ನಳಂದಾ: ಅಕ್ರಮ ಪಟಾಕಿ ಘಟಕದಲ್ಲಿ ಭಾರೀ ಸ್ಫೋಟ;ಐವರು ಛಿದ್ರ
Team Udayavani, Mar 23, 2018, 9:10 AM IST
ನಳಂದಾ: ಬಿಹಾರದ ಜಲಾಲ್‌ಪುರ್‌ನಲ್ಲಿ ಅಕ್ರಮ ಪಟಾಕಿ ತಯಾರಿಕಾ ಘಟಕವೊಂದರಲ್ಲಿ ಭಾರೀ ಸ್ಫೋಟ ಸಂಭವಿಸಿದ್ದು ಕನಿಷ್ಠ ಐವರು ದಾರುಣವಾಗಿ ಸಾವನ್ನಪ್ಪಿದ್ದು, 25 ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ಬೆಳಗಿನ ಜಾವ 5 ಗಂಟೆಯ ವೇಳೆಗೆ ಸ್ಫೋಟ ಸಂಭವಿಸಿದ್ದು ಘಟಕದ ಸುತ್ತ ಇದ್ದ ನಿವಾಸಿಗಳು ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ಸ್ಫೋಟದಿಂದ ಭಾರೀ ಬೆಂಕಿ ಕಾಣಿಸಿಕೊಂಡಿದ್ದು , ಗೋಡೆಗಳು ಛಿದ್ರಗೊಂಡಿವೆ.
ಗಾಯಾಳುಗಳನ್ನು ಆಸ್ಪತ್ರೆಗಳಿಗೆ ದಾಖಲಿಸಲಾಗಿದ್ದು 17 ಮಂದಿಯ ಸ್ಥಿತಿ ಚಿಂತಾಚನಕವಾಗಿದೆ ಎಂದು ತಿಳಿದು ಬಂದಿದೆ.
ಅಗ್ನಿ ಶಾಮಕ ದಳದ ಸಿಬಂದಿಗಳು ಸ್ಥಳಕ್ಕಾಗಮಿಸಿ ಬೆಂಕಿಯ ಕೆನ್ನಾಲಗೆಯನ್ನು ತಹಬದಿಗೆ ತರಲು 2 ಗಂಟೆಗಳ ಕಾಲ ಹರಸಾಹಸ ಪಟ್ಟಿರುವುದಾಗಿ ತಿಳಿದು ಬಂದಿದೆ.
ಎಟಿಎಸ್ ಪೊಲೀಸರು ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Hunsur: ಅಪ್ರಾಪ್ತ ಬಾಲಕಿ ಗರ್ಭಿಣಿ ಪ್ರಕರಣ; ಯುವಕನ ಬಂಧನ
Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್ ರಾಷ್ಟ್ರ?
India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.