ಈ ಬಾರಿಯ ದುರ್ಗಾ ಪೂಜೆಗೆ ಬಂಗಾಳದ ಕೈದಿಗಳಿಗೆ ಮಟನ್, ಚಿಕನ್ ಬಿರಿಯಾನಿ ಜೊತೆಗೆ ವಿಶೇಷ ಖಾದ್ಯ
Team Udayavani, Oct 5, 2024, 3:01 PM IST
ಕೊಲ್ಕತ್ತಾ: ಈ ಬಾರಿಯ ದುರ್ಗಾ ಪೂಜೆಗೆ ಬಂಗಾಳದ ಕೈದಿಗಳಿಗೆ ವಿಶೇಷ ಆಹಾರದ ಮೆನುವೊಂದನ್ನು ಗೃಹ ಇಲಾಖೆ ಸಿದ್ಧಪಡಿಸಿದೆ.
ಅದರಂತೆ ದುರ್ಗಾ ಪೂಜೆಯ ಸಂದರ್ಭದಲ್ಲಿ ಜೈಲಿನಲ್ಲಿರುವ ಕೈದಿಗಳು ಹಬ್ಬದ ಸಂಭ್ರಮದಿಂದ ದೂರ ಉಳಿಯಬಾರದು ಎಂಬ ಉದ್ದೇಶದಿಂದ ಗೃಹ ಇಲಾಖೆ ಈ ವಿಶೇಷ ದಿನದಂದು ಕೈದಿಗಳಿಗೆ ಚಿಕನ್ ಬಿರಿಯಾನಿ, ಮಟನ್ ಬಿರಿಯಾನಿ, ಬಸಂತಿ ಪಲಾವ್ ಸೇರಿದಂತೆ ಹಲವಾರು ಬಂಗಾಲಿ ಖಾದ್ಯಗಳನ್ನು ನೀಡಲು ಮುಂದಾಗಿದೆ ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.
ಅದರಂತೆ ಬರುವ ಅಕ್ಟೋಬರ್ 9 ರಿಂದ ಅಕ್ಟೋಬರ್ 12 ರವರೆಗೆ ಈ ನಾಲ್ಕು ದಿನದಂದು ಮಧ್ಯಾಹ್ನ ಹಾಗೂ ರಾತ್ರಿಯ ಊಟಕ್ಕೆ ವಿಶೇಷ ಖಾದ್ಯಗಳನ್ನು ತಯಾರಿಸಿ ಕೈದಿಗಳು ಹಾಗೂ ವಿಚಾರಣಾಧೀನ ಕೈದಿಗಳಿಗೆ ನೀಡಲು ನಿರ್ಧರಿಸಲಾಗಿದೆ ಎನ್ನಲಾಗಿದೆ.
ಈ ಕುರಿತು ಹೇಳಿಕೆ ನೀಡಿದ ಜೈಲು ಅಧಿಕಾರಿ ಪ್ರತಿ ವರ್ಷ ಹಬ್ಬದ ಸಮಯದಲ್ಲಿ ಕೈದಿಗಳು ಏನಾದರು ವಿಶೇಷ ಖಾದ್ಯವನ್ನು ನೀಡುವಂತೆ ಆಗ್ರಹಿಸುತ್ತಾರೆ ಆದರೆ ಇದುವರೆಗೂ ಯಾವುದೇ ವಿಶೇಷ ಆಹಾರ ಕೈದಿಗಳಿಗೆ ನೀಡಿಲ್ಲ ಹಾಗಾಗಿ ಈ ಬಾರಿ ಕೈದಿಗಳ ಭೋಜನದಲ್ಲಿ ವಿಶೇಷ ಖಾದ್ಯಗಳನ್ನು ನೀಡಲು ಮುಂದಾಗಿದ್ದೇವೆ, ಜೊತೆಗೆ ಈ ಆಹಾರವನ್ನು ಜೈಲಿನಲ್ಲಿರುವ ಕೈದಿಗಳೇ ತಯಾರಿಸಲಿದ್ದಾರೆ ಎಂದು ಹೇಳಿದ್ದಾರೆ.
ಕೈದಿಗಳೇ ತಯಾರಿಸುವ ಈ ವಿಶೇಷ ಖಾದ್ಯದಲ್ಲಿ ಚನ್ನಾ ದಾಲ್, ಪೂರಿ, ಮೀನು ಸಾರು, ಕೋಳಿ ಸಾಂಬಾರ್, ಆಲೂಗಡ್ಡೆ ಸೋರೆಕಾಯಿ ಜೊತೆಗೆ ಸಿಗಡಿ, ಚಿಕನ್ ಬಿರಿಯಾನಿ, ಮಟನ್ ಬಿರಿಯಾನಿ, ಪಾಯಸ, ಬಸಂತಿ ಪುಲಾವ್ ಇಷ್ಟೆಲ್ಲಾ ಖಾದ್ಯಗಳನ್ನು ಸ್ವತಃ ಕೈದಿಗಳೇ ತಯಾರು ಮಾಡಲಿದ್ದಾರಂತೆ.
ಇದನ್ನೂ ಓದಿ: Mangaluru: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಅಭಿವೃದ್ಧಿ ಕಡೆಗಣನೆಯಾಗಿದೆ: ನಳಿನ್ ಆರೋಪ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
Old cars ಬಿಕರಿಗೆ ಶೇ.18 ಜಿಎಸ್‌ಟಿ! ; ವಿತ್ತ ಸಚಿವೆ ನೇತೃತ್ವದ ಜಿಎಸ್‌ಟಿ ಸಭೆ ತೀರ್ಮಾನ
Maharashtra; ಫಡ್ನವೀಸ್ ಬಳಿ ಗೃಹ, ಶಿಂಧೆಗೆ ನಗರಾಭಿವೃದ್ಧಿ ಸೇರಿ 3 ಪ್ರಮುಖ ಖಾತೆ!
Mumbai; ಚುನಾವಣೆಗೆ ಏಕಾಂಗಿ ಸ್ಪರ್ಧೆ: ಉದ್ಧವ್ ಶಿವಸೇನೆ ಇಂಗಿತ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
T20 Asia Cup: ಬಾಂಗ್ಲಾ ವಿರುದ್ದ ಅಂಡರ್ 19 ವನಿತಾ ಏಷ್ಯಾಕಪ್ ಚಾಂಪಿಯನ್ ಆದ ಭಾರತ
BBK11: ವೀಕ್ಷಕರಿಗೆ ಸರ್ಪ್ರೈಸ್; ಮತ್ತೆ ಬಿಗ್ ಬಾಸ್‌ಗೆ ಗೋಲ್ಡ್ ಸುರೇಶ್
BGT 2024: ಮೆಲ್ಬೋರ್ನ್ ಪಂದ್ಯಕ್ಕೂ ಟೀಂ ಇಂಡಿಯಾಗೆ ಗಾಯಾಳುಗಳ ಸಮಸ್ಯೆ
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Vijay Hazare Trophy: ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್ ಸೂರ್ಯವಂಶಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.