ಭಾರತ ಸಂಬಂಧ ಕೆಡಲು ಮೋದಿ ಪಾಕ್ ವಿರೋಧಿ ನೀತಿ ಕಾರಣ: ಇಮ್ರಾನ್ ಖಾನ್
Team Udayavani, Jul 5, 2018, 7:48 PM IST
ಇಸ್ಲಾಮಾಬಾದ್ : ಭಾರತ ಜತೆಗಿನ ಪಾಕ್ ಸಂಬಂಧಗಳು ಇಷ್ಟೊಂದು ಹಳಸಲು ಕಾರಣವೇ ಪ್ರಧಾನಿ ನರೇಂದ್ರ ಮೋದಿ ಮತ್ತು ಅವರ “ಆಕ್ರಮಣಕಾರಿ ಪಾಕ್ ವಿರೋಧಿ ನೀತಿ’ ಎಂದು ಪಾಕಿಸ್ಥಾನ ತೆಹರೀಕ್ ಎ ಇನ್ಸಾಫ್ (ಪಿಟಿಐ) ಪಕ್ಷದ ಮುಖ್ಯಸ್ಥ, ಮಾಜಿ ಕ್ರಿಕೆಟಿಗ, ಇಮ್ರಾನ್ ಖಾನ್ ಡಾನ್ ನ್ಯೂಸ್ ಗೆ ಹೇಳಿದ್ದಾರೆ.
ಭಾರತದ ಜತೆಗಿನ ಸಂಬಂಧವನ್ನು ಸುಧಾರಿಸಲು ಹಿಂದಿನ ಪ್ರಧಾನಿ ನವಾಜ್ ಷರೀಫ್ ಅವರು ತನ್ನಿಂದಾದ ಗರಿಷ್ಠ ಪ್ರಯತ್ನಗಳನ್ನು ಮಾಡಿದ್ದಾರೆ; ಆದರೆ ಭಾರತ ಸರಕಾರದ “ಆಕ್ರಮಣಕಾರಿ ಪಾಕ್ ವಿರೋಧಿ ನೀತಿ’ಯಿಂದಾಗಿ ಉಭಯ ದೇಶಗಳ ಸಂಬಂಧಗಳು ತೀವ್ರವಾಗಿ ಹದಗೆಟ್ಟಿವೆ ಎಂದು ಇಮ್ರಾನ್ ಖಾನ್ ಹೇಳಿದರು.
ಕಾಶ್ಮೀರದಲ್ಲಿ ಭಾರತ ನಡೆಸುತ್ತಿರುವ ಎಲ್ಲ ದೌರ್ಜನ್ಯಗಳಿಗೆ ಪಾಕಿಸ್ಥಾನವೇ ಕಾರಣ ಎಂದು ದೂರುವುದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಅವರ ಸರಕಾರ “ಆಕ್ರಮಣಕಾರಿ ಪಾಕ್ ವಿರೋಧಿ ನೀತಿಯನ್ನು ಅನುಸರಿಸುತ್ತಿದೆ’ ಎಂದು ಇಮ್ರಾನ್ ಆಪಾದಿಸಿದರು.
ಪಾಕಿಸ್ಥಾನವನ್ನು ಜಾಗತಿಕ ಮಟ್ಟದಲ್ಲಿ ಪ್ರತ್ಯೇಕಗೊಳಿಸುವ ಭಾರತೀಯ ಜನತಾ ಪಕ್ಷ ನೇತೃತ್ವದ ಭಾರತ ಸರಕಾರದ ತಪ್ಪು ನೀತಿಯಿಂದಾಗಿ ಉಭಯ ದೇಶಗಳ ನಡುವಿನ ಸಂಬಂಧ ಹಳಸಿಹೋಗಿವೆ ಎಂದು ಇಮ್ರಾನ್ ದೂರಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!
Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ
Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್ ಬಗ್ಗೆ ಸುಪ್ರೀಂ ಹೇಳಿದ್ದೇನು?
Delhi Polls: 11 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಆಪ್… ಯಾರಿಗೆ ಯಾವ ಕ್ಷೇತ್ರ
Viral Video: ಬೇಟೆಗೆ ಹೊಂಚು ಹಾಕುತ್ತಿದ್ದ ಹಾವನ್ನೇ ಬೇಟೆಯಾಡಲು ಮುಂದಾದ ಮೀನು…
MUST WATCH
ಹೊಸ ಸೇರ್ಪಡೆ
Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!
Chikkamagaluru;ಹಣಕ್ಕಾಗಿ ಮೊಮ್ಮಗನಿಂದಲೇ ವೃದ್ಧ ದಂಪತಿಯ ಬರ್ಬರ ಹ*ತ್ಯೆ
Thailand ನಲ್ಲಿ ಜೇನಿನ ಆಯುರ್ವೇದ ಔಷಧ ಕಥೆ ಹೇಳಿದ ಅಪ್ಪ,ಮಗಳು
Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.