ಮಹಾಮಳೆಗೆ ಮುಂಬೈ ಮಹಾನಗರಿ ತತ್ತರ; ಜನಜೀವನ ಅಸ್ತವ್ಯಸ್ತ
Team Udayavani, Aug 29, 2017, 2:23 PM IST
ಮುಂಬೈ: ಭಾರೀ ಮಳೆಗೆ ಮುಂಬೈ ಮಹಾನಗರಿ ತತ್ತರಿಹೋಗಿದ್ದು, ತಗ್ಗುಪ್ರದೇಶಗಳಲ್ಲಿ ಪ್ರವಾಹದ ರೀತಿಯಲ್ಲಿ ನೀರು ತುಂಬಿಕೊಂಡಿದ್ದು ಹಲವು ಭಾಗಗಳಲ್ಲಿ ರೈಲು, ಬಸ್ ಸಂಚಾರ ಸ್ಥಗಿತಗೊಂಡಿದೆ. ಅಲ್ಲದೇ ಜನಜೀವನ ಅಸ್ತವ್ಯಸ್ತಗೊಂಡಿದೆ.
ಎಎನ್ಐ ವರದಿ ಪ್ರಕಾರ, ಕಳೆದ 2 ದಿನಗಳಿಂದ ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಹಲವು ಸ್ಥಳೀಯ ರೈಲು ಸಂಚಾರ ಸ್ಥಗಿತಗೊಂಡಿದೆ. ಅಷ್ಟೇ ಅಲ್ಲದೇ ಉತ್ತರ ಕೊಂಕಣ ಪ್ರದೇಶದಲ್ಲಿ ಭಾರೀ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ಕೂಡಾ ನೀಡಿದೆ.
2005ರ ಜುಲೈ 26ರ ನಂತರ ಮುಂಬೈ ಮಹಾನಗರಿಯಲ್ಲಿ ಸುರಿದ ಮಹಾ ಮಳೆ ಇದಾಗಿದೆ ಎಂದು ಹವಾಮಾನ ಇಲಾಖೆಯ ಅಧಿಕಾರಿಗಳು ಅಂದಾಜಿಸಿದ್ದಾರೆ. ಚಂಡಮಾರುತದಂತಹ ಹವಾಮಾನ ರೀತಿ ಇದೆ ಎಂದು ಕೈಗಾರಿಕೋದ್ಯಮಿ ಆನಂದ್ ಮಹೀಂದ್ರ ತಿಳಿಸಿದ್ದಾರೆ.
ಮಳೆಯಿಂದಾಗಿ ಟ್ರಾಫಿಕ್ ಜಾಮ್ ಸಂಭವಿಸಿದ್ದು, ಕೆಲವೆಡೆ ತಗ್ಗುಪ್ರದೇಶಗಳಲ್ಲಿ ನೀರು ತುಂಬಿಕೊಂಡಿದ್ದರಿಂದ ಜನರು ಪರದಾಡುವಂತಾಗಿದೆ ಎಂದು ವರದಿ ತಿಳಿಸಿದೆ. ಮಂಗಳವಾರ ಬೆಳಗ್ಗೆಯಿಂದ ಮಳೆ ಜತೆ ಬಲವಾದ ಗಾಳಿಯೂ ಬೀಸುತ್ತಿದೆ. 4.30ರ ತನಕ ಆಳೆತ್ತರದ ಅಲೆಗಳ ಹೊಡೆತ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಅಧಿಕಾರಿಗಳು ವಿವರಿಸಿದ್ದಾರೆ.
Mumbai Stay Safe! Help people in need! Lets show everyone the spirit of Mumbai #MumbaiRains pic.twitter.com/812yNx3fX0
— Wassup Mumbai (@Wassup_Mumbai) August 29, 2017
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್
Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ
New Year: ಸ್ನೇಹಿತರ ಮನೆಗೆ ಪಾರ್ಟಿಗೆಂದು ಹೋದ ಬಾಲಕಿಯ ಮೇಲೆ ಅತ್ಯಾ*ಚಾರ
Miraculous; ಎರಡು ಬಸ್ ಗಳ ಮಧ್ಯ ಸಿಲುಕಿದರೂ ವ್ಯಕ್ತಿ ಬಚಾವ್: ವೈರಲ್ ವಿಡಿಯೋ
China; ಭಾರತದ ಭೂಭಾಗದಲ್ಲಿ ಎರಡು ಕೌಂಟಿಗಳು: ಕೇಂದ್ರದಿಂದ ಬಲವಾದ ಪ್ರತಿಭಟನೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.