ಲಾಕ್ ಡೌನ್ ನಿಯಮ ಉಲ್ಲಂಘನೆ: ಮುಂಬೈ ಟ್ರಾಫಿಕ್ ಪೊಲೀಸರಿಂದ 9 ಕೋಟಿ ರೂ.ದಂಡ ವಸೂಲಿ
ಟ್ರಾಫಿಕ್ ಪೊಲೀಸರು ಲಾಕ್ ಡೌನ್ ವೇಳೆ 3,37,136 ಜನರಿಗೆ ದಂಡ ವಿಧಿಸಲಾಗಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Team Udayavani, May 14, 2020, 5:26 PM IST
Representative Image
ಮಹಾರಾಷ್ಟ್ರ: ಕೋವಿಡ್ 19 ವೈರಸ್ ತಡೆಗಟ್ಟುವ ನಿಟ್ಟಿನಲ್ಲಿ ಲಾಕ್ ಡೌನ್ ನಿರ್ಬಂಧ ಜಾರಿಯಲ್ಲಿದ್ದರೂ ಅದನ್ನು ಉಲ್ಲಂಘಿಸಿದ ವಾಹನ ಸವಾರರು ಹಾಗೂ ಸಾರ್ವಜನಿಕರಿಂದ ಮುಂಬೈ ಪೊಲೀಸರು 9 ಕೋಟಿ ರೂಪಾಯಿ ದಂಡ ವಸೂಲಿ ಮಾಡಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.
ಮಾರ್ಚ್ 23ರಿಂದ ಮೇ 12ರವರೆಗೆ ಮುಂಬೈನಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ 18 ಮಂದಿ ಸಾವನ್ನಪ್ಪಿದ್ದರು. ಮಾರ್ಚ್ 20ರಿಂದ ಮೇ 13ರವರೆಗೆ ಲಾಕ್ ಡೌನ್ ನಿಯಮ ಉಲ್ಲಂಘಿಸಿದವರಿಂದ ಚಲನ್ ನೀಡುವ ಮೂಲಕ 9 ಕೋಟಿ ರೂಪಾಯಿ ಸಂಗ್ರಹಿಸಲಾಗಿದೆ ಎಂದು ಪೊಲೀಸರು ವಿವರಿಸಿದ್ದಾರೆ.
ಲಾಕ್ ಡೌನ್ ಸಂದರ್ಭದಲ್ಲಿ ಹೆಲ್ಮೆಟ್ ಧರಿಸದ ಸುಮಾರು 73,735 ಬೈಕ್ ಸವಾರರಿಗೆ, ಸಾರ್ವಜನಿಕ ನಿಯಮ ಉಲ್ಲಂಘಿಸಿದ 36,248 ಜನರಿಗೆ, ವ್ಯಾಲಿಡ್ ಲೈಸೆನ್ಸ್ ನೀಡದ 11,611 ಮಂದಿಗೆ, ಲೈಸೆನ್ಸ್ ಇಲ್ಲದ 6,354 ಮಂದಿಯಿಂದ ದಂಡ ವಸೂಲಿ ಮಾಡಲಾಗಿದೆ ಎಂದು ಹೇಳಿದರು. ಟ್ರಾಫಿಕ್ ಪೊಲೀಸರು ಲಾಕ್ ಡೌನ್ ವೇಳೆ 3,37,136 ಜನರಿಗೆ ದಂಡ ವಿಧಿಸಲಾಗಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Allu Arjun ನಿವಾಸದಲ್ಲಿ ದಾಂಧಲೆ!; 8 ಮಂದಿ ಬಂಧನ: ಕೃತ್ಯ ಎಸಗಿದ್ದು ಯಾರು?
Vasundhara Raje ಬೆಂಗಾವಲು ವಾಹನ ಪಲ್ಟಿ; ನಾಲ್ವರು ಪೊಲೀಸರಿಗೆ ಗಾಯ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Mohan Bhagwat; ತಿಳಿವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.