ಮುಂಬೈ; ಮತ್ತೊಬ್ಬನ ಜತೆ ಮಾತುಕತೆ- ಪ್ರಿಯಕರನ ಕಪಾಳಮೋಕ್ಷಕ್ಕೆ ಮಹಿಳೆ ಸಾವು!
Team Udayavani, Dec 2, 2019, 10:09 AM IST
ಮುಂಬೈ:35ವರ್ಷದ ಮಹಿಳೆಗೆ ಪ್ರಿಯತಮ ಕಪಾಳಮೋಕ್ಷ ಮಾಡಿದ ಪರಿಣಾಮ ಆಕೆಯ ಸಾವನ್ನಪ್ಪಿರುವ ಘಟನೆ ಮುಂಬೈನಲ್ಲಿ ನಡೆದಿದೆ. ವಾಣಿಜ್ಯ ನಗರಿಯ ಮ್ಯಾನ್ ಖುರ್ದ್ ರೈಲ್ವೆ ನಿಲ್ದಾಣದಲ್ಲಿ ಪ್ರಿಯತಮ ಮಹಿಳೆ ಕೆನ್ನೆಗೆ ಹೊಡೆದ ನಂತರ ಆಕೆಯನ್ನು ಆಸ್ಪತ್ರೆಗೆ ಸಾಗಿಸುವ ವೇಳೆ ದಾರಿ ಮಧ್ಯೆಯೇ ಸಾವನ್ನಪ್ಪಿರುವುದಾಗಿ ವರದಿ ತಿಳಿಸಿದೆ.
ರೈಲ್ವೆ ನಿಲ್ದಾಣದ ಸಾರ್ವಜನಿಕ ಶೌಚಾಲಯದ ಸಮೀಪ ಸೀತಾ ಪ್ರಧಾನ್ (35ವರ್ಷ) ಮತ್ತೊಬ್ಬ ವ್ಯಕ್ತಿ ಜತೆ ಮಾತನಾಡುತ್ತಿರುವುದನ್ನು ಗಮನಿಸಿದ ಪ್ರಿಯತಮ ರಾಜು ಪೂಜಾರಿ ಯಲ್ಲಾಪ್ಪಾ ಆಕ್ರೋಶಗೊಂಡು ಕೆನ್ನೆಗೆ ಬಲವಾಗಿ ಹೊಡೆದು ಬಿಟ್ಟಿದ್ದ. ಆ ಕ್ಷಣದಲ್ಲಿಯೇ ಆಕೆ ಕುಸಿದು ಬಿದ್ದಿದ್ದಳು ಎಂದು ವರದಿ ವಿವರಿಸಿದೆ.
ಕಪಾಳಕ್ಕೆ ಹೊಡೆದ ಒಂದೇ ಏಟಿನಿಂದ ಕುಸಿದು ಬಿದ್ದಿದ್ದ ಆಕೆಯನ್ನು ಘಾಟ್ ಕೋಪರ್ ರಾಜಾವಾಡಿ ಆಸ್ಪತ್ರೆಗೆ ಕೊಂಡೊಯ್ಯುತ್ತಿರುವಾಗಲೇ ಸಾವನ್ನಪ್ಪಿರುವುದಾಗಿ ಅಧಿಕಾರಿಗಳು ಪಿಟಿಐಗೆ ತಿಳಿಸಿದ್ದಾರೆ.
ಇದೊಂದು ಆಕಸ್ಮಿಕ ಸಾವು ಎಂದು ಪ್ರಕರಣ ದಾಖಲಿಸಿಕೊಂಡಿದ್ದೇವೆ. ಈ ಬಗ್ಗೆ ತನಿಖೆ ನಡೆಸುತ್ತಿದ್ದೇವೆ ಎಂದು ಹಿರಿಯ ಇನ್ಸ್ ಪೆಕ್ಟರ್ ನಿತಿನ್ ಬೋಬ್ಡೆ ತಿಳಿಸಿದ್ದಾರೆ. ಮರಣೋತ್ತರ ಪರೀಕ್ಷೆಯ ವರದಿಗಾಗಿ ಕಾಯುತ್ತಿದ್ದೇವೆ, ನಂತರ ಯಲ್ಲಾಪ್ಪಾ ವಿರುದ್ಧ ಮುಂದಿನ ಕ್ರಮ ಕೈಗೊಳ್ಳುವುದಾಗಿ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Atishi: ದೆಹಲಿ ನೂತನ ಸಿಎಂ ಆಗಿ ಆತಿಶಿ ಇಂದು ಅಧಿಕಾರ ಸ್ವೀಕಾರ
PM Modi U.S. visit: ಇಂದಿನಿಂದ 3 ದಿನಗಳ ಕಾಲ ಮೋದಿ ಅಮೆರಿಕ ಪ್ರವಾಸ
Tirupati: ಲಡ್ಡಿಗೆ ಪ್ರಾಣಿ ಕೊಬ್ಬು: ಟಿಟಿಡಿ ಹೇಳಿದ್ದೇನು? ತನಿಖೆಗೆ ನಿರ್ಧಾರ
Tirupati Laddus row;ತಪ್ಪಿತಸ್ಥರನ್ನು ಸುಮ್ಮನೆ ಬಿಡಲು ಸಾಧ್ಯವೇ?: ಸಿಎಂ ನಾಯ್ಡು ಪ್ರಶ್ನೆ
Ambani;1,000 ಕೋಟಿಯ ವಿಮಾನ ಖರೀದಿಸಿದ ಮುಕೇಶ್ ಅಂಬಾನಿ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Atishi: ದೆಹಲಿ ನೂತನ ಸಿಎಂ ಆಗಿ ಆತಿಶಿ ಇಂದು ಅಧಿಕಾರ ಸ್ವೀಕಾರ
Kunigal: ಪುರಸಭೆಯಲ್ಲಿ ಅವ್ಯವಹಾರ… ಮುಖ್ಯಾಧಿಕಾರಿ ಪಿ.ಶಿವಪ್ರಸಾದ್ ಸೇವೆಯಿಂದ ಅಮಾನತು
Mysuru: ದಸರಾ ಆನೆಗಳ ಕಾದಾಟ: ರೋಡಿಗೆ ದೌಡು, ದಿಕ್ಕೆಟ್ಟ ಜನ
Ibrahim Aqil: ಅಮೆರಿಕಾಗೆ ಬೇಕಾಗಿದ್ದ ಹಿಜ್ಬುಲ್ಲಾ ಕಮಾಂಡರ್ ಇಸ್ರೇಲ್ ದಾಳಿಯಲ್ಲಿ ಸಾವು
Karnataka ರಾಜ್ಯದ ದೇಗುಲಗಳಲ್ಲಿ ನಂದಿನಿ ತುಪ್ಪ: ಆದೇಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.