ಹಬ್ಬಗಳ ಸಂದರ್ಭದಲ್ಲಿ ಕೋವಿಡ್ ನಿಯಮಗಳನ್ನು ಮರೆಯಬೇಡಿ: ‘ಮನ್ ಕಿ ಬಾತ್’ನಲ್ಲಿ ಪ್ರಧಾನಿ ಮೋದಿ
Team Udayavani, Jul 25, 2021, 12:41 PM IST
ಹೊಸದಿಲ್ಲಿ: ಜನರು ಕೋವಿಡ್ ಲಸಿಕೆಯ ಭಯದಿಂದ ಹೊರಬರಬೇಕು. ಲಸಿಕೆ ಪಡೆದ ಬಳಿಕ ಜ್ವರ ಬರಬಹುದು. ಆದರೆ ಇದು ಕೆಲವು ಗಂಟೆಗಳಿಗೆ ಮಾತ್ರ. ಲಸಿಕೆ ಪಡೆಯುವುದನ್ನು ನಿರಾಕರಿಸಿವುದು ಅದಕ್ಕಿಂತ ಅಪಾಯಕಾರಿ. ಲಸಿಕೆ ಪಡೆಯದೇ ನೀವು ನಿಮ್ಮನ್ನು ಮಾತ್ರವಲ್ಲದೆ ನಿಮ್ಮ ಕುಟುಂಬ ಮತ್ತು ಊರಿನವರನ್ನೂ ಅಪಾಯಕ್ಕೆ ಸಿಲುಕಿಸುತ್ತೀರಿ ಎಂದು ಪ್ರಧಾನಿ ಮೋದಿ ಹೇಳಿದರು.
ಇಂದು ‘ಮನ್ ಕಿ ಬಾತ್’ ಆವೃತ್ತಿಯಲ್ಲಿ ಮಾತನಾಡಿದ ಅವರು ಜನರನ್ನು ಲಸಿಕೆ ಪಡೆಯಲು ಪ್ರೇರೇಪಿಸಿದರು.
ಮುಂಬರುವ ಎಲ್ಲಾ ಹಬ್ಬಗಳಿಗಾಗಿ ನಾನು ಜನರಿಗೆ ಶುಭ ಹಾರೈಸುತ್ತೇನೆ. ಆದರೆ ಕೋವಿಡ್ ಸೋಂಕು ಇನ್ನೂ ಸಂಪೂರ್ಣ ಹೋಗಿಲ್ಲ ಎಂದು ಮರೆಯಬಾರದು. ಹಬ್ಬಗಳ ಸಂದರ್ಭದಲ್ಲಿ ಕೋವಿಡ್ ನಿಯಮಗಳನ್ನು ಮರೆಯಬಾರದು ಎಂದು ಅವರು ಕರೆ ನೀಡಿದರು.
ಟೋಕಿಯೋ ಒಲಿಂಪಿಕ್ಸ್‌ನಲ್ಲಿ ಪಾಲ್ಗೊಂಡಿರುವ ಎಲ್ಲಾ ಕ್ರೀಡಾಪಟುಗಳಿಗೆ ನೀವು ಸ್ಪೂರ್ತಿ ತುಂಬಿ. ಸಾಮಾಜಿಕ ಜಾಲತಾಣದಲ್ಲಿ ನಡೆಯುತ್ತಿರುವ ಅಭಿಯಾನದಲ್ಲಿ ಪಾಲ್ಗೊಳ್ಳಿ ಎಂದು ಪ್ರಧಾನಿ ಮೋದಿ ಜನರಿಗೆ ಕರೆ ನೀಡಿದರು.
ಇದನ್ನೂ ಓದಿ:ವಿಶ್ವ ಕುಸ್ತಿ ಚಾಂಪಿಯನ್ ಶಿಪ್ ನಲ್ಲಿ ಬಂಗಾರ ಗೆದ್ದ ಭಾರತದ ಪ್ರಿಯಾ ಮಲಿಕ್
ಈ ಬಾರಿ ಆಗಸ್ಟ್ 15ರಂದು ಸ್ವಾತಂತ್ರ್ಯ ಮಹೋತ್ಸವದ ಅಮೃತ ಮಹೋತ್ಸವವನ್ನು ದೇಶ ಆಚರಣೆ ಮಾಡುತ್ತಿದೆ. ನಾವು 12 ಮಾರ್ಚ್‌ರಂದು ಅಮೃತ ಮಹೋತ್ಸವ ಯಾತ್ರೆಗೆ ಚಾಲನೆ ನೀಡಿದ್ದೇವೆ. ದೇಶದ ವಿವಿಧ ಭಾಗದಲ್ಲಿ ಹಲವಾರು ಕಾರ್ಯಕ್ರಮಗಳು ನಡೆಯುತ್ತಿವೆ. ಆಗಸ್ಟ್ 15ರಂದು ಎಷ್ಟು ಜನರು ಸಾಧ್ಯವೋ ಅಷ್ಟು ಜನರು ಸೇರಿಕೊಂಡು ರಾಷ್ಟ್ರಗೀತೆಯನ್ನು ಹಾಡಿ. ರಾಷ್ಟ್ರಗಾನ ಡಾಟ್ ಕಾಮ್ ಮೂಲಕದನ್ನು ರೆಕಾರ್ಡ್ ಮಾಡಲು ಅವಕಾಶವನ್ನು ನೀಡಲಾಗಿದೆ. ಈ ಅಭಿಯಾನದಲ್ಲಿ ಎಲ್ಲರೂ ಪಾಲ್ಗೊಳ್ಳಿ ಎಂದರು.
ಅಮೃತ ಮಹೋತ್ಸವ ಕಾರ್ಯಕ್ರಮವು ಸರ್ಕಾರಿ ಕಾರ್ಯಕ್ರಮವಲ್ಲ. ಇದು ದೇಶದ ಎಲ್ಲಾ ಜನರ ಕಾರ್ಯಕ್ರಮವಾಗಿದೆ. ನಿಮಗೆ ಎಲ್ಲೆಲ್ಲಿ ಸಾಧ್ಯವೋ ಅಲ್ಲಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಸ್ವಾತ್ರಂತ್ರ್ಯ ಸೇನಾನಿಗಳನ್ನು ನೆನಪಿಸಿಕೊಳ್ಳಿ ಎಂದು ಪ್ರಧಾನಿ ಮೋದಿ ಮನವಿ ಮಾಡಿದರು.
ಬಾಳೆ ಮರದ ನಾರಿನಿಂದ ಇಂದು ಹ್ಯಾಂಡ್ ಬ್ಯಾಗ್ ತಯಾರು ಮಾಡಲಾಗುತ್ತಿದೆ. ಇದರಿಂದ ಮಹಿಳೆಯರಿಗೆ ಅವರ ಗ್ರಾಮದಲ್ಲಿಯೇ ಉದ್ಯೋಗ ಸಿಕ್ಕಿದೆ. ಕರ್ನಾಟಕದ ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡದಲ್ಲಿ ಬಾಳೆಯ ವಿವಿಧ ಉತ್ಪನ್ನಗಳನ್ನು ಬಾಳೆ ಹಿಟ್ಟಿನಿಂದ ತಯಾರು ಮಾಡುತ್ತಿದ್ದಾರೆ. ಅದನ್ನು ಸಾಮಾಜಿಕ ಜಾಲತಾಣದಲ್ಲಿ ಪ್ರಚಾರ ಮಾಡುತ್ತಿದ್ದಾರೆ.
ಜಮ್ಮು ಮತ್ತು ಕಾಶ್ಮೀರ ಮತ್ತು ಹಿಮಾಚಲ ಪ್ರದೇಶ ರಾಜ್ಯಗಳಲ್ಲದೆ ಇಂದು ಮಣಿಪುರ ರಾಜ್ಯದಲ್ಲಿಯೂ ಸೇಬು ಬೆಳೆಯಾಗುತ್ತಿದೆ. ಹಿಮಾಚಲ ಪ್ರದೇಶದಲ್ಲಿ ತರಬೇತಿ ಮುಗಿಸಿಕೊಂಡು ಬಂದು ಇಂದು ಸೇಬು ಬೆಳೆಯುತ್ತಿದ್ದಾರೆ. ಈಗ ಹಲವು ರೈತರು ಇವರಿಂದ ಪ್ರೇರಣೆ ಪಡೆದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Passes Away: ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ವಿಧಿವಶ
Congress ಅಧಿವೇಶನದಿಂದ ಬಿಜೆಪಿ ಆತಂಕ, ಹೀಗಾಗಿ ಅಪಪ್ರಚಾರ: ಸುರ್ಜೇವಾಲಾ
Critical: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಆರೋಗ್ಯದಲ್ಲಿ ಏರುಪೇರು; ಏಮ್ಸ್‌ಗೆ ದಾಖಲು
RSS: ಮೋಹನ್ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್ ಪತ್ರಿಕೆ ಆಕ್ಷೇಪ
Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್ ಮಾತು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.