![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
Team Udayavani, May 25, 2019, 6:00 AM IST
ಸಂಪುಟ ಸಭೆಯ ಬಳಿಕ ಸಚಿವರಾದ ಸ್ಮತಿ ಇರಾನಿ, ಮುಖ್ತಾರ್ ಅಬ್ಟಾಸ್ ನಖ್ವೀ, ನರೇಂದ್ರ ಸಿಂಗ್ ತೋಮರ್ ನವದೆಹಲಿಯಲ್ಲಿ ಸೌತ್‌ಬ್ಲಾಕ್‌ನಿಂದ ಹೊರಬರುತ್ತಿರುವುದು.
ನವದೆಹಲಿ: ಚುನಾವಣಾ ಫಲಿತಾಂಶ ಪ್ರಕಟವಾಗುತ್ತಲೇ, 17ನೇ ಲೋಕಸಭೆ ರಚನೆಗೆ ಪ್ರಕ್ರಿಯೆ ಶುರುವಾಗಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟ ಶುಕ್ರವಾರ ನವದೆಹಲಿಯಲ್ಲಿ ಸಭೆ ಸೇರಿ 16ನೇ ಲೋಕಸಭೆ ವಿಸರ್ಜನೆಗೆ ಶಿಫಾರಸು ಮಾಡಿತು. ಇದೇ ಸಂದರ್ಭದಲ್ಲಿ ಹಾಲಿ ಕೇಂದ್ರ ಸಂಪುಟದ ಎಲ್ಲಾ ಸಚಿವರು ಪ್ರಧಾನಿ ಮೋದಿಗೆ ರಾಜೀನಾಮೆ ನೀಡಿದ್ದಾರೆ. ಸಂಪುಟ ಸಭೆಯ ಬಳಿಕ ಪ್ರಧಾನಿ ನರೇಂದ್ರ ಮೋದಿ ರಾಷ್ಟ್ರಪತಿ ಭವನಕ್ಕೆ ತೆರಳಿ ರಾಷ್ಟ್ರಪತಿ ರಾಮನಾಥ ಕೋವಿಂದ್‌ರನ್ನು ಭೇಟಿಯಾಗಿ ಸಂಪುಟ ಸದಸ್ಯರ ರಾಜೀನಾಮೆ ಸಲ್ಲಿಸಿದರು. ಜತೆಗೆ 16ನೇ ಲೋಕಸಭೆ ವಿಸರ್ಜನೆಯ ಬಗ್ಗೆ ಶಿಫಾರಸು ಮಾಡಿದರು. ರಾಷ್ಟ್ರಪತಿ ಅದನ್ನು ಅಂಗೀಕರಿಸಿದ್ದಾರೆ ಹಾಗೂ ಹೊಸ ಸರ್ಕಾರ ರಚನೆಯಾಗುವವರೆಗೆ ಪ್ರಧಾನಿ ಹುದ್ದೆಯಲ್ಲಿ ಮುಂದುವರಿಯುವಂತೆ ಸೂಚಿಸಿದ್ದಾರೆ.
ರಾಷ್ಟ್ರಪತಿ ಕೋವಿಂದ್ ಪ್ರಧಾನಿ ಮೋದಿ ಮತ್ತು ಅವರ ಸಂಪುಟ ಸದಸ್ಯರ ಗೌರವಾರ್ಥ ರಾಷ್ಟ್ರಪತಿ ಭವನದಲ್ಲಿ ಶುಕ್ರವಾರ ರಾತ್ರಿ ಔತಣಕೂಟ ಏರ್ಪಡಿಸಿದ್ದರು. ಜೂ.3ರ ಒಳಗಾಗಿ 17ನೇ ಲೋಕಸಭೆ ರಚನೆಯಾಗಬೇಕು. ಅದಕ್ಕಿಂತ ಮೊದಲು ಚುನಾವಣಾ ಆಯೋಗದ ಮೂವರು ಸದಸ್ಯರು ರಾಷ್ಟ್ರಪತಿಯವರನ್ನು ಭೇಟಿಯಾಗಿ ನೂತನವಾಗಿ ಚುನಾಯಿತರಾದ ಸದಸ್ಯರ ವಿವರಗಳನ್ನು ಸಲ್ಲಿಸಲಿದ್ದಾರೆ.
ಅಡ್ವಾಣಿ, ಜೋಶಿ ಭೇಟಿ: ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ಅಧ್ಯಕ್ಷ ಅಮಿತ್ ಶಾ ಪಕ್ಷದ ಹಿರಿಯ ನಾಯಕರಾದ ಎಲ್.ಕೆ.ಅಡ್ವಾಣಿ, ಡಾ.ಮುರಳೀ ಮನೋಹರ ಜೋಶಿ ಅವರನ್ನು ಭೇಟಿಯಾಗಿದ್ದರು. ಅಡ್ವಾಣಿಯವರ ನಿವಾಸಕ್ಕೆ ತೆರಳಿದ ಸಂದರ್ಭದಲ್ಲಿ ಪ್ರಧಾನಿ ಮೋದಿ ಹಿರಿಯ ನಾಯಕನ ಕಾಲಿಗೆ ಎರಗಿ ಆಶೀರ್ವಾದ ಪಡೆದುಕೊಂಡರು. ಅದಕ್ಕೆ ಸಂಬಂಧಿಸಿದ ಫೋಟೋವನ್ನು ಮೋದಿ ಟ್ವೀಟ್ ಮಾಡಿ ಹಿರಿಯ ನಾಯಕ ನಿವಾಸಕ್ಕೆ ತೆರಳಿಗೆ ಆಶೀರ್ವಾದ ಪಡೆದಿದ್ದಾಗಿ ಬರೆದುಕೊಂಡಿದ್ದಾರೆ.
ಮೋದಿ ಮತ್ತು ಅಮಿತ್ ಶಾ ಉತ್ತಮ ಸಾಧನೆ ಮಾಡಿ, ದಾಖಲೆಯ ವಿಜಯ ಸಂಪಾದಿಸಿದ್ದಾರೆ. ನಮ್ಮ ಪಕ್ಷದಲ್ಲಿ ಕಿರಿಯರು ಹಿರಿಯನ್ನು ಭೇಟಿಯಾಗಿ ಆಶೀರ್ವಾದ ಪಡೆಯುವುದು ಕ್ರಮ.
You seem to have an Ad Blocker on.
To continue reading, please turn it off or whitelist Udayavani.