ಮೋದಿ ಮೇಲೆ ಜನತೆಗೆ ಅಪಾರ ವಿಶ್ವಾಸ: ಅಮಿತ್ ಶಾ
Team Udayavani, May 12, 2022, 1:07 AM IST
ಗುವಾಹಾಟಿ: “ದೇಶದ ಕೋಟ್ಯಾನು ಕೋಟಿ ಜನತೆ ಮೋದಿಯವರ ಮೇಲೆ ಅಪಾರ ವಾದ ನಂಬಿಕೆಯನ್ನಿಟ್ಟಿದ್ದು, ಹೃದಯಾಂತರಾಳದಿಂದ ಅವರನ್ನು ಪ್ರೀತಿಸುತ್ತಾರೆ. ಹಾಗಾಗಿಯೇ ಅವರು ಯಾವುದೇ ರಾಜಕೀಯ ಹಿನ್ನೆಲೆಯಿಲ್ಲದಿದ್ದರೂ ರಾಜಕೀಯ ರಂಗದಲ್ಲಿ ಹಂತಹಂತವಾಗಿ ಮೇಲೇರಿ ಇಂದು ದೇಶದ ಪ್ರಧಾನಿಯಾಗಿದ್ದಾರೆ” ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ತಿಳಿಸಿದ್ದಾರೆ.
ಬುಧವಾರ ದಿಲ್ಲಿಯಲ್ಲಿ ಕೇಂದ್ರ ಗೃಹಸಚಿವ ಅಮಿತ್ ಶಾ, “ಮೋದಿ ಆ್ಯಟ್ 20: ಡ್ರೀಮ್ಸ್ ಮೀಟ್ ಡೆಲಿವರಿ’ ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಮಾತನಾಡಿದ ಅವರು, “ಮೋದಿಯವರು ಅಧಿಕಾರಕ್ಕೆ ಬಂದ ಮೇಲೆ ಬಿಜೆಪಿ ಬಗ್ಗೆ ಜನರಿಗಿದ್ದ ಹಲವಾರು ಅಭಿಪ್ರಾಯಗಳನ್ನು ಸುಳ್ಳೆಂದು ಸಾಬೀತು ಮಾಡಿದ್ದಾರೆ. ಹಾಗಾಗಿಯೇ, ಬಿಜೆಪಿಯು ಗುಜರಾತ್‌ನಿಂದ ಈಶಾನ್ಯ ರಾಜ್ಯಗಳವರೆಗೆ, ಅಸ್ಸಾಂನಿಂದ ಮಣಿಪುರವರೆಗೆ ಆಡಳಿತ ನಡೆಸುತ್ತಿದೆ” ಎಂದಿದ್ದಾರೆ.
ವಿರೋಧಿಗಳೂ ಮೆಚ್ಚುತ್ತಾರೆ-ನಾಯ್ಡು: ಸಮಾರಂಭದಲ್ಲಿ ಮಾತನಾಡಿದ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು, “ಗಾಂಧೀಜಿ, ಅಗ್ರ ನಾಯಕರಿಗೆ ಮಾತ್ರ ಸೀಮಿತವಾಗಿದ್ದ ಸ್ವತಂತ್ರ ಚಳವಳಿ ಯನ್ನು ಜನಸಾಮಾನ್ಯರ ಚಳವಳಿಯ ನ್ನಾಗಿ ರೂಪಿಸಿದರು. ಹಾಗೆಯೇ ಮೋದಿ ಅಭಿವೃದ್ಧಿ ವಿಚಾರಗಳನ್ನು ಜನ ಸಾಮಾನ್ಯರ ಚಳವಳಿಯಾಗಿ ರೂಪಿಸಿದ್ದಾರೆ. ಅಭಿವೃದ್ಧಿ ಬಗ್ಗೆ ಅವರಿಗಿರುವ ವಿಚಾರಧಾರೆ, ದೂರದೃಷ್ಟಿತ್ವವನ್ನು ಮೋದಿಯವರ ಕಡು ವಿರೋಧಿಗಳೂ ಇಷ್ಟಪಡುತ್ತಾರೆ” ಎಂದು ಅವರು ಹೇಳಿದರು.
ಬಿಜೆಪಿ ಅಭಿಯಾನ
ಪ್ರಧಾನಿ ನರೇಂದ್ರ ಮೋದಿಯವರ ಸರಕಾರಕ್ಕೆ 8 ವರ್ಷ ಪೂರೈಸುತ್ತಿರುವ ಹಿನ್ನೆಲೆ ಬಿಜೆಪಿಯು ಮೇ 30ರಿಂದ 15 ದಿನಗಳ ರಾಷ್ಟ್ರಾದ್ಯಂತ ಅಭಿಯಾನ ನಡೆಸಲು ಸಿದ್ಧತೆ ಮಾಡಿಕೊಂಡಿದೆ. “8 ವರ್ಷ: ಸೇವೆ, ಉತ್ತಮ ಆಡಳಿತ ಮತ್ತು ಬಡವರ ಕಲ್ಯಾಣ’ ಹೆಸರಿನಲ್ಲಿ ನಡೆಯಲಿರುವ ಅಭಿಯಾನಕ್ಕೆ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ಚಾಲನೆ ನೀಡಲಿದ್ದಾರೆ. “ಅಲ್ಪಸಂಖ್ಯಾಕ ರೊಂದಿಗೆ ಸಂವಾದ’, “ಬುಡಕಟ್ಟು ಮೇಳ’, “ಬಿರ್ಸಾ ಮುದ್ರಾ ವಿಶ್ವಾಸ ರ್‍ಯಾಲಿ’ ಸೇರಿ ಅನೇಕ ಕಾರ್ಯಕ್ರಮಗಳನ್ನು ಈ ಅಭಿಯಾನದಲ್ಲಿ ನಡೆಸಲಾಗುವುದು. ಬಿಜೆಪಿ ಯುವ ಮೋರ್ಚಾ ಮತ್ತು ಭಾರತೀಯ ಯುವ ಜನ ಮೋರ್ಚಾಕ್ಕೆ ಪ್ರಭಾತ ಪೇರಿ ನಡೆಸುವ ಜವಾಬ್ದಾರಿ ಕೊಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Choreographer ರೆಮೋ ಡಿಸೋಜಾ ವಿರುದ್ಧದ ಪ್ರಕರಣ ದೆಹಲಿ ಕೋರ್ಟ್ ಗೆ ವರ್ಗಾಯಿಸಿದ ಸುಪ್ರೀಂ
Parliament; ಪ್ರಿಯಾಂಕಾ ಗಾಂಧಿ- ರಾಹುಲ್ ಜತೆ ಸೇರಿ ಬಿಜೆಪಿ ನಿದ್ದೆಗೆಡಿಸುತ್ತಾರೆ :ಪೈಲಟ್
Goa ಕರಾವಳಿಯಲ್ಲಿ ನೌಕಾಪಡೆಯ ಸಬ್ ಮರೈನ್ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!
Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
MUST WATCH
ಹೊಸ ಸೇರ್ಪಡೆ
Udupi: ಆರೆಸ್ಸೆಸ್ ಹಿರಿಯ ಪ್ರಚಾರಕ್ ಭಯ್ಯಾಜಿ ಜೋಷಿ ಶ್ರೀಕೃಷ್ಣಮಠಕ್ಕೆ ಭೇಟಿ
Bagalakote: ಪ್ರೇಯಸಿ ಗೆಳತಿ ಹತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!
Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ
Karnataka HC; ನಾಲ್ಕನೇ ಪ್ರಕರಣದಲ್ಲೂ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ
Sagara: ಟ್ರಾಫಿಕ್ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.