100 ಕೋಟಿ ಲಂಚ: ಸಚಿವ ದೇಶ್‌ಮುಖ್‌ಗೆ ಸಂಕಷ್ಟ
Team Udayavani, Mar 21, 2021, 7:40 AM IST
ಮುಂಬಯಿ/ಹೊಸದಿಲ್ಲಿ: ಬಂಧಿತ ಪೊಲೀಸ್ ಅಧಿಕಾರಿ ಸಚಿನ್ ವಾಜೆ ಅವರಿಗೆ ಮಹಾರಾಷ್ಟ್ರ ಗೃಹ ಸಚಿವ ಅನಿಲ್ ದೇಶ್‌ಮುಖ್ ಪ್ರತೀ ತಿಂಗಳು 100 ಕೋಟಿ ರೂ. ಸಂಗ್ರಹಿಸುವ ಗುರಿ ನೀಡಿದ್ದರು. ಹೀಗೆಂದು ಎತ್ತಂಗಡಿಯಾಗಿರುವ ಮುಂಬಯಿ ಪೊಲೀಸ್ ಆಯುಕ್ತ ಪರಂಬೀರ್ ಸಿಂಗ್ ಶನಿವಾರ ಆರೋಪಿಸಿದ್ದಾರೆ.
ಈ ಬಗ್ಗೆ ಮುಖ್ಯಮಂತ್ರಿ ಉದ್ಧವ್ ಠಾಕ್ರೆಗೆ ಪತ್ರವನ್ನೂ ಬರೆದಿದ್ದಾರೆ. ಈ ಗುರಿ ಸಾಧಿಸಲು 1,750 ಬಾರ್ ಮತ್ತು ರೆಸ್ಟೋರೆಂಟ್‌ಗಳಿಂದ ತಲಾ 2-3 ಲಕ್ಷ ರೂ. ಪಡೆದುಕೊಂಡರೆ 100 ಕೋಟಿ ರೂ. ಸಂಗ್ರಹಿಸಬಹುದು ಎಂದು ತಿಳಿಸಿದ್ದರು. ಈ ಮೂಲಕ 50 ಕೋಟಿ ರೂ.ಸಂಗ್ರಹಿಸಬಹುದು. ಉಳಿದ 50 ಕೋಟಿ ರೂ. ಮೊತ್ತವನ್ನು ಇತರ ಮೂಲಗಳಿಂದ ಪಡೆಯಬಹುದು ಸಚಿವರು ಸೂಚಿಸಿದ್ದರು ಎಂದು ದೂರಿದ್ದಾರೆ. ಈ ಬೆಳವಣಿಗೆ ಹಿನ್ನೆಲೆಯಲ್ಲಿ ಮಹಾರಾಷ್ಟ್ರ ಗೃಹ ಸಚಿವ ಅನಿಲ್ ದೇಶ್‌ಮುಖ್‌ರನ್ನು ವಜಾ ಮಾಡುವ ಸಾಧ್ಯತೆಗಳಿವೆ ಎಂದು ಹಲವು ಆಂಗ್ಲ ಸುದ್ದಿವಾಹಿನಿಗಳು ವರದಿ ಮಾಡಿವೆ.
ಉದ್ಯಮಿ ಮುಕೇಶ್ ಅಂಬಾನಿ ನಿವಾಸದ ಮುಂದೆ ಸ್ಫೋಟಕ ಇರಿಸಿದ ಪ್ರಕರಣದ ತನಿಖೆಯಲ್ಲಿ ನಿರೀಕ್ಷಿತ ಸಾಧನೆ ಮಾಡದ್ದಕ್ಕಾಗಿ ಸಿಂಗ್ ಅವರನ್ನು ಇತ್ತೀಚೆಗೆ ವರ್ಗಾಯಿಸಲಾಗಿತ್ತು. ಈ ಪ್ರಕರಣದಿಂದಾಗಿ ಎಂವಿಎ ಸರಕಾರಕ್ಕೆ ಮತ್ತಷ್ಟು ಸಮಸ್ಯೆ ತಲೆದೋರಿದಂತಾಗಿದೆ. ಈ ಬಗ್ಗೆ ಟ್ವೀಟ್ ಮೂಲಕ ಪ್ರತಿಕ್ರಿಯೆ ನೀಡಿದ ಸಚಿವ ಅನಿಲ್ ದೇಶ್‌ಮುಖ್, ಪ್ರಕರಣದಲ್ಲಿ ಸಿಂಗ್ ಶಾಮೀಲಾಗಿದ್ದಾರೆ. ಅದು ಅವರನ್ನು ಬಾಧಿಸಬಹುದು. ಕಾನೂನು ಕ್ರಮಗಳಿಂದ ರಕ್ಷಿಸಲು ಇಂಥ ಆರೋಪ ಮಾಡುತ್ತಿದ್ದಾರೆ ಎಂದರು. ಇದೇ ವೇಳೆ, ಥಾಣೆಯ ಉದ್ಯಮಿ ಮಾನ್ಸುಖ್ ಹಿರೆನ್ ಸಾವಿನ ತನಿಖೆಯ ಹೊಣೆಯನ್ನು ಕೇಂದ್ರ ಸರಕಾರ ಎನ್‌ಐಎಗೆ ವಹಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನನ್ನ ಮಾರ್ಗದರ್ಶಕರನ್ನು ಕಳೆದುಕೊಂಡಿದ್ದೇನೆ… ಮಾಜಿ ಪ್ರಧಾನಿ ನಿಧನಕ್ಕೆ ರಾಹುಲ್ ಸಂತಾಪ
Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ
Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ
Accidental Prime Minister: ದ ಮೇಕಿಂಗ್ ಆ್ಯಂಡ್ ಅನ್ಮೇಕಿಂಗ್ ಆಫ್ ಡಾ.ಸಿಂಗ್
Tribute Dr.Singh: ಡಾ.ಸಿಂಗ್ ಅವಧಿಯಲ್ಲಿ ಭಾರತ-ಅಮೆರಿಕ ನಡುವೆ ಅಣ್ವಸ್ತ್ರ ಒಪ್ಪಂದ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಆನಂದಪುರ: ಬೆಳ್ಳಂಬೆಳಗ್ಗೆ ತೋಟಕ್ಕೆ ಕಾಡಾನೆಗಳ ಲಗ್ಗೆ… ಗ್ರಾಮಸ್ಥರಲ್ಲಿ ಆತಂಕ
ಕೋಳಿ ಅಂಕಕ್ಕೆ ಪೊಲೀಸ್ ದಾಳಿ: ಗುರಿಕಾರರಿಂದ ವ್ಯಾಘ್ರ ಚಾಮುಂಡಿ ದೈವಕ್ಕೆ ಮೊರೆ
National Mourning: ಮಂಗಳೂರಿನ ಬೀಚ್ ಉತ್ಸವ ಮುಂದೂಡಿಕೆ
Clown Kohli: ವಿರಾಟ್ ಕೊಹ್ಲಿಗೆ ಅವಮಾನ ಮಾಡಿದ ಆಸೀಸ್ ಮಾಧ್ಯಮಗಳು!
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.