ಯೂಟ್ಯೂಬ್ ನೋಡಿ ಮಗುವಿಗೆ ಜನ್ಮ ಕೊಟ್ಟ ಅಪ್ರಾಪ್ತೆ: ನಂತರ ಮಾಡಿದ್ದೇನು?
ತಾಯಿ ಮನೆಗೆ ಬಂದಾಗ ಬಾಲಕಿ ಎಲ್ಲಾ ವಿಚಾರವನ್ನು ತಾಯಿಗೆ ಹೇಳಿದ್ದಾಳೆ.
Team Udayavani, Mar 6, 2023, 11:15 AM IST
ಮಹಾರಾಷ್ಟ್ರ: 15 ವರ್ಷದ ಅಪ್ರಾಪ್ತ ಬಾಲಕಿಯೊಬ್ಬಳು ಯೂಟ್ಯೂಬ್ ನೋಡಿ ಮಗುವಿಗೆ ಜನ್ಮ ನೀಡಿದ ಬಳಿಕ ಕತ್ತು ಹಿಸುಕಿ ಮಗುವನ್ನು ಸಾಯಿಸಿರುವ ಘಟನೆ ಮಹಾರಾಷ್ಟ್ರದ ನಾಗ್ಪುರದಲ್ಲಿ ನಡೆದಿರುವುದು ಬೆಳಕಿಗೆ ಬಂದಿದೆ.
ಸಾಮಾಜಿಕ ಜಾಲತಾಣದಲ್ಲಿಅಪ್ರಾಪ್ತ ಬಾಲಕಿ ಆ್ಯಕ್ಟಿವ್ ಆಗಿದ್ದು, ಕೆಲ ಸಮಯದ ಹಿಂದೆ ವ್ಯಕ್ತಿಯೊಬ್ಬನ ಪರಿಚಯವಾಗಿದೆ. ಈ ಪರಿಚಯ ಪ್ರೇಮಕ್ಕೆ ತಿರುಗಿದ್ದು, ವ್ಯಕ್ತಿ ಬಲವಂತವಾಗಿ ಬಾಲಕಿಯೊಂದಿಗೆ ದೈಹಿಕ ಸಂಪರ್ಕವನ್ನು ಹೊಂದಿದ್ದಾನೆ. ಬಾಲಕಿ ಗರ್ಭಿಣಿಯಾಗಿದ್ದಾಳೆ ಆದರೆ ಈ ವಿಚಾರವನ್ನು ಯಾರಿಗೂ ಹೇಳದೇ ಹಾಗೆಯೇ ಇದ್ದಳು.
ಇದನ್ನೂ ಓದಿ: ತಂದೆಯಿಂದಲೇ ಲೈಂಗಿಕ ದೌರ್ಜನ್ಯಕ್ಕೆ ಒಳಗಾಗಿದ್ದೆ.. ಕರಾಳ ಘಟನೆ ಬಗ್ಗೆ ಮಾತನಾಡಿದ ನಟಿ ಖುಷ್ಬು
ತನ್ನ ತಾಯಿಯ ಬಳಿ ತನಗೆ ಆರೋಗ್ಯ ಸಮಸ್ಯೆ ಕಾಣಿಸಿಕೊಳ್ಳುತ್ತಿದೆ ಎಂದು ಗರ್ಭಿಣಿಯಾಗಿರುವ ವಿಷಯವನ್ನು ಬಿಟ್ಟು ಹೇಳಿದ್ದಳು. ಮಾ. 3 ರಂದು ಬಾಲಕಿಗೆ ಹೊಟ್ಟೆ ನೋವು ಕಾಣಿಸಿಕೊಂಡಿದೆ. ಏನು ಮಾಡುವುದೆನ್ನುವ ಸ್ಥಿತಿಯಲ್ಲಿದ್ದಾಕೆ ಯೂಟ್ಯೂಬ್ ನೋಡಿ ಮಗುವಿಗೆ ಜನ್ಮ ನೀಡಿದ್ದಾಳೆ. ಆದರೆ ಮಗುವಿಗೆ ಜನ್ಮ ನೀಡಿದ ವಿಚಾರ ಗೊತ್ತಾದರೆ ದೊಡ್ಡ ಸಮಸ್ಯೆಯಾಗುತ್ತದೆ ಎನ್ನುವ ಕಾರಣಕ್ಕೆ ಆಗಷ್ಟೇ ಹುಟ್ಟಿದ ತನ್ನದೇ ಮಗುವಿನ ಕತ್ತನ್ನು ಹಿಸುಕಿ ಅದನ್ನು ಪೆಟ್ಟಿಗೆಯಲ್ಲಿ ಹಾಕಿಟ್ಟಿದ್ದಾಳೆ.
ತಾಯಿ ಮನೆಗೆ ಬಂದಾಗ ಬಾಲಕಿ ಎಲ್ಲಾ ವಿಚಾರವನ್ನು ತಾಯಿಗೆ ಹೇಳಿದ್ದಾಳೆ. ಬಳಿಕ ಆಕೆಯನ್ನು ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ವಿಚಾರ ಪೊಲೀಸರಿಗೆ ತಿಳಿದಾಗ ಬಾಲಕಿಗೆ ಪರಿಚಿತನಾದ ವ್ಯಕ್ತಿಯ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿ ತನಿಖೆಯನ್ನು ಆರಂಭಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.