ಮನದ ಮಾತಿನ ಶತಾಧ್ಯಾಯ: ರಾಜಭವನಕ್ಕೆ ಪದ್ಮ ಪುರಸ್ಕೃತರಿಗೆ ಆಹ್ವಾನ
Team Udayavani, Apr 30, 2023, 8:35 AM IST
ಹೊಸದಿಲ್ಲಿ: ಪ್ರಧಾನಿ ನರೇಂದ್ರ ಮೋದಿಯವರ ಅತ್ಯಂತ ನೆಚ್ಚಿನ “ಮನ್ ಕೀ ಬಾತ್’ಗೆ ಈಗ ನೂರರ ಸಂಭ್ರಮ. ಶತಾಧ್ಯಾಯದ ಕಂತು ರವಿವಾರ ಬೆಳಗ್ಗೆ 11ಕ್ಕೆ ನೇರ ಪ್ರಸಾರ ಆಗಲಿದೆ. ಕೇಂದ್ರ ಸರಕಾರ ಮತ್ತು ಬಿಜೆಪಿ ವತಿಯಿಂದ ದೇಶ – ವಿದೇಶಗಳ 4 ಲಕ್ಷ ಸ್ಥಳಗಳಲ್ಲಿ ಅದನ್ನು ಪ್ರಸಾರ ಮಾಡಲು ಏರ್ಪಾಡು ಮಾಡಲಾಗಿದೆ. ಈ ಬಾರಿಯ ಮನ್ ಕೀ ಬಾತ್ ವಿಶ್ವ ಸಂಸ್ಥೆಯಲ್ಲೂ ಬಿತ್ತರ ಗೊಳ್ಳಲಿರುವುದು ವಿಶೇಷ.
ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಬಿಜೆಪಿಯ ಶಾಸಕರು, ಸಂಸದರಿಗೆ ಉಸ್ತುವಾರಿ ನೀಡಲಾಗಿದೆ. ಪ್ರತಿ ವಿಧಾನ ಸಭಾ ಕ್ಷೇತ್ರಕ್ಕೆ ಅನ್ವಯವಾಗುವಂತೆ 100 ಸ್ಥಳಗಳನ್ನು ಗುರುತಿಸಿ ಅಲ್ಲಿ ತಲಾ 100 ಮಂದಿಗೆ ಆಹ್ವಾನ ನೀಡಿ, ಕಾರ್ಯಕ್ರಮ ಆಲಿಸಲು ವ್ಯವಸ್ಥೆ ಮಾಡಲಾಗಿದೆ. ಪ್ರತೀ ಬೂತ್ ಮಟ್ಟದಲ್ಲೂ ಇದೇ ವ್ಯವಸ್ಥೆ ಮಾಡಲಾಗಿದೆ. ಈ ಸಂದರ್ಭ ಎಲೆಮರೆಯ ಕಾಯಿಯಂತೆ ಕೆಲಸ ಮಾಡಿರುವ ವ್ಯಕ್ತಿಗಳನ್ನು ಗೌರವಿಸಲೂ ನಿರ್ಧರಿಸಲಾಗಿದೆ ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ದುಷ್ಯಂತ್ ಗೌತಮ್ ಹೇಳಿದ್ದಾರೆ.
ನಡ್ಡಾ ಉಸ್ತುವಾರಿ
ಜೆ.ಪಿ. ನಡ್ಡಾ ಸ್ವತಃ ಇದರ ಉಸ್ತುವಾರಿ ವಹಿಸಿಕೊಂಡಿದ್ದಾರೆ ಎಂದು ಗೌತಮ್ ಹೇಳಿದ್ದಾರೆ. ಬಿಜೆಪಿಯ ಆಯಾ ರಾಜ್ಯದ ಪದಾಧಿಕಾರಿಗಳಿಗೆ ಒಂದೊಂದು ಜಿಲ್ಲೆಗಳ ಉಸ್ತುವಾರಿ ನೀಡಲಾಗಿದೆ ಎಂದಿದ್ದಾರೆ.
ವಿಶ್ವಸಂಸ್ಥೆಯಲ್ಲಿ ಪ್ರಸಾರ
ಐತಿಹಾಸಿಕ ಮೈಲಿಗಲ್ಲು ಎಂಬಂತೆ, ಮನ್ ಕೀ ಬಾತ್ನ 100ನೇ ಆವೃತ್ತಿಯನ್ನು ವಿಶ್ವಸಂಸ್ಥೆಯ ಪ್ರಧಾನ ಕಚೇರಿಯಲ್ಲಿ ರವಿವಾರ ನೇರಪ್ರಸಾರ ಮಾಡಲಾಗುತ್ತದೆ. “ಮನ್ ಕಿ ಬಾತ್’ ಎನ್ನುವುದು ಮಾಸಿಕ ರಾಷ್ಟ್ರೀಯ ಸಂಪ್ರದಾಯವಾಗಿ ರೂಪುಗೊಂ ಡಿದ್ದು, ಭಾರತದ ಅಭಿವೃದ್ಧಿಯ ಪಯಣ ದಲ್ಲಿ ಭಾಗಿಯಾಗಲು ಲಕ್ಷಾಂತರ ಮಂದಿಗೆ ಉತ್ತೇಜನ ನೀಡಿದೆ ಎಂದು ವಿಶ್ವ ಸಂಸ್ಥೆಯಲ್ಲಿರುವ ಭಾರತದ ಖಾಯಂ ರಾಯಭಾರ ಕಚೇರಿ ತಿಳಿಸಿದೆ. ಜಗತ್ತಿನ ಹೆಚ್ಚಿನ ದೇಶಗಳಲ್ಲಿ ಅದನ್ನು ನೇರ ಪ್ರಸಾರ ಮಾಡುವ ನಿಟ್ಟಿನಲ್ಲಿ ಕೂಡ ಕೇಂದ್ರ ಸರಕಾರ ಕ್ರಮ ಕೈಗೊಂಡಿದೆ. ವಿದೇಶಗಳ ಹಲವಾರು ಸಂಘಟನೆಗಳು ಮನ್ ಕೀ ಬಾತ್ನ ಪ್ರಸಾರ ಕ್ಕಾಗಿ ವಿಶೇಷ ವ್ಯವಸ್ಥೆಗಳನ್ನು ಮಾಡಿವೆ.
ಶಿಕ್ಷಣ, ತಳಮಟ್ಟದ ಸಂಶೋಧನೆ
“ಮನ್ ಕೀ ಬಾತ್’ನಲ್ಲಿ ಶಿಕ್ಷಣ, ಜನರಿಗೆ ಅಗತ್ಯವಾಗಿರುವ ಸಂಶೋಧನೆಗಳ ವಿಚಾ ರವೇ ಹೆಚ್ಚಾಗಿ ಪ್ರಸ್ತಾವವಾಗಿತ್ತು ಎಂದು ಇನ್ಸ್ಟಿಟ್ಯೂಟ್ ಆಫ್ ಮಾಸ್ ಕಮ್ಯುನಿಕೇಶನ್ನ ಸಂಶೋಧನೆಯಲ್ಲಿ ಗೊತ್ತಾಗಿದೆ. 116 ಮಾಧ್ಯಮ ಸಂಸ್ಥೆಗಳು, ಶಿಕ್ಷಣ ಸಂಸ್ಥೆಗಳಲ್ಲಿ ಇರುವವರನ್ನು ಸಂದರ್ಶನ ನಡೆಸಿದ ಸಂದರ್ಭದಲ್ಲಿ ಈ ಮಾಹಿತಿ ವ್ಯಕ್ತವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Goa: ಕ್ಯಾಲಂಗುಟ್ ಬೀಚ್ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾ*ವು, 20 ಮಂದಿ ರಕ್ಷಣೆ
Uttar Pradesh: 6 ಪುರುಷರ ವರಿಸಿ ವಂಚಿಸಿದ ಯುವತಿಯ ಗ್ಯಾಂಗ್ ಜೈಲಿಗೆ
Road Project: ಶಿರಾಡಿ ಘಾಟ್ ಸುರಂಗ ಯೋಜನೆಗೆ ಡಿಪಿಆರ್ ರಚಿಸಿ: ಕೇಂದ್ರ ಸೂಚನೆ
Hosur ವಿಮಾನ ನಿಲ್ದಾಣಕ್ಕೆ 2 ಸ್ಥಳ ನಿಗದಿಪಡಿಸಿದ ತಮಿಳುನಾಡು
GST: ಖರೀದಿ, ಮಾರಾಟ ದರದ ವ್ಯತ್ಯಾಸಕ್ಕಷ್ಟೇ 18% ಜಿಎಸ್ಟಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Shimoga: ಕೊಡಚಾದ್ರಿ ಸಮೀಪ ಟಿಟಿ- ಜೀಪ್ ಮುಖಾಮುಖಿ ಡಿಕ್ಕಿ: ಎಂಟು ಜನರಿಗೆ ಗಾಯ
Kundapura: ಅನೂಪ್ ಪೂಜಾರಿ ಪಾರ್ಥೀವ ಶರೀರ ಹುಟ್ಟೂರಿಗೆ; ತಾಯಿ, ಪತ್ನಿಯಿಂದ ಅಂತಿಮ ದರ್ಶನ
Mangaluru: ಪದವು ಜಂಕ್ಷನ್- ಶರ್ಬತ್ ಕಟ್ಟೆ ರಸ್ತೆಗೆ ಅಗತ್ಯವಿದೆ ಫುಟ್ಪಾತ್
Padil: ಡಿಸಿ ಕಚೇರಿ ಸಂಕೀರ್ಣಕ್ಕೆ ಚಿನ್ನದ ಬಣ್ಣದ ರಾಷ್ಟ್ರ ಲಾಂಛನ
Uppunda: ಪಾಳು ಕೆರೆ ಈಗ ಈಜುಕೊಳ!; ಚೌಂಡಿ ಕೆರೆಗೆ ಊರಿನ ಯುವಕರಿಂದ ಕಾಯಕಲ್ಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.