Ram temple; ಪ್ರಾಣ ಪ್ರತಿಷ್ಠೆ ಸಮಾರಂಭದಲ್ಲಿ ಭಾಗಿಯಾದ ಪ್ರಮುಖ ಮೌಲ್ವಿ ವಿರುದ್ಧ ಫತ್ವಾ
ಯಾವುದೇ ಅಪರಾಧ ಮಾಡಿಲ್ಲ ... ನಾನು ಕ್ಷಮೆಯಾಚಿಸುವುದಿಲ್ಲ, ದ್ವೇಷಿಸುವವರು ಪಾಕಿಸ್ಥಾನಕ್ಕೆ ಹೋಗಲಿ
Team Udayavani, Jan 29, 2024, 10:15 PM IST
ಅಯೋಧ್ಯೆ: ಜನವರಿ 22 ರಂದು ಅಯೋಧ್ಯೆಯ ರಾಮ ಮಂದಿರ ‘ಪ್ರಾಣ ಪ್ರತಿಷ್ಠಾ’ ಸಮಾರಂಭದಲ್ಲಿ ಪಾಲ್ಗೊಂಡಿದ್ದ ಪ್ರಮುಖ ಮುಸ್ಲಿಂ ಧರ್ಮಗುರುವೊಬ್ಬರ ವಿರುದ್ಧ ‘ಫತ್ವಾ’ ಹೊರಡಿಸಲಾಗಿದೆ.
ಆಲ್ ಇಂಡಿಯಾ ಇಮಾಮ್ ಆರ್ಗನೈಸೇಶನ್‌ನ ಮುಖ್ಯ ಇಮಾಮ್ ಡಾ. ಇಮಾಮ್ ಉಮರ್ ಅಹ್ಮದ್ ಇಲ್ಯಾಸಿ ಅವರು ತನ್ನ ವಿರುದ್ಧ ‘ಫತ್ವಾ’ ಹೊರಡಿಸಿರುವುದನ್ನು ಖಚಿತಪಡಿಸಿದ್ದಾರೆ. “ಮುಖ್ಯ ಇಮಾಮ್ ಆಗಿ, ನಾನು ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರದಿಂದ ಆಹ್ವಾನವನ್ನು ಸ್ವೀಕರಿಸಿದ್ದೇನೆ. ನಾನು ಎರಡು ದಿನ ಆಲೋಚಿಸಿ ನಂತರ ದೇಶಕ್ಕಾಗಿ ಸೌಹಾರ್ದತೆಗಾಗಿ ಅಯೋಧ್ಯೆಗೆ ಹೋಗಲು ನಿರ್ಧರಿಸಿದೆ ಎಂದು ಎಎನ್‌ಐಗೆ ಪ್ರತಿಕ್ರಿಯಿಸಿದ್ದಾರೆ.
“ನಿನ್ನೆ ಫತ್ವಾ ಹೊರಡಿಸಲಾಗಿದೆ, ಆದರೆ ಜನವರಿ 22 ರ ಸಂಜೆಯಿಂದ ನನಗೆ ಬೆದರಿಕೆ ಕರೆಗಳು ಬರುತ್ತಿವೆ … ನಾನು ಕೆಲವು ಕರೆಗಳನ್ನು ರೆಕಾರ್ಡ್ ಮಾಡಿದ್ದೇನೆ, ಅದರಲ್ಲಿ ಕರೆ ಮಾಡಿದವರು ನನಗೆ ಜೀವ ಬೆದರಿಕೆ ಹಾಕಿದ್ದಾರೆ. ನನ್ನನ್ನು ಪ್ರೀತಿಸುವವರು, ರಾಷ್ಟ್ರವನ್ನು ಪ್ರೀತಿಸುವವರು ನನ್ನನ್ನು ಬೆಂಬಲಿಸುತ್ತಾರೆ. ಸಮಾರಂಭದಲ್ಲಿ ಭಾಗವಹಿಸಿದ್ದಕ್ಕಾಗಿ ನನ್ನನ್ನು ದ್ವೇಷಿಸುವವರು ಬಹುಶಃ ಪಾಕಿಸ್ಥಾನಕ್ಕೆ ಹೋಗಬೇಕು. ನಾನು ಪ್ರೀತಿಯ ಸಂದೇಶವನ್ನು ನೀಡಿದ್ದೇನೆ, ನಾನು ಯಾವುದೇ ಅಪರಾಧ ಮಾಡಿಲ್ಲ. ನಾನು ಕ್ಷಮೆಯಾಚಿಸುವುದಿಲ್ಲ ಅಥವಾ ರಾಜೀನಾಮೆ ನೀಡುವುದಿಲ್ಲ, ಅವರು ಏನು ಬೇಕಾದರೂ ಮಾಡಬಹುದು”ಎಂದು ಇಲ್ಯಾಸಿ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Owaisi; ತಿರುಪತಿಯಲ್ಲಿ ಮುಸ್ಲಿಂ ಸ್ಟಾಫ್ ಇಲ್ಲದಿರುವಾಗ ವಕ್ಫ್ ನಲ್ಲೇಕೆ ಹಿಂದೂಗಳು
Sparks Row; ಉಗ್ರರನ್ನು ಹ*ತ್ಯೆ ಮಾಡಬಾರದು…: ಫಾರೂಕ್ ಅಬ್ದುಲ್ಲಾ ಹೇಳಿಕೆ
INDIA bloc; ಜಾರ್ಖಂಡ್ ಸೀಟು ಹಂಚಿಕೆ ಒಪ್ಪಂದ ಅಂತಿಮ: ಜೆಎಂಎಂಗೆ 43 ಸ್ಥಾನ
Shiv Sena ; ಭಾರೀ ವಿವಾದದ ಬಳಿಕ ಶೈನಾ ಕ್ಷಮೆ ಯಾಚಿಸಿದ ಅರವಿಂದ್ ಸಾವಂತ್
MUST WATCH
ಹೊಸ ಸೇರ್ಪಡೆ
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Subrahmanya; ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್: ಗುಂಪಿನಿಂದ ಯುವಕನಿಗೆ ಥಳಿತ
Kundapura; ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಬೈಕ್: ಸವಾರ ದುರ್ಮರ*ಣ
J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.