ಮುಂಬೈ: ನಿರ್ಭಯಾ ರೀತಿ ಅತ್ಯಾಚಾರಕ್ಕೊಳಗಾಗಿದ್ದ ಮಹಿಳೆ ಸಾವು
Team Udayavani, Sep 11, 2021, 1:32 PM IST
ಮುಂಬೈ : ಕೀಚಕರಿಂದ ಅತ್ಯಾಚಾರಕ್ಕೊಳಗಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸಂತ್ರಸ್ಥೆ ಶುಕ್ರವಾರ ರಾತ್ರಿ ಸಾವನ್ನಪ್ಪಿದ್ದಾರೆ.
ವಾಣಿಜ್ಯ ನಗರಿ ಮುಂಬೈನ ಸಾಕಿ ನಾಕಾ ಪ್ರದೇಶದಲ್ಲಿ 30 ವರ್ಷ ವಯಸ್ಸಿನ ಮಹಿಳೆ ಮೇಲೆ ಗುರುವಾರ ರಾತ್ರಿ ಸಾಮೂಹಿಕ ಅತ್ಯಾಚಾರ ನಡೆದಿತ್ತು. ಸಂತ್ರಸ್ಥೆಯ ಮೇಲೆ ಅತ್ಯಾಚಾರ ಎಸಗಿದ ದುಷ್ಕರ್ಮಿಗಳು ನಂತರ ಆಕೆಯನ್ನು ಮನಬಂದಂತೆ ಥಳಿಸಿ, ಆಕೆಯ ಖಾಸಗಿ ಭಾಗಕ್ಕೆ ರಾಡ್ ಹಾಕಿ ಮೃಗೀಯ ವರ್ತನೆ ತೋರಿದ್ದರು. ಈ ಪ್ರಕರಣ ದೆಹಲಿಯಲ್ಲಿ ನಡೆದಿದ್ದ ನಿರ್ಭಯಾ ಅತ್ಯಾಚಾರ ಪ್ರಕರಣವನ್ನು ಹೋಲುವಂತಿದೆ.
ಚಿಂತಾಜನಕ ಸ್ಥಿತಿಯಲ್ಲಿ ರಸ್ತೆ ಬದಿಯಲ್ಲಿ ಬಿದ್ದಿದ್ದ ಸಂತ್ರಸ್ಥೆಯನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ, ಚಿಕಿತ್ಸೆ ಫಲಿಸದೆ ಆಕೆ ಸಾವನ್ನಪ್ಪಿದ್ದಾರೆ.
ಇನ್ನು ಘಟನೆ ಸಂಬಂಧ ಪೊಲೀಸರು ಓರ್ವ ಆರೋಪಿಯನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದಾರೆ.
ಘಟನೆ ಕುರಿತು ವ್ಯಾಪಕ ಅಕ್ರೋಶ ವ್ಯಕ್ತವಾಗಿದೆ.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.