Notice: ಈ ಆಹಾರ ಪದ್ಧತಿಯಿಂದಲೇ ಪತ್ನಿಯ ಕ್ಯಾನ್ಸರ್ ಗುಣವಾಯಿತೆಂದ ಸಿಕ್ಸರ್ ಸಿಧುಗೆ ನೋಟಿಸ್
Team Udayavani, Nov 29, 2024, 6:21 PM IST
ಪಂಜಾಬ್: ಇತ್ತೀಚಿಗೆ ಟೀಮ್ ಇಂಡಿಯಾದ ಮಾಜಿ ಆಟಗಾರ, ಕಾಂಗ್ರೆಸ್ ಮಾಜಿ ಮುಖ್ಯಸ್ಥ ನವಜೋತ್ ಸಿಂಗ್ ಸಿಧು ಅವರು ತನ್ನ ಪತ್ನಿ ನವಜೋತ್ ಕೌರ್ ಅವರು ನಾಲ್ಕನೇ ಹಂತದ ಕ್ಯಾನ್ಸರ್ ನಿಂದ ಬಳಲುತ್ತಿದ್ದು ಯಾವುದೇ ಔಷಧ ಪಡೆಯದೇ ಕಟ್ಟುನಿಟ್ಟಾದ ಆಹಾರ ಪದ್ದತಿಯಿಂದಲೇ ಕ್ಯಾನ್ಸರ್ ನಿಂದ ಗುಣಮುಖರಾಗಿದ್ದಾರೆ ಎಂದು ಹೇಳಿಕೆ ನೀಡಿದ ಬೆನ್ನಲೇ ಸಿದ್ದುಗೆ ಛತ್ತೀಸ್‌ಗಢ ಸಿವಿಲ್ ಸೊಸೈಟಿಯು ಲೀಗಲ್ ನೋಟಿಸ್ ಜಾರಿ ಮಾಡಿದೆ.
ನೋಟಿಸ್ ಜಾರಿ ಮಾಡಿದ ಸಿವಿಲ್ ಸೊಸೈಟಿ, ಸಿಧು ಸುಳ್ಳು ಮಾಹಿತಿ ನೀಡಿ ಕ್ಯಾನ್ಸರ್ ರೋಗಿಗಳ ದಾರಿ ತಪ್ಪಿಸುವ ಕಾರ್ಯ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದು ಅಲ್ಲದೆ ಪತ್ನಿ ಯಾವುದೇ ಔಷಧ ಪಡೆಯದೆಯೇ ಕೇವಲ ನಿಂಬೆ ರಸ, ಹಸಿರು ಎಲೆ, ಅರಶಿನ, ತುಳಸಿ ಮುಂತಾದ ಪದಾರ್ಥಗಳನ್ನು ಬಳಸಿಕೊಂಡು ಕೇವಲ ನಲವತ್ತು ದಿನಗಳಲ್ಲಿ ನಾಲ್ಕನೇ ಹಂತದ ಕ್ಯಾನ್ಸರ್ ನಿಂದ ಗುಣಮುಖರಾಗಿದ್ದಾರೆ ಎಂದು ಮಾಧ್ಯಮದ ಮೂಲಕ ಮಾಹಿತಿ ಹಂಚಿಕೊಂಡಿದ್ದಾರೆ ಇದು ಕ್ಯಾನ್ಸರ್ ರೋಗಿಗಳನ್ನು ದಾರಿ ತಪ್ಪಿಸುವ ಹೇಳಿಕೆಯಾಗಿದೆ ಎಂದು ಆಕ್ರೋಶ ಹೊರಹಾಕಿದ್ದು, ಪತ್ನಿಯ ಕ್ಯಾನ್ಸರ್ ಚಿಕಿತ್ಸೆಗೆ ಸಂಬಂಧಿಸಿದ ಎಲ್ಲ ದಾಖಲೆಗಳನ್ನು ಒಂದು ವಾರದೊಳಗೆ ಸಲ್ಲಿಸಬೇಕು ಇಲ್ಲವಾದಲ್ಲಿ 850 ಕೋಟಿ ರೂ. ಪರಿಹಾರ ನೀಡುವಂತೆ ಛತ್ತೀಸ್‌ಗಢ ಸಿವಿಲ್ ಸೊಸೈಟಿ ನೋಟಿಸ್ ಜಾರಿ ಮಾಡಿದೆ.
Navjot Singh Sidhu faces ₹850 Cr legal notice over cancer cure claims
Chhattisgarh Civil Society gives him 7 days to prove that his wife Navjot Kaur Sidhu recovered from stage 4 cancer in 40 days due to a “special diet”
Medical fraternity have criticised these claims calling… pic.twitter.com/uGENwx4LeP
— Nabila Jamal (@nabilajamal_) November 29, 2024
ಇನ್ನು ಸಿಧು ಹೇಳಿಕೆಯನ್ನು ಕೆಲ ವೈದ್ಯರೂ ಖಂಡಿಸಿದ್ದು ಈ ಹೇಳಿಕೆಯಲ್ಲಿ ಯಾವುದೇ ಆಧಾರವಿಲ್ಲ ಅಲ್ಲದೆ ಕ್ಯಾನ್ಸರ್ ಗುಣಪಡಿಸಲು ವಿಕಿರಣ ಚಿಕಿತ್ಸೆ, ಶಸ್ತ್ರಚಿಕಿತ್ಸೆ, ಮತ್ತು ಕೀಮೋಥೆರಪಿಯಂತಹ ಚಿಕಿತ್ಸೆಗಳಿಂದ ಮಾತ್ರ ಸಾಧ್ಯ ಎಂದು ಹೇಳಿದ್ದಾರೆ.
ಇದನ್ನೂ ಓದಿ: Champions Trophy; ಭಾರತ ತಂಡ ಪಾಕಿಸ್ಥಾನಕ್ಕೆ ತೆರಳುವುದು ಅಸಂಭವ: ದೃಢಪಡಿಸಿದ MEA
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಜಾತಿ ಹೆಸರಲ್ಲಿ ಕೆಲವರು ಸಮಾಜದಲ್ಲಿ ವಿಷ ಹಂಚುತ್ತಿದ್ದಾರೆ: ಪ್ರಧಾನಿ ಮೋದಿ
Jammu and Kashmir; ಮತ್ತೊಂದು ಸೇನಾ ಟ್ರಕ್ ದುರಂತ: 4 ಯೋಧರು ಹುತಾತ್ಮ
Twist; ಛತ್ತೀಸ್ ಗಢ ಪತ್ರಕರ್ತನ ಹ*ತ್ಯೆ: ಸೋದರ ಸಂಬಂಧಿಯೇ ಪ್ರಮುಖ ಆರೋಪಿ!
Delhi Polls: ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ: ಕೇಜ್ರಿವಾಲ್ ವಿರುದ್ಧ ವರ್ಮಾ
New Delhi; ಸಹಪಾಠಿಗಳೊಂದಿಗೆ ವಾಗ್ವಾದ; 7ನೇ ತರಗತಿ ವಿದ್ಯಾರ್ಥಿಯನ್ನು ಇರಿದು ಹತ್ಯೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Delhi Election: ಆಪ್ ಸೋಲಿಸಲು ಬಿಜೆಪಿ ಜತೆ ಕಾಂಗ್ರೆಸ್ ಮೈತ್ರಿ: ಕೇಜ್ರಿವಾಲ್
ಜಾತಿ ಹೆಸರಲ್ಲಿ ಕೆಲವರು ಸಮಾಜದಲ್ಲಿ ವಿಷ ಹಂಚುತ್ತಿದ್ದಾರೆ: ಪ್ರಧಾನಿ ಮೋದಿ
Congress Govt: ಆರು ತಿಂಗಳಲ್ಲಿ ಡಿ.ಕೆ.ಶಿವಕುಮಾರ್ ಸಿಎಂ ಆಗ್ತಾರೆ: ಸಂಸದ ಡಾ.ಕೆ.ಸುಧಾಕರ್
ಕಾಂಗ್ರೆಸ್‌ನಲ್ಲಿ ಸಿದ್ದು ವರ್ಸಸ್ ಯುದ್ಧ: ಬಿ.ವೈ.ವಿಜಯೇಂದ್ರ ಟೀಕೆ
Chamarajnagar: ಸಾಮಾಜಿಕ ಬಹಿಷ್ಕಾರ: ಗ್ರಾಮಸ್ಥರ ಸಭೆ ನಡೆಸಿದ ಅಧಿಕಾರಿಗಳು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.