ಸಾಂಕ್ರಾಮಿಕ ರೋಗ ಆಹ್ವಾನಿಸುತ್ತಿರುವ ಮುಂಬಯಿ ನಿವಾಸಿಗರು
Team Udayavani, May 1, 2019, 12:29 PM IST
ಮುಂಬಯಿ:ಮುಂಬಯಿ ಮಹಾನಗರ ಪಾಲಿಕೆಯ ಆರೋಗ್ಯ ವಿಭಾಗದಿಂದ ಸಾಂಕ್ರಾಮಿಕ ರೋಗಗಳನ್ನು ತಡೆಯಲು ಪ್ರಯತ್ನ ನಡೆಸುತ್ತಿದ್ದರೂ ಮುಂಬಯಿ ನಿವಾಸಿಗರು ಮಾತ್ರ ತಮ್ಮ ಸ್ವಂತ ಮನೆಯೊಳಗೆ ಸಾಂಕ್ರಾಮಿಕ ರೋಗ ಹರಡುವ ಸೊಳ್ಳೆಗಳ ಉತ್ಪತ್ತಿಗೆ ಎಡೆಮಾಡಿಕೊಡುತ್ತಿರುವುದು ಕಂಡುಬರುತ್ತಿದೆ.
ಮಹಾನಗರ ಪಾಲಿಕೆಯ ಕೀಟನಾಶಕ ವಿಭಾಗದ ವತಿಯಿಂದ ಕಳೆದ ಮೂರು ತಿಂಗಳಲ್ಲಿ ಕಟ್ಟಡಗಳು, ಮನೆ ಹಾಗೂ ಜೋಪಡಿ ಸೇರಿದಂತೆ ಸುಮಾರು 4ಲಕ್ಷಕ್ಕಿಂತ ಅಧಿಕ ಕಡೆಗಳಲ್ಲಿ ತಪಾಸಣೆ ನಡೆಸಲಾಯಿತು. ಇದರಲ್ಲಿ 606 ಮನೆಗಳಲ್ಲಿ ಮಲೇರಿಯಾ, 3,102 ಮನೆಗಳಲ್ಲಿ ಡೆಂಗ್ಯೂ ಹಾಗೂ 2,714 ಕಡೆಗಳಲ್ಲಿ ಡೆಂಗ್ಯೂ ಹಾಗೂ ಮಲೇರಿಯಾ ಸೊಳ್ಳೆಗಳ ಉತ್ಪತ್ತಿ ಲಕ್ಷಣ ಪತ್ತೆಯಾಗಿದೆ. ಅಸ್ವತ್ಛತೆ ಮತ್ತು ನಿರ್ಲಕ್ಷ ಮಾಡಿದ ಹಿನ್ನೆಲೆಯಲ್ಲಿ ಎಲ್ಲ ನಿವಾಸಿಗರಿಗೆ ಮಹಾನಗರ ಪಾಲಿಕೆಯ ವತಿಯಿಂದ ನೋಟಿಸ್ ನೀಡಲಾಗಿದೆ. ಮಹಾನಗರ ಪಾಲಿಕೆಯ ವತಿಯಿಂದ ಪ್ರತಿದಿನ ಸುಮಾರು 30 ಮಂದಿಗೆ ನೋಟಿಸ್ ಜಾರಿಗೊಳಿಸಲಾಗುತ್ತಿದೆ ಎಂದು ತಿಳಿಸಿದೆ.
ಸುತ್ತಮುತ್ತಲ ಪರಿಸರದಲ್ಲಿ ನೀರು ಸಂಗ್ರಹ ಮತ್ತು ಸ್ವತ್ಛತೆ ಮಾಡದೆ ಇರುವುದರಿಂದ ಡೆಂಗ್ಯೂ ಮತ್ತು ಮಲೇರಿಯಾ ಸೊಳ್ಳೆಗಳು ಉತ್ಪತಿ ಯಾಗುತ್ತದೆ ಎಂದು ಜನಜಾಗೃತೆ ಮೂಡಿಸುವ ಕಾರ್ಯ ಮುಂಬಯಿ ಮಹಾನಗರ ಪಾಲಿಕೆ ಮಾಡುತ್ತಾ ಬಂದಿದೆೆ. ಈ ಜನ ಜಾಗೃತಿ ಕಾರ್ಯದ ವೇಳೆ ಮನೆಗಳಲ್ಲಿ ಸಂಗ್ರಹಿಸಿದ ನೀರು ಮತ್ತು ಪರಿಸರದ ಸ್ವಚ್ಚವಾಗಿರುಸುವಂತೆ ಮನಪಾ ಆಗಾಗ ಎಚ್ಚರಿಕೆ ನೀಡುತ್ತಾ ಬಂದಿದೆ.
ಮಹಾನಗರ ಪಾಲಿಕೆಯ ಸ್ವತ್ಛತೆ ಕಾರ್ಯಾಚರಣೆ ಆರಂಭಿಸಿದ್ದು, ಮನೆಗಳಲ್ಲಿ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಸಂಗ್ರಹಿಸಿದ ನೀರಿನಲ್ಲಿ ಸೊಳ್ಳೆಗಳ ಉತ್ಪತಿ ಲಕ್ಷಣ ಕಂಡು ಬಂದರೆ ಅವುಗಳನ್ನು ನಷ್ಟಗೊಳಿಸುವ ಕಾರ್ಯ ನಡೆಸಲಾಗುತ್ತಿದೆ. ಮಳೆಗಾಲಕ್ಕೆ ಕೆಲವು ದಿನಗಳು ಬಾಕಿ ಇರುವಾಗ ಮಹಾನಗರ ಪಾಲಿಕೆಯ ಕೀಟನಾಶಕ ವಿಭಾಗವು ಕಾರ್ಯಾಚರಣೆ ನಡೆಸಲು ಮುಂದಾಗಿದೆ. ಮನೆಗಳಲ್ಲಿ ಸಂಗ್ರಹಿಸುವ ನೀರನ್ನು ಆಗಾಗ ಸ್ವತ್ಛತೆ ನಡೆಸಬೇಕು ಇಲ್ಲದೆ ಹೋದಲ್ಲಿ ಅದರಲ್ಲಿ ಸೊಳ್ಳೆ ಉತ್ಪತಿ ಅಂಶಗಳು ಕಂಡುಬರುತ್ತವೆ ಎಂದು ಮನಪಾ ಆಗಾಗ ಎಚ್ಚರಿಗೆ ನೀಡುತ್ತಾ ಬಂದಿದೆ. ಆದರೆ ಮುಂಬಯಿ ನಿವಾಸಿಗರು ಸ್ವತಃ ಸಾಂಕ್ರಾಮಿಕ ರೋಗಗಳಿಗೆ ಎಡೆಮಾಡಿಕೊಡುತ್ತಿದ್ದಾರೆ ಎನ್ನಲಾಗಿದೆ.
ನೋಟಿಸ್ ಜಾರಿ
ಮುಂಬಯಿ ನಗರದ ಮನೆಗಳಲ್ಲಿ ಸಂಗ್ರಹಿಸುವ ನೀರು ಮತ್ತು ಕಟ್ಟಡಗಳ ಸ್ವತ್ಛತೆಯ ಕುರಿತು ಮಾಹಿತಿ ನೀಡುತ್ತಾ ಬಂದಿದ್ದ, ಮಹಾನಗರಪಾಲಿಕೆ ಕಳೆದ ಮೂರು ತಿಂಗಳಲ್ಲಿ ಸುಮಾರು 2,714 ಮನೆಗಳಲ್ಲಿ ಸಂಗ್ರಹಿಸಿದ ನೀರಿನಲ್ಲಿ ಮಲೇರಿಯಾ ಮತ್ತು ಡೆಂಗ್ಯೂ ರೋಗದ ಉತ್ಪತಿ ಲಕ್ಷಣ ಪತ್ತೆಹಚ್ಚಿವೆ. ಮನಪಾದ ಕೀಟಾನಾಶಕ ವಿಭಾಗದ ಕಾರ್ಮಿಕರು ನೀಡುವ ಮಾಹಿತಿಯನ್ನು ನಿರ್ಲಕ್ಷಿಸಿದ ಜನರ ವಿರುದ್ಧ ನೋಟಿಸ್ ಜಾರಿಗೊಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Goa: ಕ್ಯಾಲಂಗುಟ್ ಬೀಚ್‌ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾ*ವು, 20 ಮಂದಿ ರಕ್ಷಣೆ
Uttar Pradesh: 6 ಪುರುಷರ ವರಿಸಿ ವಂಚಿಸಿದ ಯುವತಿಯ ಗ್ಯಾಂಗ್ ಜೈಲಿಗೆ
Road Project: ಶಿರಾಡಿ ಘಾಟ್ ಸುರಂಗ ಯೋಜನೆಗೆ ಡಿಪಿಆರ್ ರಚಿಸಿ: ಕೇಂದ್ರ ಸೂಚನೆ
Hosur ವಿಮಾನ ನಿಲ್ದಾಣಕ್ಕೆ 2 ಸ್ಥಳ ನಿಗದಿಪಡಿಸಿದ ತಮಿಳುನಾಡು
GST: ಖರೀದಿ, ಮಾರಾಟ ದರದ ವ್ಯತ್ಯಾಸಕ್ಕಷ್ಟೇ 18% ಜಿಎಸ್‌ಟಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃ*ತ್ಯು
MT Vasudevan Nair: ಮಲಯಾಳಂ ಸಾಹಿತಿ, ಜ್ಞಾನಪೀಠ ಪುರಸ್ಕೃತ ಎಂಟಿ ವಾಸುದೇವನ್ ನಾಯರ್ ನಿಧನ
Goa: ಕ್ಯಾಲಂಗುಟ್ ಬೀಚ್‌ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾ*ವು, 20 ಮಂದಿ ರಕ್ಷಣೆ
Negotiation: ಸಿ.ಟಿ.ರವಿ – ಸಚಿವೆ ಹೆಬ್ಬಾಳ್ಕರ್ ಸಂಧಾನಕ್ಕೆ ಸಭಾಪತಿ ಹೊರಟ್ಟಿ ಪ್ರಯತ್ನ?
Congress Session: ಬೆಳಗಾವಿಯಲ್ಲಿಂದು, ನಾಳೆ ಗಾಂಧಿ ಮಹಾಧಿವೇಶನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.