![Delhi-Stamp](https://www.udayavani.com/wp-content/uploads/2025/02/Delhi-Stamp-415x249.jpg)
![Delhi-Stamp](https://www.udayavani.com/wp-content/uploads/2025/02/Delhi-Stamp-415x249.jpg)
Team Udayavani, Jan 7, 2021, 9:19 AM IST
ಹೊಸದಿಲ್ಲಿ: ಅಮೆರಿಕದ ಸಂಸತ್ ಭವನದಲ್ಲಿ ಹಿಂಸಾಚಾರ ನಡೆದಿದ್ದು, ಟ್ರಂಪ್ ಬೆಂಬಲಿಗರು ಮತ್ತು ಪೊಲೀಸರ ನಡುವೆ ಸಂಘರ್ಷ ಏರ್ಪಟ್ಟಿದೆ. ಘಟನೆಯನ್ನು ಪ್ರಧಾನಿ ನರೇಂದ್ರ ಮೋದಿಯವರು ತೀವ್ರವಾಗಿ ಖಂಡಿಸಿದ್ದು, ಅಧಿಕಾರ ಹಸ್ತಾಂತರ ಶಾಂತಿಯುತವಾಗಿ ನಡೆಯಬೇಕು ಎಂದಿದ್ದಾರೆ.
ಈ ಬಗ್ಗೆ ಮೋದಿ ಟ್ವೀಟ್ ಮಾಡಿದ್ದು, ‘ವಾಷಿಂಗ್ಟನ್ ಡಿಸಿಯಲ್ಲಿ ಗಲಭೆ ಮತ್ತು ಹಿಂಸಾಚಾರದ ಸುದ್ದಿಯನ್ನು ನೋಡಿ ದುಃಖಿತವಾಗಿದೆ. ಅಧಿಕಾರ ಹಸ್ತಾಂತರವನ್ನು ಸುವ್ಯವಸ್ಥಿತ ಮತ್ತು ಶಾಂತಿಯುತವಾಗಿ ಮುಂದುವರಿಸಬೇಕು. ಪ್ರಜಾಪ್ರಭುತ್ವ ಪ್ರಕ್ರಿಯೆಯನ್ನು ಕಾನೂನು ಬಾಹಿರ ಪ್ರತಿಭಟನೆಗಳ ಮೂಲಕ ಬುಡಮೇಲು ಮಾಡಲು ಅವಕಾಶ ನೀಡಬಾರದು’ ಎಂದು ಹೇಳಿದ್ದಾರೆ.
ಇದನ್ನೂ ಓದಿ:ಅಮೆರಿಕ ಸಂಸತ್ ಗೆ ನುಗ್ಗಿದ ಟ್ರಂಪ್ ಬೆಂಬಲಿಗರು:ಸಂಘರ್ಷದಲ್ಲಿ ಓರ್ವ ಮಹಿಳೆ ಮೃತ್ಯು, ಕರ್ಫ್ಯೂ
ಅಮೆರಿಕದ ವಾಷಿಂಗ್ಟನ್ ಡಿಸಿಯ ಸಂಸತ್ ನಲ್ಲಿ ಎಲೆಕ್ಟೋರಲ್ ಮತಗಳನ್ನು ಎಣಿಸುವ ಮತ್ತು ಪ್ರಮಾಣೀಕರಿಸುವ ಪ್ರಕ್ರಿಯೆ ಸಾಗುತ್ತಿರುವ ಮಧ್ಯೆ ಭದ್ರತೆಯನ್ನು ಉಲ್ಲಂಘಿಸಿ ಕ್ಯಾಪಿಟೋಲ್ ಕಟ್ಟಡಕ್ಕೆ ನುಗ್ಗಿದ ನೂರಾರು ಪ್ರತಿಭಟನಾಕಾರರು ಧಾಂದಲೆ ನಡೆಸಿದರು. ತಡೆಯಲು ಮುಂದಾದ ಪೊಲೀಸರ ಜೊತೆ ಸಂಘರ್ಷವಾಗಿದ್ದು, ಘಟನೆಯಲ್ಲಿ ಮಹಿಳೆಯೋರ್ವರು ಮೃತಪಟ್ಟಿದ್ದಾರೆ. ಹಲವರು ಗಾಯಗೊಂಡಿದ್ದಾರೆ.
Distressed to see news about rioting and violence in Washington DC. Orderly and peaceful transfer of power must continue. The democratic process cannot be allowed to be subverted through unlawful protests.
— Narendra Modi (@narendramodi) January 7, 2021
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
You seem to have an Ad Blocker on.
To continue reading, please turn it off or whitelist Udayavani.