Jindal; ಮಹಿಳೆಯಿಂದ ಅತ್ಯಾಚಾರ ದೂರು:ಆರೋಪ ನಿರಾಕರಿಸಿದ ಜಿಂದಾಲ್
ದುಬೈ ಸ್ಟೇಡಿಯಂನ ವಿಐಪಿ ಬಾಕ್ಸ್‌ನಲ್ಲಿ ಮೊದಲು ಭೇಟಿ....ಮದುವೆಯಾಗುವ ಭರವಸೆ
Team Udayavani, Dec 17, 2023, 8:54 PM IST
ಮುಂಬೈ: 23 ಬಿಲಿಯನ್ ಯುಎಸ್‌ಡಿ ಜೆಎಸ್‌ಡಬ್ಲ್ಯೂ ಗ್ರೂಪ್‌ನ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕ ಕೈಗಾರಿಕೋದ್ಯಮಿ ಸಜ್ಜನ್ ಜಿಂದಾಲ್ ತನ್ನನ್ನು ಮದುವೆಯಾಗುವುದಾಗಿ ಭರವಸೆ ನೀಡಿ ತನ್ನ ಮೇಲೆ ಅತ್ಯಾಚಾರವೆಸಗಿದ್ದಾರೆ ಎಂದು 30 ವರ್ಷದ ಮಹಿಳೆಯೊಬ್ಬರು ಆರೋಪಿಸಿದ್ದಾರೆ.
ಸಾಮಾಜಿಕ ಮಾಧ್ಯಮದಲ್ಲಿ ತನ್ನನ್ನು ನಟಿ ಎಂದಿರುವ ಮುಂಬೈ ನಿವಾಸಿ ಮಹಿಳೆ, ಕೆಲವು ವರ್ಷಗಳ ಹಿಂದೆ ದುಬೈನಲ್ಲಿ ನಡೆದ ಕ್ರಿಕೆಟ್ ಪಂದ್ಯದಲ್ಲಿ ಜಿಂದಾಲ್ (64) ಅವರನ್ನು ಭೇಟಿಯಾಗಿ ಅದು ಸ್ನೇಹಕ್ಕೆ ಕಾರಣವಾಯಿತು.ಈ ವರ್ಷದ ಜನವರಿ 23 ರಂದು ಜೆಎಸ್‌ಡಬ್ಲ್ಯು ಗ್ರೂಪ್ ಪ್ರಧಾನ ಕಚೇರಿಯಲ್ಲಿ ಲೈಂಗಿಕ ದೌರ್ಜನ್ಯ ನಡೆದಿದೆ, ಕೈಗಾರಿಕೋದ್ಯಮಿ ತನ್ನನ್ನು ಮದುವೆಯಾಗುವುದಾಗಿ ಭರವಸೆ ನೀಡಿದ್ದರು ಎಂದು ದೂರು ದಾಖಲಿಸಿದ್ದಾರೆ.
ಫೆಬ್ರವರಿ 16 ರಂದು ಪೊಲೀಸರನ್ನು ಸಂಪರ್ಕಿಸಿದ್ದು, ಡಿಸೆಂಬರ್ 13 ರಂದು ಮುಂಬೈನ BKC ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಿದ್ದಾರೆ.
ಕೈಗಾರಿಕೋದ್ಯಮಿ ಜಿಂದಾಲ್ ಅವರು ಭಾನುವಾರ ಸಂಜೆ ಹೇಳಿಕೆ ನೀಡಿದ್ದು, ಆರೋಪಗಳು ಸುಳ್ಳು ಮತ್ತು ಆಧಾರರಹಿತ. ತನಿಖೆಯ ಉದ್ದಕ್ಕೂ ಸಂಪೂರ್ಣ ಸಹಕಾರ ನೀಡಲು ಬದ್ಧನಾಗಿರುತ್ತೇನೆ. ತನಿಖೆ ನಡೆಯುತ್ತಿರುವುದರಿಂದ, ಈ ಹಂತದಲ್ಲಿ ಹೆಚ್ಚಿನ ಪ್ರತಿಕ್ರಿಯೆ ನೀಡುವುದಿಲ್ಲ. ಕುಟುಂಬದ ಗೌಪ್ಯತೆಯನ್ನು ಗೌರವಿಸುವಂತೆ ನಾವು ದಯೆಯಿಂದ ವಿನಂತಿಸುತ್ತೇವೆ” ಎಂದು ಹೇಳಿದ್ದಾರೆ.
ಎಫ್‌ಐಆರ್‌ನಲ್ಲಿ ಮಹಿಳೆ, ದುಬೈ ಸ್ಟೇಡಿಯಂನ ವಿಐಪಿ ಬಾಕ್ಸ್‌ನಲ್ಲಿ ಜಿಂದಾಲ್ ಅವರನ್ನು ಮೊದಲು ಭೇಟಿಯಾದೆ. ಅಲ್ಲಿ ಅವರು ಸಂಪರ್ಕ ಸಂಖ್ಯೆಗಳನ್ನು ವಿನಿಮಯ ಮಾಡಿಕೊಂಡರು, ನಂತರ ತಾನು ಜಿಂದಾಲ್‌ರನ್ನು ಉಪನಗರ ಬಾಂದ್ರಾ ಮತ್ತು ದಕ್ಷಿಣ ಮುಂಬೈನ ಜಿಂದಾಲ್ ಮ್ಯಾನ್ಷನ್‌ನ ಸ್ಟಾರ್ ಹೋಟೆಲ್‌ನಲ್ಲಿ ಭೇಟಿಯಾಗಿದ್ದೇನೆ. ಲೈಂಗಿಕ ದೌರ್ಜನ್ಯಕ್ಕೆ ಒಳಗಾಗುವ ಮೊದಲು ಅವರೊಂದಿಗೆ ಕಾರಿನಲ್ಲಿ ಡ್ರೈವ್‌ಗೆ ಹೋಗಿದ್ದೆ. ಲೈಂಗಿಕ ದೌರ್ಜನ್ಯದ ನಂತರ ಜಿಂದಾಲ್ ತನ್ನ ಸಂಪರ್ಕವನ್ನು ತಪ್ಪಿಸುತ್ತಿದ್ದಾರೆ ಎಂದು ಉಲ್ಲೇಖಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jammu – Kashmir: ಮತ್ತೆ ಅಟ್ಟಹಾಸ ಮೆರೆದ ಉಗ್ರರು… ಇಬ್ಬರನ್ನು ಅಪಹರಿಸಿ ಹ*ತ್ಯೆ
Maharashtra: ಮತ ನೀಡಿದರೆ ಮದುವೆ ಮಾಡಿಸುವೆ: ಶರದ್ ಬಣದ ನಾಯಕ
India-Afghanistan: ಆಫ್ಘನ್ ಜೊತೆಗೆ ಬಾಂಧವ್ಯ ಪುನಃಸ್ಥಾಪನೆಗೆ ಭಾರತ ಸಜ್ಜು?
Doctor: ಸೀರೆ ಉಟ್ಟ ಸ್ತ್ರೀಯರೇ,ಪೆಟಿಕೋಟ್ ಕ್ಯಾನ್ಸರ್ ಬಗ್ಗೆ ಎಚ್ಚರವಿರಲಿ
Panaji: ವಿದೇಶಿ ಪ್ರವಾಸಿಗರ ಕಳೆದುಕೊಂಡ ಗೋವಾ: ಆರ್ಥಿಕ ಅಪಾಯದ ಭೀತಿ!
MUST WATCH
ಹೊಸ ಸೇರ್ಪಡೆ
Jammu – Kashmir: ಮತ್ತೆ ಅಟ್ಟಹಾಸ ಮೆರೆದ ಉಗ್ರರು… ಇಬ್ಬರನ್ನು ಅಪಹರಿಸಿ ಹ*ತ್ಯೆ
Sydney; ಮಿಲಿಸೆಕೆಂಡಲ್ಲೇ ವಾಸನೆ ಪತ್ತೆ ಹಚ್ಚುವ ರೋಬೋಟ್ ಸೃಷ್ಟಿ!
Canada-India: ಕಾನ್ಸುಲರ್ ಕ್ಯಾಂಪ್ ರದ್ದು; ಕೆನಡಾಗೆ ಭಾರತ ತಿರುಗೇಟು
Electricity Price: ರಾಜ್ಯದ ಜನತೆಗೆ ಈ ಬಾರಿಯೂ ವಿದ್ಯುತ್ ದರ ಏರಿಕೆ ಶಾಕ್?
Waqf Property: ಜೆಪಿಸಿ ಅಧ್ಯಕ್ಷ ಜಗದಾಂಬಿಕಾ ಪಾಲ್ ರಾಜ್ಯ ಭೇಟಿ: ಕಾಂಗ್ರೆಸ್ ಕೆಂಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.