ತ.ನಾ: ವಿದ್ಯಾಲಯ, ಸರ್ಕಾರಿ ಕಚೇರಿಗಳಲ್ಲಿ ವಂದೇ ಮಾತರಂ ಕಡ್ಡಾಯ
Team Udayavani, Jul 25, 2017, 6:00 PM IST
ಚೆನ್ನೈ : ತಮಿಳು ನಾಡಿನ ಆದ್ಯಂತ ಎಲ್ಲ ಶಿಕ್ಷಣ ಸಂಸ್ಥೆಗಳಲ್ಲಿ ಮತ್ತು ಸರಕಾರಿ ಕಚೇರಿಗಳಲ್ಲಿ ವಂದೇ ಮಾತರಂ ರಾಷ್ಟ್ರ ಗೀತೆಯನ್ನು ಕಡ್ಡಾಯವಾಗಿ ಹಾಡಬೇಕು ಅಥವಾ ನುಡಿಸಬೇಕು ಎಂದು ಮದ್ರಾಸ್ ಹೈಕೋರ್ಟ್ ಆದೇಶಿಸಿದೆ.
”ಈ ದೇಶದ ಎಲ್ಲ ಪ್ರಜೆಗಳಲ್ಲಿ ದೇಶ ಪ್ರೇಮ ಇರಲೇಬೇಕಾದ ಆವಶ್ಯಕ ಗುಣವಾಗಿದೆ. ಆದುದರಿಂದ ಎಲ್ಲ ಶಾಲೆ, ಕಾಲೇಜು, ವಿದ್ಯಾ ಸಂಸ್ಥೆಗಳು ಮತ್ತು ವಿಶ್ವವಿದ್ಯಾಲಯಗಳು ಪ್ರತೀ ಸೋಮವಾರ ಅಥವಾ ಶುಕ್ರವಾರ, ಕನಿಷ್ಠ ವಾರಕ್ಕೊಮ್ಮೆ ವಂದೇ ಮಾತರಂ ರಾಷ್ಟ್ರಗೀತೆಯನ್ನು ಹಾಡಬೇಕು ಇಲ್ಲವೇ ನುಡಿಸಬೇಕು; ಅದೇ ರೀತಿ ಎಲ್ಲ ಸರಕಾರಿ ಕಚೇರಿಗಳು, ಖಾಸಗಿ ಕಂಪೆನಿಗಳು, ಕಾರ್ಖಾನೆಗಳು, ಕೈಗಾರಿಕೆಗಳು ಕನಿಷ್ಠ ತಿಂಗಳಿಗೊಮ್ಮೆ ವಂದೇ ಮಾತರಂ ಹಾಡಬೇಕು ಅಥವಾ ನುಡಿಸಬೇಕು” ಎಂದು ಹೈಕೋರ್ಟ್ ತನ್ನ ಆದೇಶದಲ್ಲಿ ಹೇಳಿರುವುದಾಗಿ ಎಎನ್ಐ ಸುದ್ದಿ ಸಂಸ್ಥೆ ವರದಿ ಮಾಡಿದೆ.
ಹಾಗಿದ್ದರೂ ಯಾರಿಗಾದರೂ ರಾಷ್ಟ್ರಗೀತೆಯನ್ನು ಹಾಡುವುದಕ್ಕೆ ತೊಂದರೆ ಇದ್ದಲ್ಲಿ ಮತ್ತು ಅದಕ್ಕೆ ಸರಿಯಾದ ಕಾರಣಗಳಿದ್ದಲ್ಲಿ ಆತನನ್ನು ಬಲವಂತ ಪಡಿಸಬಾರದು ಎಂದು ಹೈಕೋರ್ಟ್ ಆದೇಶ ಹೇಳಿದೆ.
ಶಾಲೆಗಳಲ್ಲಿ ವಂದೇ ಮಾತರಂ ಹಾಡುವುದನ್ನು ಕಡ್ಡಾಯ ಮಾಡುವ ನಿಟ್ಟಿನಲ್ಲಿ ಕೇಂದ್ರಕ್ಕೆ ಆದೇಶ ನೀಡಬೇಕೆಂದು ಕೋರುವ ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಆಗಸ್ಟ್ 25ಕ್ಕೆ ನಿಗದಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Poll code violations ; ಖರ್ಗೆ, ನಡ್ಡಾ ಪ್ರತಿಕ್ರಿಯೆ ಕೇಳಿದ ಚುನಾವಣ ಆಯೋಗ
Rahul Gandhi ಭರವಸೆಗಳನ್ನು ನೀಡುತ್ತಾರೆ ಮತ್ತು ವಿದೇಶಕ್ಕೆ ಹಾರುತ್ತಾರೆ: ಶಾ ವಾಗ್ದಾಳಿ
PM Modi ಅವರು ಜೋ ಬೈಡೆನ್ ಅವರಂತೆ ನೆನಪಿನ ಶಕ್ತಿ ಕಳೆದುಕೊಳ್ಳುತ್ತಿದ್ದಾರೆ: ರಾಹುಲ್ ಗಾಂಧಿ
Resign: ಶಿರೋಮಣಿ ಅಕಾಲಿದಳದ ಅಧ್ಯಕ್ಷ ಸ್ಥಾನಕ್ಕೆ ಸುಖಬೀರ್ ಸಿಂಗ್ ಬಾದಲ್ ರಾಜೀನಾಮೆ
Maharashtra; ನಮ್ಮ ಮೈತ್ರಿ ಕೂಟ ಗೆದ್ದು ಮಹಾರಾಷ್ಟ್ರ ಉಳಿಸಲಿದೆ: ಡಿ.ಕೆ. ಶಿವಕುಮಾರ್
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.