Muslim quota cancellation: ವಿಚಾರಣೆ 25ಕ್ಕೆ ಮುಂದೂಡಿದ Supreme Court
Team Udayavani, Apr 19, 2023, 7:20 AM IST
ನವದೆಹಲಿ: ಕರ್ನಾಟಕದಲ್ಲಿ ಮುಸ್ಲಿಮರಿಗಿದ್ದ ಶೇ.4ರ ಮೀಸಲಾತಿ ರದ್ದು ಮಾಡಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಗಳಿಗೆ ಸಂಬಂಧಿಸಿ ಪ್ರತಿಕ್ರಿಯೆ ನೀಡಲು ರಾಜ್ಯ ಸರ್ಕಾರ ಕಾಲಾವಕಾಶ ಕೇಳಿದೆ. ಈ ಹಿನ್ನೆಲೆಯಲ್ಲಿ ಮಂಗಳವಾರ ಸುಪ್ರೀಂಕೋರ್ಟ್ ವಿಚಾರಣೆಯನ್ನು ಏ.25ಕ್ಕೆ ಮುಂದೂಡಿದೆ.
ಲಿಂಗಾಯತರು ಮತ್ತು ಒಕ್ಕಲಿಗರಿಗೆ ಶೈಕ್ಷಣಿಕ ಸಂಸ್ಥೆಗಳು ಮತ್ತು ಸರ್ಕಾರಿ ಉದ್ಯೋಗದಲ್ಲಿ ನೀಡಲಾಗಿರುವ ಮೀಸಲಾತಿ ಸೌಲಭ್ಯವನ್ನು ಏ.25ರವರೆಗೆ ತಡೆ ಹಿಡಿಯುತ್ತೇವೆಂದು ಕರ್ನಾಟಕ ಸರ್ಕಾರ ಏ.13ರಂದೇ ಸ್ಪಷ್ಟಪಡಿಸಿದೆ. ಹೀಗಾಗಿ, ಮುಂದಿನ ವಿಚಾರಣೆಯನ್ನು ಏ.25ರಂದು ನಿಗದಿಪಡಿಸುತ್ತಿದ್ದೇವೆ ಎಂದು ನ್ಯಾ.ಕೆ.ಎಂ.ಜೋಸೆಫ್ ಮತ್ತು ನ್ಯಾ.ಬಿ.ವಿ. ನಾಗರತ್ನ ಅವರಿದ್ದ ನ್ಯಾಯಪೀಠ ಹೇಳಿದೆ.
ಸರ್ಕಾರದ ಪರವಾಗಿ ಕೋರ್ಟ್‌ಗೆ ಹಾಜರಾಗಿದ್ದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ಸಲಿಂಗ ವಿವಾಹಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಸಂವಿಧಾನ ಪೀಠದ ಮುಂದೆ ವಾದ ಮಂಡಿಸಬೇಕಾಗಿರುವ ಕಾರಣ, ಮೀಸಲಾತಿ ಪ್ರಕರಣದಲ್ಲಿ ಪ್ರತಿಕ್ರಿಯೆ ಒದಗಿಸಲು ಒಂದು ವಾರ ಕಾಲಾವಕಾಶ ನೀಡಿ ಎಂದು ಕೋರಿದರು. ಇದಕ್ಕೆ ಅರ್ಜಿದಾರರ ಪರ ವಕೀಲ ಕಪಿಲ್ ಸಿಬಲ್ ಅವರೂ ಆಕ್ಷೇಪ ವ್ಯಕ್ತಪಡಿಸಲಿಲ್ಲ. ಹೀಗಾಗಿ, ನ್ಯಾಯಪೀಠವು ವಿಚಾರಣೆಯನ್ನು ಮುಂದೂಡಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.