ಮೋದಿ ಅಪ್ಪನ ಬಗ್ಗೆ ಯಾರಿಗೂ ಗೊತ್ತಿಲ್ಲ
Team Udayavani, Nov 26, 2018, 9:02 AM IST
ಹೊಸದಿಲ್ಲಿ:ಸಿ.ಪಿ.ಜೋಷಿ, ರಾಜ್‌ಬಬ್ಬರ್ ಬಳಿಕ ಕಾಂಗ್ರೆಸ್‌ನ ಮತ್ತೂಬ್ಬ ನಾಯಕ ಈಗ ವಿವಾದಾತ್ಮಕ ಹೇಳಿಕೆ ನೀಡುವ ಮೂಲಕ ಪಕ್ಷಕ್ಕೆ ಮುಜುಗರ ಉಂಟುಮಾಡಿದ್ದಾರೆ. ರಾಜ ಸ್ಥಾನದಲ್ಲಿ ಶನಿವಾರ ಪಕ್ಷದ ಸಭೆಯಲ್ಲಿ ಮಾತನಾಡಿದ ಕೇಂದ್ರದ ಮಾಜಿ ಸಚಿವ ವಿಲಾಸ್ ಮುತ್ತೆಮಾÌರ್, “ಪ್ರಧಾನಿ ಆಗುವ ಮೊದಲು ಮೋದಿ ಬಗ್ಗೆ ಯಾರಿಗೆ ಗೊತ್ತಿತ್ತು? ಈಗಲೂ ಮೋದಿ ಅವರ ತಂದೆಯ ಹೆಸರು ಯಾರಿಗೂ ಗೊತ್ತಿಲ್ಲ. ಆದರೆ, ರಾಹುಲ್ ಗಾಂಧಿ ಅವರ ಅಪ್ಪ, ಅಜ್ಜಿ- ತಾತ ಎಲ್ಲರ ಹೆಸರೂ ಇಡೀ ಜಗತ್ತಿಗೇ ಗೊತ್ತು’ ಎಂದಿದ್ದಾರೆ.
ಇವರ ಈ ಹೇಳಿಕೆಯ ವಿಡಿಯೋ ಈಗ ವೈರಲ್ ಆಗಿದೆ. ಇದಕ್ಕೆ ಪ್ರತಿಕ್ರಿಯಿಸಿರುವ ಮುತ್ತೆ ಮಾÌರ್, ವಿಡಿಯೋವನ್ನು ತಿರುಚಲಾಗಿದೆ ಎಂದು ಆರೋಪಿಸಿದ್ದಾರೆ.
ಮೋದಿ ಆಕ್ರೋಶ: ಕಾಂಗ್ರೆಸ್ ನಾಯಕನ ವಿವಾದಿತ ಹೇಳಿಕೆಯನ್ನು ಪ್ರಧಾನಿ ಮೋದಿ ಅವರು ರಾಜಸ್ಥಾನ ಹಾಗೂ ಮಧ್ಯಪ್ರದೇಶದ ರ್ಯಾಲಿಯಲ್ಲಿ ಪ್ರಸ್ತಾವಿಸಿದ್ದಲ್ಲದೆ, ಆಕ್ರೋಶ ವನ್ನೂ ವ್ಯಕ್ತಪಡಿಸಿದ್ದಾರೆ. ನನ್ನ ಜಾತಿ ಬಗ್ಗೆ ಮತದಾರರು ತಲೆಕೆಡಿಸಿಕೊಳ್ಳುತ್ತಿಲ್ಲ. ಆದರೆ, ಕಾಂಗ್ರೆಸ್ ತಲೆಕೆಡಿಸಿಕೊಳ್ಳುತ್ತಿದೆ. ಅಧ್ಯಕ್ಷ ರಾಹುಲ್‌ಗಾಂಧಿ ಅವರ ಆಣತಿಯಂತೆ ನನ್ನ ಹೆತ್ತವರ ಬಗ್ಗೆ ಅವಹೇಳನ ಮಾಡಲಾಗುತ್ತಿದೆ. ನಿನ್ನೆ ನನ್ನ ಅಮ್ಮನ ಹೆಸರು, ಇಂದು ನನ್ನ ಅಪ್ಪನ ಹೆಸರನ್ನೆತ್ತಿ ಅವಹೇಳನ ಮಾಡಲಾಗಿದೆ. ನನ್ನ ಹೆತ್ತವರು ಯಾವುದೇ ಸಾರ್ವಜನಿಕ ಹುದ್ದೆ ಹೊಂದಿದವರಲ್ಲ, ಆದರೂ, ಅವರ ಹೆಸರನ್ನು ರಾಜಕೀಯಕ್ಕೆ ಎಳೆದುತರಲಾಗುತ್ತಿದೆ. ನಾನು ಯಾರ ಕುಟುಂಬದ ಬಗ್ಗೆಯೂ ಮಾತನಾಡಿಲ್ಲ ಎಂದಿದ್ದಾರೆ ಮೋದಿ.ಪ್ರಧಾನಿ ಹೇಳಿಕೆಗೆ ಪ್ರತಿಕ್ರಿಯಿಸಿ ಟ್ವೀಟ್ ಮಾಡಿರುವ ಜಮ್ಮು-ಕಾಶ್ಮೀರ ಮಾಜಿ ಸಿಎಂ ಒಮರ್ ಅಬ್ದುಲ್ಲಾ, “ಮೋದಿ ಅವರೂ ಎಷ್ಟೋ ಬಾರಿ ಸೋನಿಯಾ ಗಾಂಧಿ ಅವರ ಹೆತ್ತವರ ಕುರಿತು ತಮ್ಮ ಭಾಷಣದಲ್ಲಿ ಪ್ರಸ್ತಾಪಿಸಿ, ಟೀಕಿಸಿರಲಿಲ್ಲವೇ’ ಎಂದು ಪ್ರಶ್ನಿಸಿದ್ದಾರೆ.
ನಕ್ಸಲರು ಜೈಲಿಗೆ: ತೆಲಂಗಾಣದಲ್ಲಿ ಚುನಾವಣಾ ರ್ಯಾಲಿಯಲ್ಲಿ ಮಾತನಾಡಿದ ಬಿಜೆಪಿ ಅಧ್ಯಕ್ಷ ಅಮಿತ್ ಶಾ, “ತೆಲಂಗಾಣದಲ್ಲಿ ನೂರಾರು ಮಂದಿ ನಕ್ಸಲ್ ದಾಳಿಗೆ ಬಲಿಯಾಗಿದ್ದರೂ, ರಾಹುಲ್ ಬಾಬಾ ನಗರ ನಕ್ಸಲರಿಗೆ ಬೆಂಬಲ ನೀಡುತ್ತಿದ್ದಾರೆ. ಇಲ್ಲಿ ಬಿಜೆಪಿ ಸರಕಾರ ಅಧಿಕಾರಕ್ಕೆ ಬಂದರೆ ಎಲ್ಲ ಮಾವೋವಾದಿಗಳನ್ನೂ ಜೈಲಿಗಟ್ಟುತ್ತೇವೆ’ ಎಂದಿದ್ದಾರೆ.
ನಗದಿಗೆ ಮಿತಿ: ಚುನಾವಣಾ ಅಕ್ರಮಗಳನ್ನು ತಡೆಯುವ ಸಲುವಾಗಿ ಚುನಾವಣಾ ಆಯೋಗವು, ಅಭ್ಯರ್ಥಿಗಳು ಪ್ರಚಾರಕ್ಕೆ ಬಳಸುವ ನಗದು ಮಿತಿಯನ್ನು 20 ಸಾವಿರ ರೂ.ಗಳಿಂದ 10 ಸಾವಿರ ರೂ.ಗಳಿಗೆ ಮಿತಿಗೊಳಿಸಿ ರವಿವಾರ ಆದೇಶ ಹೊರಡಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Henley Passport Index: ಸಿಂಗಾಪುರಕ್ಕೆ ಮೊದಲ ಸ್ಥಾನ: ಭಾರತದ ಪಾಸ್‌ಪೋರ್ಟ್ ಎಷ್ಟು ಸದೃಢ?
Dense Fog: ದೆಹಲಿ-ಲಖನೌ ಹೆದ್ದಾರಿಯಲ್ಲಿ ಸರಣಿ ಅಪಘಾತ, ವಿಮಾನ, ರೈಲು ಸಂಚಾರದಲ್ಲಿ ವ್ಯತ್ಯಯ
ಸೊಸೆಯಾಗಿ ಬರಬೇಕಾಗಿದ್ದವಳನ್ನೇ ಮದುವೆಯಾದ ಅಪ್ಪ… ಬೇಸರದಿಂದ ಸನ್ಯಾಸಿಯಾಗಲು ಹೊರಟ ಮಗ
Bhopal: ಬಿಜೆಪಿ ಮಾಜಿ ಶಾಸಕ ಸಿಂಗ್ ನಿವಾಸದ ಮೇಲೆ ಐಟಿ ದಾಳಿ; ನಗದು, 3 ಮೊಸಳೆ ಪತ್ತೆ!
ಪರೀಕ್ಷೆಯಿಂದ ತಪ್ಪಿಸಿಕೊಳ್ಳಲು 23ಶಾಲೆಗೆ ಬಾಂಬ್ ಬೆದರಿಕೆ ಹಾಕಿದ್ದ 12ನೇ ತರಗತಿ ವಿದ್ಯಾರ್ಥಿ
MUST WATCH
ಹೊಸ ಸೇರ್ಪಡೆ
Nanthoor: ಮನೆಯಿಂದ ಮಣ್ಣು ತಂದು ರಸ್ತೆಗುಂಡಿ ಮುಚ್ಚುವ ಹಿರಿಯ!
Gadag; ಶಿರಹಟ್ಟಿ ಕ್ಷೇತ್ರದ ಶಾಸಕ ಚಂದ್ರು ಲಮಾಣಿ ಕಾರು ಚಾಲಕ ಆತ್ಮಹತ್ಯೆ
Vijayapura: ಕುರಿಗಾಯಿ, ಕೂಲಿಕಾರ, ರೈತರ ಮಕ್ಕಳಿಗೆ ‘ಬಂಗಾರ’ದ ಕಳೆ…
ಕಂಬಳದಲ್ಲಿ ನಿಯಮಗಳು ಆಟಕ್ಕುಂಟು ಲೆಕ್ಕಕ್ಕಿಲ್ಲ..? ಸಮಸ್ಯೆ ನೂರು- ಪರಿಹಾರ ಕೊಡುವವರು ಯಾರು?
Henley Passport Index: ಸಿಂಗಾಪುರಕ್ಕೆ ಮೊದಲ ಸ್ಥಾನ: ಭಾರತದ ಪಾಸ್‌ಪೋರ್ಟ್ ಎಷ್ಟು ಸದೃಢ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.