30ರಿಂದ ಮೋದಿ 2.0 ಸಾಧನಾ ಅಭಿಯಾನ ; ಕೇಂದ್ರದಲ್ಲಿ 2ನೇ ಸರಕಾರದ ಮೊದಲ ವಾರ್ಷಿಕೋತ್ಸವ ಸಂಭ್ರಮ
ಮನೆಮನೆಗಳಿಗೆ ಮೋದಿ ಹಸ್ತಾಕ್ಷರದಲ್ಲಿ ಸಾಧನೆಗಳ ವಿವರಣಾ ಪತ್ರ ಕಳಿಸಲು ಪ್ಲಾನ್
Team Udayavani, May 29, 2020, 2:20 AM IST
ಹೊಸದಿಲ್ಲಿ: ಪ್ರಧಾನಿ ನರೇಂದ್ರ ಮೋದಿಯವರು ಕೇಂದ್ರದಲ್ಲಿ ಎರಡನೇ ಬಾರಿ ಅಧಿಕಾರಕ್ಕೆ ಬಂದು ಮೇ 30ಕ್ಕೆ ಒಂದು ವರ್ಷ ಪೂರೈಸಲಿದೆ.
ಹೀಗಾಗಿ ಸರಕಾರದ ಸಾಧನೆಗಳನ್ನು ಜನರತ್ತ ಕೊಂಡೊಯ್ಯುವ ವಿವಿಧ ರೀತಿಯ ವಿಶೇಷ ಅಭಿಯಾನಗಳನ್ನು ಆರಂಭಿಸಲು ಬಿಜೆಪಿ ನಿರ್ಧರಿಸಿದೆ.
ಮೇ 30ರಂದು ಈ ಅಭಿಯಾನಗಳಿಗೆ ಚಾಲನೆ ದೊರೆಯಲಿದೆ. 2019ರ ಮೇ 30 ರಂದು ಮೋದಿ ಸರ್ಕಾರ ಸತತ ಎರಡನೇ ಬಾರಿಗೆ ಅಸ್ತಿತ್ವಕ್ಕೆ ಬಂದಿತ್ತು.
ಮೋದಿಯವರ ಸರಕಾರದ ಸಾಧನೆಯನ್ನು ಜನರಿಗೆ ತಲುಪಿಸುವ ಸಲುವಾಗಿ, ದೇಶಾದ್ಯಂತ 750 ವಿಶೇಷ ಜಾಥಾಗಳನ್ನು ನಡೆಸಲು ನಿರ್ಧರಿಸಲಾಗಿದೆ. ಲಾಕ್‌ಡೌನ್ ನಿಬಂಧನೆಗಳನ್ನು ಮೀರದಂತೆ ಈ ಜಾಥಾಗಳನ್ನು ನಡೆಸಲಾಗುತ್ತದೆ.
ಅವುಗಳ ಜೊತೆಗೆ 1,000 ವರ್ಚ್ಯುವಲ್ ವಿಡಿಯೋ ಕಾನ್ಫರೆನ್ಸ್‌ಗಳನ್ನು ನಡೆಸಲು ನಿರ್ಧರಿಸಲಾಗಿದೆ. ಅದರಲ್ಲಿ ರಾಷ್ಟ್ರಮಟ್ಟದ ಹಾಗೂ ವಿವಿಧ ರಾಜ್ಯಗಳ ಬಿಜೆಪಿ ನಾಯಕರು ಪಾಲ್ಗೊಳ್ಳಲಿದ್ದಾರೆ. ಇದಲ್ಲದೆ, ಮೋದಿಯವರ 2ನೇ ಅವಧಿಯ ಸರಕಾರದ ಸಾಧನೆಗಳ ಬಗ್ಗೆ ವಿಡಿಯೋ ಸಾಕ್ಷ್ಯಚಿತ್ರ ಬಿಡುಗಡೆ ಮಾಡಲಾಗುತ್ತದೆ.
ಮನೆಮನೆಗೆ ಪತ್ರ: ದೇಶದ 10 ಕೋಟಿ ಮನೆಗಳಿಗೆ ಮೋದಿಯವರ ಹಸ್ತಾಕ್ಷರದಲ್ಲಿ ಬರೆಯಲಾಗಿರುವ ಪತ್ರಗಳನ್ನು ರವಾನಿಸಲು ತೀರ್ಮಾನಿಸಲಾಗಿದೆ. ಅದರಲ್ಲಿ, ಭಾರತವನ್ನು ಸ್ವಾವಲಂಬಿ ರಾಷ್ಟ್ರವನ್ನಾಗಿಸುವಲ್ಲಿ ಕೈಗೊಳ್ಳಲಾಗಿರುವ ಕ್ರಮಗಳು, ಯೋಜನೆಗಳ ಬಗ್ಗೆ ಮಾಹಿತಿ ನೀಡಲಾಗಿರುತ್ತದೆ. ಅದೇ ಪತ್ರದಲ್ಲಿ, ಕೋವಿಡ್ ವೈರಸನ್ನು ತಡೆಗಟ್ಟಲು ಕೇಂದ್ರ ಕೈಗೊಂಡ ಕ್ರಮಗಳ ಬಗ್ಗೆಯೂ ವಿವರಿಸಲಾಗುತ್ತದೆ.
ಸುವರ್ಣಾಕ್ಷರದ ಸಾಧನೆ
ಕಾಶ್ಮೀರದ ವಿಶೇಷ ಸ್ಥಾನಮಾನಕ್ಕೆ ಕಾರಣವಾಗಿದ್ದ ಸಂವಿಧಾನದ 370ನೇ ಕಲಂ ತಿದ್ದುಪಡಿ ಮಾಡಿ ಆ ರಾಜ್ಯವನ್ನು ಎರಡು ಕೇಂದ್ರಾಡಳಿತ ಪ್ರದೇಶಗಳನ್ನಾಗಿ ವಿಂಗಡಿಸಿದ್ದು, ತ್ರಿವಳಿ ತಲಾಖ್ ಅನ್ನು ಕಾನೂನು ಬಾಹಿರವೆಂದು ಘೋಷಿಸಿದ್ದು, ರಾಮಜನ್ಮಭೂಮಿ ವಿವಾದ ಸುಖಾಂತ್ಯಗೊಳಿಸಿ ಅಲ್ಲಿ ರಾಮಮಂದಿರ ನಿರ್ಮಾಣಕ್ಕೆ ಅನುವು ಮಾಡಿಕೊಟ್ಟಿದ್ದು ಮೋದಿಯವರ ಎರಡನೇ ಅವಧಿಯ ಸರ್ಕಾರದ ಅತಿ ಮಹತ್ವದ ಸಾಧನೆಗಳಾಗಿವೆ.
ಈ ಸಾಧನೆಗಳನ್ನು ಇತಿಹಾಸದ ಪುಟಗಳಲ್ಲಿ ಸುವರ್ಣಾಕ್ಷರಗಳಲ್ಲಿ ಬರೆದಿಡಲಾಗುತ್ತದೆ ಎಂದು ಬಿಜೆಪಿ ಹೇಳಿದೆ. ಇದೇ ಅವಧಿಯಲ್ಲಿ ವಿಶ್ವದ ಅತಿ ವಿಖ್ಯಾತ ಜನನಾಯಕ ಎಂಬ ಹೆಗ್ಗಳಿಕೆಯನ್ನು ಮೋದಿಯವರು ಪಡೆದಿದ್ದು, ಈ ದೇಶದ ಜನತೆಯ ಆಶೋತ್ತರಗಳಿಗೆ ಅನುಗುಣವಾಗಿ ದೇಶವನ್ನು ಮುನ್ನಡೆಸುತ್ತಿದ್ದಾರೆ ಎಂದು ಪಕ್ಷ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ
Mumbai: ಗೇಟ್‌ವೇ ಆಫ್ ಇಂಡಿಯಾ ಬಳಿ ಮುಳುಗಿದ 67 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು
Umar Khalid: ದೆಹಲಿ ಗಲಭೆ ಪ್ರಕರಣದ ಆರೋಪಿ ಉಮರ್ ಖಾಲಿದ್‌ಗೆ 7 ದಿನಗಳ ಮಧ್ಯಂತರ ಜಾಮೀನು
Loksabha:ಕಾಂಗ್ರೆಸ್ ಅಂಬೇಡ್ಕರ್ ಗೆ ಹಲವು ಬಾರಿ ಅವಮಾನ ಮಾಡಿದೆ: ಪ್ರಧಾನಿ ಮೋದಿ ತಿರುಗೇಟು
SC;ಪ್ರಕರಣಗಳ ವರ್ಗಾವಣೆ:ಪ್ರತಿಕ್ರಿಯಿಸಲು ಯಾಸಿನ್ ಮಲಿಕ್ ಸೇರಿ ಐವರಿಗೆ 2 ವಾರ ಕಾಲಾವಕಾಶ
MUST WATCH
ಹೊಸ ಸೇರ್ಪಡೆ
Belagavi: ಮಹಿಳೆಯರ ಸಬಲರಾಗಿಸುವ ಗೃಹಲಕ್ಷ್ಮಿ ಯೋಜನೆ ನಿಲ್ಲಿಸುವ ಮಾತೇ ಇಲ್ಲ: ಸಿದ್ದರಾಮಯ್ಯ
Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ
ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು
Mulabagilu: ಭೀಕರ ಅಪಘಾತ: ದ್ವಿಚಕ್ರ ವಾಹನಗಳಿಗೆ ಬೊಲೆರೋ ಢಿಕ್ಕಿ, ನಾಲ್ವರ ಮೃತ್ಯು!
Karnataka: “ಸೈಬರ್ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.