ವಿಶ್ವದ ಟಾಪ್‌-15 ಶ್ರೀಮಂತ ನಗರಗಳ ಪಟ್ಟಿಯಲ್ಲಿ ಮುಂಬಯಿ !


Team Udayavani, Feb 13, 2018, 5:03 PM IST

1202mum09mumbaiCity.jpg

ಮುಂಬಯಿ: ದೇಶದ ವಾಣಿಜ್ಯ ರಾಜಧಾನಿ ಮುಂಬಯಿ ವಿಶ್ವದ ಅಗ್ರ 15 ಶ್ರೀಮಂತ ನಗರಗಳಲ್ಲಿ ಒಂದು ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.  ಹೌದು, ನ್ಯೂ ವರ್ಲ್ಡ್ ವೆಲ್ತ್‌ ವರದಿಯ ಪ್ರಕಾರ, ಮುಂಬಯಿ ಒಟ್ಟು 950 ಬಿಲಿಯನ್‌ ಡಾಲರ್‌ (ಸುಮಾರು 61 ಲಕ್ಷ ಕೋಟಿ ರೂಪಾಯಿ)ಸಂಪತ್ತಿನೊಂದಿಗೆ ವಿಶ್ವದ ಅತ್ಯಂತ ಶ್ರೀಮಂತ ನಗರಗಳ ಪಟ್ಟಿಯಲ್ಲಿ 12 ನೇ ಸ್ಥಾನವನ್ನು ಪಡೆದಿದೆ. ಇದರೊಂದಿಗೆ ಮುಂಬಯಿ ನಗರವು ಟೊರೊಂಟೊ ಮತ್ತು ಪ್ಯಾರಿಸ್‌ನಂತಹ ನಗರಗಳನ್ನು ಹಿಂದಿಕ್ಕಿದೆ. ವಿಶೇಷವೆಂದರೆ, ನ್ಯೂ ವರ್ಲ್ಡ್ ವೆಲ್‌§ ಇತ್ತೀಚಿನ ವರದಿಯೊಂದರಲ್ಲಿ ಭಾರತ ಕೂಡ ವಿಶ್ವದ ಶ್ರೀಮಂತ ದೇಶಗಳ ಪಟ್ಟಿಯಲ್ಲಿ 6ನೇ ಸ್ಥಾನವನ್ನು ಪಡೆದುಕೊಂಡಿತ್ತು.

ವಿಶ್ವದ ಶ್ರೀಮಂತ ನಗರಗಳ ಈ ಪಟ್ಟಿಯಲ್ಲಿ ಅಮೆರಿಕದ ನ್ಯೂಯಾರ್ಕ್‌ ನಗರವು 3 ಟ್ರಿಲಿಯನ್‌ ಡಾಲರ್‌ (ಸುಮಾರು 193 ಲಕ್ಷ ಕೋ.ರೂ.)ಸಂಪತ್ತಿನೊಂದಿಗೆ ಮೊದಲ ಸ್ಥಾನವನ್ನು ಪಡೆದಿದೆ. ಇದರ  ಬಳಿಕ 173 ಲಕ್ಷ ಕೋ.ರೂ. ಆಸ್ತಿಯೊಂದಿಗೆ ಲಂಡನ್‌ ಎರಡನೇ ಹಾಗೂ 161 ಲಕ್ಷ ಕೋ.ರೂ. ಆಸ್ತಿಯೊಂದಿಗೆ ಟೋಕಿಯೋ ಮೂರನೇ ಸ್ಥಾನದಲ್ಲಿದೆ. ಸ್ಯಾನ್‌ ಫ್ರಾನ್ಸಿಸ್ಕೋ (147 ಲಕ್ಷ ಕೋ.ರೂ.) ಮತ್ತು ಬೀಜಿಂಗ್‌ (141 ಲಕ್ಷ ಕೋ.ರೂ.)ನಗರಗಳು ಪಟ್ಟಿಯಲ್ಲಿ ಕ್ರಮವಾಗಿ 4ನೇ ಮತ್ತು 5ನೇ ಸ್ಥಾನದಲ್ಲಿವೆ.

ಮುಂಬಯಿಯ ಒಟ್ಟು ಸಂಪತ್ತು 950 ಬಿಲಿಯನ್‌ ಡಾಲರ್‌(ಸುಮಾರು 61 ಲಕ್ಷ ಕೋ.ರೂ.)  ಆಗಿದೆ. ಮುಂಬಯಿ ಭಾರತದ ಆರ್ಥಿಕ ಕೇಂದ್ರವಾಗಿದೆ. ಇದಲ್ಲದೆ ವಿಶ್ವದ  12ನೇ ಅತಿದೊಡ್ಡ ಸ್ಟಾಕ್‌ ಎಕ್ಸ್‌ಚೇಂಜ್‌ ಎಂಬ ಹೆಗ್ಗಳಿಕೆ ಪಾತ್ರವಾಗಿರುವ ಬಾಂಬೇ ಸ್ಟಾಕ್‌ ಎಕ್ಸ್‌ಚೆಂಜ್‌ ಕೂಡ ನಗರದಲ್ಲಿದೆ. ನಗರದಲ್ಲಿ ವಾಣಿಜ್ಯ ಸೇವೆಗಳು, ರಿಯಲ್‌ ಎಸ್ಟೇಟ್‌ ಮತ್ತು ಮೀಡಿಯಾ ಇಂಡಸ್ಟ್ರಿಗಳಿವೆ ಎಂದು ಮುಂಬಯಿ ಮಹಾನಗರದ ಬಗ್ಗೆ ನ್ಯೂ ವರ್ಲ್ಡ್ ವೆಲ್ತ್‌ ವರದಿಯಲ್ಲಿ ವಿವರಿಸಲಾಗಿದೆ.

ಏನಿದು ಒಟ್ಟು ಸಂಪತ್ತು ?

ಯಾವುದೇ ದೇಶ ಅಥವಾ ನಗರದಲ್ಲಿ ವಾಸಿಸುವ ಜನರ ಒಟ್ಟು ಖಾಸಗಿ ಸಂಪತ್ತು ಆ ದೇಶ ಅಥವಾ ನಗರದ ಒಟ್ಟು ಸಂಪತ್ತು ಆಗಿರುತ್ತದೆ. ಇದರಲ್ಲಿ ಜನರ ಆಸ್ತಿ, ನಗದು, ಷೇರು, ಬಿಜ್‌ನೆಸ್‌ ಇಂಟ್ರೆಸ್ಟ್‌ ಅನ್ನು ಸೇರಿಸಿಕೊಳ್ಳಲಾಗುತ್ತದೆ. ಆದರೆ, ಈ ವರದಿಯಲ್ಲಿ ಸರಕಾರಿ ನಿಧಿಗಳನ್ನು ಸೇರಿಸಿಕೊಳ್ಳಲಾಗಿಲ್ಲ ಎಂದು ನ್ಯೂ ವರ್ಲ್ಡ್ ವೆಲ್‌§ ತನ್ನ ವರದಿಯಲ್ಲಿ ಸ್ಪಷ್ಟಪಡಿಸಿದೆ.

ಮುಂಬಯಿಯಲ್ಲಿ 28 ಶತಕೋಟ್ಯಾಧಿಪತಿಗಳು
ಶತಕೋಟ್ಯಾಧಿಪತಿಗಳ ವಿಷಯದಲ್ಲೂ ಮುಂಬಯಿ ವಿಶ್ವದ ಅಗ್ರ 10 ನಗರಗಳಲ್ಲಿ ಒಂದಾಗಿದೆ. ಮುಂಬಯಿಯಲ್ಲಿ ಒಟ್ಟು 28 ಶತಕೋಟ್ಯಾಧಿಪತಿಗಳು ಇದ್ದಾರೆ. ಅಲ್ಲದೆ, ಮುಂಬಯಿ ರಾಷ್ಟ್ರದ ಅತ್ಯಂತ ಶ್ರೀಮಂತ ನಗರ ಎಂಬ ಹೆಗ್ಗಳಿಕೆಗೂ ಪಾತ್ರವಾಗಿದೆ.
 

ಟಾಪ್ ನ್ಯೂಸ್

NITK-Padavi-pradana

Surathkal: ಎಐಯಿಂದ ಉದ್ಯೋಗ, ನಂಬಿಕೆಗೆ ಕುತ್ತು: ಪ್ರೊ| ಗೋವಿಂದನ್‌ ರಂಗರಾಜನ್‌

Nalin-Kateel

Result: ಮಹಾರಾಷ್ಟ್ರದಲ್ಲಿ ಎನ್‌ಡಿಎಗೆ ಜಯಭೇರಿ; ಮೋದಿ ನಾಯಕತ್ವಕ್ಕೆ ಮನ್ನಣೆ: ನಳಿನ್‌

Padmaraj–JPoojary

Mangaluru: ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್‌

Sanjeev-Matandoor

Putturu: ಬಜೆಟ್‌ನಲ್ಲಿ ಹೊರಡಿಸಿರುವ ಆದೇಶ ಅನುಷ್ಠಾನಿಸದೆ ಕೃಷಿಕರಿಗೆ ವಂಚನೆ: ಮಠಂದೂರು

Sri-Home-minister

Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್‌ ಶಾ ಭೇಟಿ

Udupi-DC-Dr.-Vidya-kumari

Udupi: ಮಂಗನಕಾಯಿಲೆ ಪ್ರಕರಣ: ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಿ: ಡಿಸಿ ಡಾ.ವಿದ್ಯಾಕುಮಾರಿ

adani (2)

Adani; 2,200 ಕೋಟಿ ರೂ. ಲಂಚ: ಅಮೆರಿಕ ಸಮನ್ಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

adani (2)

Adani; 2,200 ಕೋಟಿ ರೂ. ಲಂಚ: ಅಮೆರಿಕ ಸಮನ್ಸ್‌

Modi-Tour

Tour: ಮೂರು ದೇಶ ಪ್ರವಾಸ: ಪ್ರಧಾನಿ ಮೋದಿ 31 ದ್ವಿಪಕ್ಷೀಯ ಸಭೆಗಳು!

bjp-congress

Assembly bypolls; 14 ರಾಜ್ಯಗಳ 48 ಸ್ಥಾನಗಳ ಗೆಲುವಿನ ವಿವರ ಇಲ್ಲಿದೆ: ಎನ್‌ಡಿಎ ಮೇಲುಗೈ

BJP FLAG

Maharashtra ರಾಜ್ಯಸಭೆ ಬಹುಮತದತ್ತ ಬಿಜೆಪಿ ಚಿತ್ತ

1-ree

Maharashtra; ಪತಿಗೆ ಸೋಲು: ಮತಯಂತ್ರಗಳ ಕುರಿತು ಆಪಾದಿಸಿದ ನಟಿ ಸ್ವರಾ ಭಾಸ್ಕರ್

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

NITK-Padavi-pradana

Surathkal: ಎಐಯಿಂದ ಉದ್ಯೋಗ, ನಂಬಿಕೆಗೆ ಕುತ್ತು: ಪ್ರೊ| ಗೋವಿಂದನ್‌ ರಂಗರಾಜನ್‌

Nalin-Kateel

Result: ಮಹಾರಾಷ್ಟ್ರದಲ್ಲಿ ಎನ್‌ಡಿಎಗೆ ಜಯಭೇರಿ; ಮೋದಿ ನಾಯಕತ್ವಕ್ಕೆ ಮನ್ನಣೆ: ನಳಿನ್‌

Padmaraj–JPoojary

Mangaluru: ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್‌

Sanjeev-Matandoor

Putturu: ಬಜೆಟ್‌ನಲ್ಲಿ ಹೊರಡಿಸಿರುವ ಆದೇಶ ಅನುಷ್ಠಾನಿಸದೆ ಕೃಷಿಕರಿಗೆ ವಂಚನೆ: ಮಠಂದೂರು

Sri-Home-minister

Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್‌ ಶಾ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.