NDA ನಾಯಕನಾಗಿ ನರೇಂದ್ರ ಮೋದಿ ಅವಿರೋಧ ಆಯ್ಕೆ, ನಾಡಿದ್ದು ಪಟ್ಟಾಭಿಷೇಕ?

1962ರ ಬಳಿಕ ಸತತ 3ನೇ ಬಾರಿಗೆ ಮೋದಿ ಪ್ರಧಾನಿ ದಾಖಲೆ

Team Udayavani, Jun 6, 2024, 6:30 AM IST

NDA ನಾಯಕನಾಗಿ ನರೇಂದ್ರ ಮೋದಿ ಅವಿರೋಧ ಆಯ್ಕೆ, ನಾಡಿದ್ದು ಪಟ್ಟಾಭಿಷೇಕ?

ನವದೆಹಲಿ: ಲೋಕಸಭೆ ಚುನಾವಣೆಯಲ್ಲಿ 292 ಕ್ಷೇತ್ರಗಳನ್ನು ಗೆದ್ದಿರುವ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರ ರಚಿಸಲು ಮುಂದಾಗಿದ್ದು, ಎನ್‌ಡಿಎ ನಾಯಕರು ನರೇಂದ್ರ ಮೋದಿ ಅವರನ್ನು ತಮ್ಮ ನಾಯಕನನ್ನಾಗಿ ಬುಧವಾರ ಅವಿರೋಧವಾಗಿ ಆಯ್ಕೆ ಮಾಡಿದ್ದಾರೆ. ಪ್ರಧಾನಿಯಾಗಿ 3ನೇ ಬಾರಿಗೆ ಮೋದಿ ಅಧಿಕಾರ ಸ್ವೀಕರಿಸುವ ಸಾಧ್ಯತೆಗಳಿವೆ. ಇದರೊಂದಿಗೆ, ಮೋದಿ ಅವರು ಪ್ರಥಮ ಪ್ರಧಾನಿ ಪಂಡಿತ ಜವಾಹರ್‌ ಲಾಲ್‌ ನೆಹರು ಅವರ ದಾಖಲೆಯನ್ನು ಸರಿಗಟ್ಟಲಿದ್ದಾರೆ!

ಬುಧವಾರ ನರೇಂದ್ರ ಮೋದಿ ಅವರ ದಿಲ್ಲಿಯ ನಿವಾಸದಲ್ಲಿ ಎನ್‌ಡಿಎ ನಾಯಕ ಸಭೆ ನಡೆಯಿತು. ದೇಶದ ಒಳತಿಗಾಗಿ ಕೆಲಸ ಮಾಡುವ ಕುರಿತು ನಿರ್ಣಯವನ್ನು ಈ ವೇಳೆ ಅಂಗೀಕರಿಸಲಾಯಿತು. ಅಲ್ಲದೇ, ಸರ್ಕಾರ ರಚನೆ ಕುರಿತು 12 ಸ್ಥಾನ ಗೆದ್ದಿರುವ ಜೆಡಿಯು ಮತ್ತು 16 ಸ್ಥಾನ ಗೆದ್ದಿರುವ ಟಿಡಿಪಿ ನಾಯಕರು ತಮ್ಮ “ಬೆಂಬಲ ಪತ್ರ’ಗಳನ್ನು ನೀಡಿದ್ದಾರೆಂದು ತಿಳಿದು ಬಂದಿದೆ.

“ಶುಕ್ರವಾರ ಮತ್ತೆ ಎನ್‌ಡಿಎ ಎಲ್ಲ ಸಂಸದರು ಸಭೆ ಸೇರಿ ಮೋದಿ ಅವರನ್ನು ಔಪಚಾರಿಕವಾಗಿ ಸಂಸದೀಯ ನಾಯಕನನ್ನಾಗಿ ಆಯ್ಕೆ ಮಾಡಲಿದ್ದಾರೆ. ಬಳಿಕ ಎನ್‌ಡಿಎ ನಾಯಕರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಿ, ಸರ್ಕಾರ ರಚನೆಯ ಹಕ್ಕು ಮಂಡಿಸಲಿದ್ದಾರೆ” ಎಂದು ಸಭೆಯಲ್ಲಿ ಭಾಗಿಯಾಗಿದ್ದ ಎಚ್‌ಎಎಂ ನಾಯಕ ಜಿತನ್‌ ರಾಮ್‌ ಮಾಂಜಿØ ಹೇಳಿದ್ದಾರೆ. ಮೂಲಗಳ ಪ್ರಕಾರ, ಪ್ರಧಾನಿ ಮೋದಿ ಶನಿವಾರ ಅಧಿಕಾರ ಸ್ವೀಕರಿಸಲಿದ್ದಾರೆ.

ಬಗೆ ಹರಿದ ಗೊಂದಲ:
ಮಂಗಳವಾರ ಚುನಾವಣೆ ಫ‌ಲಿತಾಂಶ ಪ್ರಕಟವಾದ ಬಳಿಕ 234 ಸ್ಥಾನಗಳನ್ನು ಗೆದ್ದ ಕಾಂಗ್ರೆಸ್‌ ನೇತೃತ್ವದ ಇಂಡಿಯಾ ಒಕ್ಕೂಟವು ಸರ್ಕಾರ ರಚಿಸುವ ದಾವೆ ಮಾಡಿತ್ತು. ಹಾಗಾಗಿ ಸಾರ್ವಜನಿಕರಲ್ಲಿ ಗೊಂದಲ ಉಂಟಾಗಿತ್ತು. ಆದರೆ, ಬುಧವಾರ ಎಲ್ಲ ಗೊಂದಲ ದೂರಾಗಿದ್ದು, ಎನ್‌ಡಿಎ 3ನೇ ಅವಧಿಗೆ ಸರ್ಕಾರ ರಚಿಸುವುದು ನಿಕ್ಕಿಯಾಗಿದೆ.

ಸಭೆಯಲ್ಲಿ ಏನೇನಾಯ್ತು?
ಮೋದಿ ನಿವಾಸದಲ್ಲಿ ನಡೆದ ಸಭೆಯಲ್ಲಿ ಎನ್‌ಡಿಎ ನಾಯಕರು ಬಡವರು, ಮಹಿಳೆಯರು, ಯುವಕರು, ರೈತರು ಮತ್ತು ಸಮಾಜದಲ್ಲಿ ಹಿಂದುಳಿದವರ ಕಲ್ಯಾಣಕ್ಕಾಗಿ ಕೆಲಸ ಮಾಡುವ ನಿರ್ಣಯವನ್ನು ಕೈಗೊಂಡರು. ಪ್ರಧಾನಿ ನರೇಂದ್ರ ಮೋದಿ ಅವರ ನಾಯಕ್ವತದಲ್ಲಿ ನಾವೆಲ್ಲರೂ ಒಗ್ಗಟ್ಟಾಗಿ 2024ರ ಲೋಕಸಭೆ ಚುನಾವಣೆಯಲ್ಲಿ ಹೋರಾಡಿ, ಗೆದ್ದಿದ್ದೇವೆ. ಇದಕ್ಕಾಗಿ ಹೆಮ್ಮೆ ಪಡುತ್ತೇವೆ. ನಾವು ಎನ್‌ಡಿಎ ನಾಯಕರು ಎಲ್ಲರೂ ನರೇಂದ್ರ ಮೋದಿ ಅವರನ್ನು ಅವಿರೋಧವಾಗಿ ನಾಯಕನನ್ನಾಗಿ ಆಯ್ಕೆ ಮಾಡುತ್ತಿದ್ದೇವೆ ಎಂದು ನಿರ್ಣಯದಲ್ಲಿ ತಿಳಿಸಲಾಗಿದೆ.

ಎನ್‌ಡಿಎ ಯಾರ್ಯಾರು ಭಾಗಿಯಾಗಿದ್ದರು?
ಟಿಡಿಪಿ ನಾಯಕ ನಾಯಕ ಚಂದ್ರಬಾಬು ನಾಯ್ಡು, ಬಿಹಾರ ಮುಖ್ಯಮಂತ್ರಿ ನಿತೀಶ್‌ ಕುಮಾರ್‌, ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್‌ ಶಿಂಧೆ, ಮಾಜಿ ಸಿಎಂ ಕುಮಾರಸ್ವಾಮಿ, ಎಲ್‌ಜೆಪಿ(ಆರ್‌) ನಾಯಕ ಚಿರಾಗ್‌ ಪಾಸ್ವಾನ್‌, ಎನ್‌ಸಿಪಿ ನಾಯಕ ಪ್ರಫ‌ುಲ್‌ ಪಟೇಲ್‌ 21 ನಾಯಕರು ಸಭೆಯಲ್ಲಿ ಭಾಗವಹಿಸಿದ್ದರು. ಇವರ ಜತೆಗೆ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ನಾಯಕರಾದ ಅಮಿತ್‌ ಶಾ, ರಾಜನಾಥ್‌ ಸಿಂಗ್‌ ಭಾಗವಹಿಸಿದ್ದರು.

ಟಾಪ್ ನ್ಯೂಸ್

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

1-sidd-nirmala

NABARD ಸಾಲ ಮಿತಿ ಹೆಚ್ಚಿಸಿ: ನಿರ್ಮಲಾಗೆ ಸಿಎಂ ಮನವಿ

Udupi: ಗೀತಾರ್ಥ ಚಿಂತನೆ 101: ಸಾರ್ವತ್ರಿಕವಾದರೆ ದುಃಖಶಮನ

Udupi: ಗೀತಾರ್ಥ ಚಿಂತನೆ 101: ಸಾರ್ವತ್ರಿಕವಾದರೆ ದುಃಖಶಮನ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾCourt: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-kasturi

Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!

adani (2)

Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ

Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್‌ ಬಗ್ಗೆ ಸುಪ್ರೀಂ ಹೇಳಿದ್ದೇನು?

Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್‌ ಬಗ್ಗೆ ಸುಪ್ರೀಂ ಹೇಳಿದ್ದೇನು?

Delhi Polls: 11 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಆಪ್… ಯಾರಿಗೆ ಯಾವ ಕ್ಷೇತ್ರ

Delhi Polls: 11 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಆಪ್… ಯಾರಿಗೆ ಯಾವ ಕ್ಷೇತ್ರ

Viral Video: ನೀರಿನಿಂದ ಜಿಗಿದು ಹಾವನ್ನೇ ಬೇಟೆಯಾಡಲು ಹೋದ ಮೀನು… ಕೊನೆಗೆ ಆಗಿದ್ದೇನು?

Viral Video: ಬೇಟೆಗೆ ಹೊಂಚು ಹಾಕುತ್ತಿದ್ದ ಹಾವನ್ನೇ ಬೇಟೆಯಾಡಲು ಮುಂದಾದ ಮೀನು…

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Hejamadi: ವಿಷದ ಹಾವು ಕಚ್ಚಿ ವ್ಯಕ್ತಿ ಸಾವು

Hejamadi: ವಿಷದ ಹಾವು ಕಚ್ಚಿ ವ್ಯಕ್ತಿ ಸಾವು

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Shirva: ಮಲಗಿದಲ್ಲೇ ವ್ಯಕ್ತಿ ಸಾವು; ಪ್ರಕರಣ ದಾಖಲು

Shirva: ಮಲಗಿದಲ್ಲೇ ವ್ಯಕ್ತಿ ಸಾ*ವು; ಪ್ರಕರಣ ದಾಖಲು

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.