ಕಳೆದ ವರ್ಷ ಕೈ ತೊರೆದು ಬಿಜೆಪಿ ಸೇರಿದ್ದ ಬಿರೇನ್ ಸಿಂಗ್ ಈಗ ಸಿಎಂ!
Team Udayavani, Mar 15, 2017, 2:32 PM IST
ಇಂಪಾಲ: ಮಣಿಪುರದ ಮೊದಲ ಬಿಜೆಪಿ ಮುಖ್ಯಮಂತ್ರಿಯಾಗಿ ನೊಂಗ್‌ತೊಂಬಮ್ ಬಿರೇನ್ ಸಿಂಗ್ ಅವರು ಬುಧವಾರ ಪ್ರಮಾಣ ವಚನ ಸ್ವೀಕರಿಸಿದರು.
ಇಂಪಾಲದ ರಾಜಭವನದಲ್ಲಿ ನಡೆದ ಸಮಾರಂಭದಲ್ಲಿ ರಾಜ್ಯಪಾಲೆ ನಜ್ಮಾ ಹೆಫ್ತುಲ್ಲಾ ಅವರು ಪ್ರಮಾಣ ವಚನ ಭೋದಿಸಿದರು. ಉಪಮುಖ್ಯಮಂತ್ರಿಯಾಗಿ ಮೈತ್ರಿ ಪಕ್ಷ ನಾಗಾ ಪೀಪಲ್ಸ್ ಪಾರ್ಟಿಯ ಜೋಯ್ ಕುಮಾರ್,ಸಂಪುಟ ದರ್ಜೆಯ ಸಚಿವರಾಗಿ ವಿಶ್ವಜಿತ್ ಸಿಂಗ್ ಅವರು ಪ್ರಮಾಣವಚನ ಸ್ವೀಕರಿಸಿದರು.
ಬಿರೇನ್ ಸಿಂಗ್ ಅವರು ಪತ್ರಕರ್ತರಾಗಿ ಕೆಲಸ ನಿರ್ವಹಿಸಿದ್ದು, ಡೆಮಾಕ್ರಟಿಕ್ ರೆಲಲೂಷನರಿ ಪೀಪಲ್ಸ್ ಪಾರ್ಟಿಯ ಮೂಲಕ ರಾಜಕೀಯ ಆರಂಭಿಸಿ ಬಳಿಕ ಕಾಂಗ್ರೆಸ್ ಸೇರ್ಪಡೆಯಾಗಿದ್ದರು. ಕಾಂಗ್ರೆಸ್‌ನಿಂದ 3 ಬಾರಿ ಶಾಸಕರಾಗಿ ಸಚಿವರಾಗಿ ಕೆಲಸ ನಿರ್ವಹಿಸಿದ್ದರು. 2017 ರ ಅಕ್ಟೋಬರ್‌ನಲ್ಲಿ ಕಾಂಗ್ರೆಸ್ ವಿರುದ್ಧ ಬಂಡೆದ್ದು ಅಪಾರ ಬೆಂಬಲಿಗರೊಂದಿಗೆ ಬಿಜೆಪಿ ಸೇರ್ಪಡೆಯಾಗಿದ್ದರು.
ಜೋಯ್ ಕುಮಾರ್ ಅವರು ಈ ಹಿಂದೆ ಮಣಿಪುರದ ಡಿಜಿಪಿಯಾಗಿ ಕರ್ತವ್ಯ ನಿರ್ವಹಿಸಿದ್ದರಲ್ಲದೆ ಕಾಂಗ್ರೆಸ್‌ನ ಮುಖ್ಯಮಂತ್ರಿ ಓಕ್ರಮ್ ಇಬೋಬಿ ಸಿಂಗ್ ಅವರ ಪರಮಾಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದರು.
ಅಮಿತ್ ಶಾ, ನಾಯ್ಡು ಗೈರು
ವಿಮಾನದಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡ ಕಾರಣದಿಂದ ಇಂಪಾಲಕ್ಕೆ ತೆರಳುತ್ತಿದ್ದ ಅಮಿತ್ ಶಾ, ವೆಂಕಯ್ಯ ನಾಯ್ಡು ಮತ್ತು ಬಿಜೆಪಿ ಪ್ರಧಾನ ಕಾರ್ಯದರ್ಶಿ ರಾಮ್ ಲಾಲ್ ಅವರು ದೆಹಲಿಗೆ ವಾಪಾಸಾದರು.
ಎಲ್‌ಜೆಪಿ ಮತ್ತು ಟಿಎಂಸಿಯ ತಲಾ ಓರ್ವ ಶಾಸಕರು ಬಿಜೆಪಿಗೆ ಬೆಂಬಲ ಸೂಚಿಸಿದ್ದು ಅವರಿಗೂ ಸಂಪುಟದಲ್ಲಿ ಸಚಿವ ಸ್ಥಾನ ದೊರೆಯುವ ಸಾಧ್ಯತೆಗಳಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jhansi Hospital: ಅಗ್ನಿ ದುರಂತ, ನವಜಾತ ಶಿಶುಗಳ ಸಜೀವ ದಹನ… ಮೋದಿ ಸಂತಾಪ, ಪರಿಹಾರ ಘೋಷಣೆ
Employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ
Air Pollution: ದಿಲ್ಲಿ ಗಾಳಿಯೇ ವಿಷ, ಒಂದು ದಿನದ ಉಸಿರಾಟ 25 ಸಿಗರೇಟಿಗೆ ಸಮ!
India: ಹಿರಿಯ ನಾಗರಿಕರ ಭದ್ರತೆಗೆ ಶೀಘ್ರ ಹೊಸ ನೀತಿ: ಕೇಂದ್ರ
Madras HC: ಆಲಿಂಗನ, ಚುಂಬನ ಹರೆಯದ ಪ್ರೇಮಿಗಳಲ್ಲಿ ಸಾಮಾನ್ಯ
MUST WATCH
ಹೊಸ ಸೇರ್ಪಡೆ
Belagavi: ವಿವಾಹಿತ ಮಹಿಳೆ ಮತ್ತು ತಾಯಿಯ ಸೀರೆ ಬಿಚ್ಚಿ ಹಲ್ಲೆ ನಡೆಸಿದ ನೆರೆಹೊರೆಯವರು!
Tamil Director: ಖ್ಯಾತ ತಮಿಳು ಚಿತ್ರ ನಿರ್ದೇಶಕ ಸುರೇಶ್ ಸಂಗಯ್ಯ ವಿಧಿವಶ
SMAT 2024: ಸಯ್ಯದ್ ಮುಷ್ತಾಕ್ ಅಲಿ ಕೂಟಕ್ಕೆ ಬಲಿಷ್ಠ ಕರ್ನಾಟಕ ತಂಡ ಪ್ರಕಟ
ಹೆದ್ದಾರಿ ತಡೆ ನಡೆಸಿದ ಆರೋಪ; ಸುಳ್ಯ, ಬೈಂದೂರು ಶಾಸಕರ ಸಹಿತ ಹಲವರ ವಿರುದ್ಧ ಪ್ರಕರಣ
IPL Auction: ಸಂಪೂರ್ಣ ಐಪಿಎಲ್ ಹರಾಜು ನಡೆಸಲಿದ್ದಾರೆ ಮಲ್ಲಿಕಾ ಸಾಗರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.