ಚುನಾವಣೋತ್ತರ ಮಹಾ ಘಟಬಂಧನ: ಇಂದು ಮಮತಾ, ನಾಯ್ಡು ಮಹತ್ವದ ಭೇಟಿ
Team Udayavani, May 20, 2019, 11:49 AM IST
ಕೋಲ್ಕತ : ಕೇಂದ್ರದಲ್ಲಿ ಸರಕಾರ ರಚಿಸುವ ಸಾಧ್ಯತೆಗಳನ್ನು ದೃಷ್ಟಿಯಲ್ಲಿರಿಸಿಕೊಂಡು ಚುನಾವಣೋತ್ತರ ಮಹಾ ಮೈತ್ರಿಕೂಟವನ್ನು (ಮಹಾ ಘಟಬಂಧನ) ರಚಿಸುವ ದಿಶೆಯಲ್ಲಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಮತ್ತು ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ ಒಂದು ದಿನದ ತರುವಾಯ ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಅವರು ಇಂದು ಸೋಮವಾರ ಪಶ್ಚಿಮ ಬಂಗಾಲದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರನ್ನು ಭೇಟಿಯಾಗಿ ಮಹತ್ವದ ಮಾತುಕತೆ ನಡೆಸಲಿದ್ದಾರೆ ಎಂದು ವರದಿಗಳು ತಿಳಿಸಿವೆ.
ಮೇ 23ರಂದು ಲೋಕಸಭಾ ಚುನಾವಣೆ ಫಲಿತಾಂಶ ಪ್ರಕಟಗೊಳ್ಳುವ ಮುನ್ನ ವಿರೋಧ ಪಕ್ಷಗಳ ಚುನಾವಣೋತ್ತರ ಮೈತ್ರಿಕೂಟವನ್ನು ರೂಪಿಸುವ ಉದ್ದೇಶದಲ್ಲಿ ಟಿಡಿಪಿ ಅಧ್ಯಕ್ಷ ನಾಯ್ಡು ಅವರು ಮಮತಾ ಬ್ಯಾನರ್ಜಿ ಅವರನ್ನು ಭೇಟಿಯಾಗಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಮಮತಾ ಬ್ಯಾನರ್ಜಿ ಅವರನ್ನು ಇಂದು ಸೋಮವಾರ ಮಧ್ಯಾಹ್ನ ಸಚಿವಾಯಲದಲ್ಲಿ ಭೇಟಿಯಾಗುವ ನಾಯ್ಡು ಅವರು ಚುನಾವಣೋತ್ತರ ಮಹಾ ಮೈತ್ರಿಕೂಟ ರಚಿಸುವ ತಂತ್ರಗಾರಿಕೆಯನ್ನು ಮಮತಾ ಅವರೊಂದಿಗಿನ ಭೇಟಿಯಲ್ಲಿ ನಡೆಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.