಂದ್ರ ಪ್ರವಾಸೋದ್ಯಮ ರಾಜ್ಯ ಸಚಿವ ಶ್ರೀಪಾದ್ ನಾಯ್ಕ್, ರಾಜ್ಯ ಪ್ರವಾಸೋದ್ಯಮ ಸಚಿವ ರೋಹನ್ ಖಂವಟೆ, ಮಹಾರಾಷ್ಟ್ರ ಆಹಾರ ಮತ್ತು ನಗರ ವ್ಯವಹಾರಗಳ ಸಚಿವ ರವೀಂದ್ರ ಚವ್ಹಾಣ್, ಸಂಸದ ಫ್ರಾನ್ಸಿಸ್ ಸರ್ದಿನ್, ರಾಜ್ಯಸಭಾ ಸಂಸದ ವಿನಯ್ ತೆಂಡೂಲ್ಕರ್, ಮಡಗಾಂವ್ ಶಾಸಕ ದಿಗಂಬರ್ ಕಾಮತ್ ಮತ್ತು ಇತರ ಅಧಿಕಾರಿಗಳು ಉಪಸ್ಥಿತರಿದ್ದರು.
ಮಡಗಾಂವ್ ರೈಲು ನಿಲ್ದಾಣವನ್ನು ಪಂಚತಾರಾ ರೈಲು ನಿಲ್ದಾಣವನ್ನಾಗಿ ಮಾಡುವಂತೆ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಅವರಿಗೆ ಮನವಿ ಮಾಡಿದ್ದೇವೆ. ಮುಂದಿನ ವರ್ಷಗಳಲ್ಲಿ ಮಡಗಾಂವ್ ನಿಲ್ದಾಣದ ಸ್ವರೂಪ ಬದಲಾಗಲಿದೆ ಎಂದು ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಹೇಳಿದ್ದಾರೆ.
ವಂದೇ ಮಾತರಂ ವೇಳಾಪಟ್ಟಿ:
ವಂದೇ ಭಾರತ್ ಎಕ್ಸ್‍ಪ್ರೆಸ್ ದೇಶದ ಅತ್ಯಂತ ವೇಗದ ರೈಲು ಮತ್ತು ಮಡಗಾಂವ್‍ನಿಂದ ಮುಂಬೈವರೆಗಿನ ದೂರವನ್ನು ಕೇವಲ ಏಳೂವರೆಯಿಂದ ಎಂಟು ಗಂಟೆಗಳಲ್ಲಿ ಕ್ರಮಿಸುತ್ತದೆ. ಆದರೆ, ಮಳೆಗಾಲದಲ್ಲಿ ವೇಗದ ಮಿತಿಯಿಂದಾಗಿ ರೈಲು ಈಗ 10 ಗಂಟೆಗಳನ್ನು ತೆಗೆದುಕೊಳ್ಳುತ್ತದೆ. ಸೋಮವಾರ, ಬುಧವಾರ ಮತ್ತು ಶುಕ್ರವಾರದಂದು ಬೆಳಿಗ್ಗೆ 5.32 ಕ್ಕೆ ಮುಂಬೈಯಿಂದ ಹೊರಡುವ ಎಕ್ಸ್‍ಪ್ರೆಸ್ ಅದೇ ದಿನ ಮಧ್ಯಾಹ್ನ 3.30 ಕ್ಕೆ ಮಡಗಾಂವ್ ತಲುಪುತ್ತದೆ. ಮಡಗಾಂವ್‍ನಿಂದ ಹಿಂದಿರುಗುವ ಪ್ರಯಾಣವು ಮಂಗಳವಾರ, ಗುರುವಾರ ಮತ್ತು ಶನಿವಾರದಂದು ಮಧ್ಯಾಹ್ನ 12.20 ಕ್ಕೆ ಪ್ರಾರಂಭವಾಗಿ ರಾತ್ರಿ 10.20 ಕ್ಕೆ ಮುಂಬೈ ತಲುಪುತ್ತದೆ.
ಇದನ್ನೂ ಓದಿ: Airport: ಕಸ್ಟಮ್ಸ್ ಅಧಿಕಾರಿಗಳೆಂದು ನಂಬಿಸಿ ವ್ಯಕ್ತಿಗೆ ಲಕ್ಷಾಂತರ ರೂ. ಪಂಗನಾಮ !
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Assam Coal Mine Tragedy: ಅಸ್ಸಾಂ ಗಣಿ ದುರಂತ… ಒಬ್ಬನ ಮೃತ ದೇಹ ಪತ್ತೆ
ತಿಮ್ಮಪ್ಪನ ಸನ್ನಿಧಾನದಲ್ಲಿ ನೂಕುನುಗ್ಗಲು ಕಾಲ್ತುಳಿತ… 6 ಸಾ*ವು, ಹಲವರ ಸ್ಥಿತಿ ಗಂಭೀರ
Sheesh Mahal Row: ಶೀಶ್ಮಹಲ್ ವರ್ಸಸ್ ರಾಜ್ ಮಹಲ್: ದಿಲ್ಲೀಲಿ ಬಿಜೆಪಿ, ಆಪ್ ಹೈಡ್ರಾಮ
Foundation: ಆಂಧ್ರ ಅಭಿವೃದ್ಧಿಗೆ ಹೆಗಲಿಗೆ ಹೆಗಲು ಕೊಟ್ಟು ಕೆಲಸ ಮಾಡುವೆವು: ಮೋದಿ
Delhi: ಜ.15ಕ್ಕೆ ಹೊಸ ಕಟ್ಟಡಕ್ಕೆ ಕಾಂಗ್ರೆಸ್ ಪ್ರಧಾನ ಕಚೇರಿ ಸ್ಥಳಾಂತರ
MUST WATCH
ಹೊಸ ಸೇರ್ಪಡೆ
ನಕ್ಸಲರನ್ನು ಅಮಿತ್ ಶಾ ಸ್ವಾಗತಿಸಿದಾಗ ಏಕೆ ಬೆಚ್ಚಿ ಬಿದ್ದಿಲ್ಲ?: ಸಿಎಂ ತಿರುಗೇಟು
Naxal Package: “ಮೊದಲೇ ಪ್ಯಾಕೇಜ್ ನೀಡಿದ್ದರೆ ವಿಕ್ರಂಗೌಡ ಪ್ರಾಣ ಉಳಿಯುತ್ತಿತ್ತು’: ಸಹೋದರ
Belagavi: ಜೀವಂತ ವ್ಯಕ್ತಿ ಹೆಸರಿನಲ್ಲಿ ಮರಣ ಪ್ರಮಾಣ ಪತ್ರ ನೀಡಿದ ಅಧಿಕಾರಿಗಳು!
Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ
Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.