ಮಹಾರಾಷ್ಟ್ರದಲ್ಲಿ ಕೊರೊನಾ ಕಳವಳ: ಎಲ್ಲಾ ರೀತಿಯ ಪ್ರವಾಸಕ್ಕೆ ನಿಷೇಧ
Team Udayavani, Mar 15, 2020, 4:51 PM IST
ಮುಂಬಯಿ: ಮಹಾರಾಷ್ಟ್ರದಲ್ಲಿ ಕೊರೊನಾ ವೈರಸ್ ಸೋಂಕಿತರ ಪ್ರಕರಣಗಳು ಹೆಚ್ಚಾಗುತ್ತಿರುವಂತೆ ಇದೀಗ ಮುಂಬಯಿ ಪೊಲೀಸರು ಹೊಸ ಪ್ರವಾಸಿ ಮಾರ್ಗಸೂಚಿ ಆದೇಶವನ್ನು ಪ್ರಕಟಿಸಿದ್ದಾರೆ.
ಈ ಆದೇಶದ ಪ್ರಕಾರ ಯಾವುದೇ ವ್ಯಕ್ತಿಗಳು ಅಥವಾ ಗುಂಪುಗಳು ಖಾಸಗಿ ಏಜೆನ್ಸಿಗಳ ಮೂಲಕ ವಿದೇಶಿ ಅಥವಾ ಸ್ಥಳೀಯ ಪ್ರವಾಸಿ ಸ್ಥಳಗಳಿಗೆ ಪ್ರವಾಸ ಕೈಗೊಳ್ಳುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂಬ ಮಾಹಿತಿಯನ್ನು ಎ.ಎನ್.ಐ. ಸುದ್ದಿಸಂಸ್ಥೆ ವರದಿ ಮಾಡಿದೆ.
ಯಾವುದೇ ರೀತಿಯ ತುರ್ತು ಪರಿಸ್ಥಿತಿಗಳಲ್ಲಿ ವಿದೇಶಗಳಿಗೆ ಅಥವಾ ದೇಶದ ಇನ್ಯಾವುದೇ ಬಾಗಗಳಿಗೇ ಪ್ರಯಾಣಿಸಲೇಬೇಕಾದ ಸ್ಥಿತಿಯಿದ್ದಲ್ಲಿ ಮುಂಬಯಿ ಮಹಾನಗರದ ಪೊಲೀಸ್ ಕಮಿಷನರ್ ಕಛೇರಿಯಿಂದ ಅನುಮತಿಯನ್ನು ಪಡೆದುಕೊಂಡ ಬಳಿಕ ಪ್ರಯಾಣಿಸಬಹುದಾಗಿರುತ್ತದೆ ಮತ್ತಿದು ಖಾಸಗಿ ಪ್ರವಾಸಿ ಏಜೆನ್ಸಿಗಳಿಗೂ ಅನ್ವಯಿಸಲಿದೆ ಎಂದು ಈ ಆದೇಶದಲ್ಲಿ ತಿಳಿಸಲಾಗಿದೆ.
ಇನ್ನು ರಾಜ್ಯದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪೊಲೀಸ್ ಸಿಬ್ಬಂದಿಗಳು ಕೈಕುಲುವುದನ್ನು ಬಿಟ್ಟು ನಮಸ್ಕಾರ ಮಾಡುವ ಮೂಲಕ ಪರಸ್ಪರ ಗೌರವ ವಿನಿಮಯ ಮಾಡಿಕೊಳ್ಳಬೇಕೆಂದು ಈ ಮೊದಲು ಎಲ್ಲಾ ಸಿಬ್ಬಂದಿಗಳಿಗೂ ಸೂಚನೆ ನೀಡಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.