ಸಮುದ್ರ ಭಯೋತ್ಪಾದನೆಗೆ ಉಗ್ರರಿಗೆ ತರಬೇತಿ: ನೌಕಾಪಡೆ ಚೀಫ್ ಎಚ್ಚರಿಕೆ
Team Udayavani, Mar 5, 2019, 6:13 AM IST
ಹೊಸದಿಲ್ಲಿ : ”ಭಾರತದ ವಿರುದ್ಧ ಸಮುದ್ರ ಮೂಲಕ ಭಯೋತ್ಪಾದಕ ದಾಳಿ ನಡೆಸಲು ಉಗ್ರರಿಗೆ ತರಬೇತಿ ನೀಡಲಾಗುತ್ತಿದೆ” ಎಂದು ಭಾರತೀಯ ನೌಕಾ ಪಡೆ ಮುಖ್ಯಸ್ಥ ಸುನಿಲ್ ಲಾಂಬಾ ಎಚ್ಚರಿಸಿದ್ದಾರೆ.
ರಾಷ್ಟ್ರ ರಾಜಧಾನಿಯಲ್ಲಿ ಏರ್ಪಡಿಸಲಾಗಿರುವ ಇಂಡೋ ಪೆಸಿಫಿಕ್ ರೀಜಿನಲ್ ಡಯಾಲೋಗ್ ಸಮಾವೇಶದಲ್ಲಿ ಮಾತನಾಡುತ್ತಿದ್ದ ನೌಕಾ ಪಡೆ ಮುಖ್ಯಸ್ಥ ಲಾಂಬಾ ಅವರು ಪಾಕ್ ಮೂಲದ ಉಗ್ರರು ಹಿಂದೆ 2008ರಲ್ಲಿ ಮುಂಬಯಿ ಮೇಲೆ ನಡೆಸಿದ್ದ 26/11ರ ಉಗ್ರ ದಾಳಿಯ ರೀತಿ ಸಮುದ್ರ ಮೂಲಕ “ಸಮುಂದರೀ ಜಿಹಾದ್’ ರೂಪದಲ್ಲಿ ಉಗ್ರ ದಾಳಿ ನಡೆಸುವುದಕ್ಕೆ ಭಯೋತ್ಪಾದಕರಿಗೆ ತರಬೇತಿ ನೀಡಲಾಗುತ್ತಿದೆ ಮತ್ತು ಇದು ಅತ್ಯಂತ ಅಪಾಯಕಾರಿಯೂ ಸವಾಲಿನದ್ದೂ ಆಗಿದೆ ಎಂದು ಹೇಳಿದರು.
ಭಯೋತ್ಪಾದನೆ ಎನ್ನುವುದು ಇಂದು ವಿಶ್ವಾದ್ಯಂತ ಶಾಂತಿ ಮತ್ತು ಸ್ಥಿರತೆಗೆ ಒದಗಿರುವ ಅತೀ ದೊಡ್ಡ ಸವಾಲು ಮತ್ತು ಬೆದರಿಕೆಯಾಗಿದೆ; ಆದುದರಿಂದ ಅಂತಾರಾಷ್ಟ್ರೀಯ ಸಮುದಾಯ ಭಯೋತ್ಪಾದನೆ ವಿರುದ್ಧದ ಹೋರಾಟದಲ್ಲಿ ಒಟ್ಟಾಗಬೇಕಾದ ಅಗತ್ಯವಿದೆ ಎಂದು ಲಾಂಬಾ ಹೇಳಿದರು.
ಭಾರತ ಸಹಿತ ವಿಶ್ವದ ಅನೇಕ ದೇಶಗಳಲ್ಲಿ, ವಿಶೇಷವಾಗಿ ಇಂಡೋ ಪೆಸಿಫಿಕ್ ಪ್ರಾಂತ್ಯದಲ್ಲಿ ಭಯೋತ್ಪಾದನೆಯು ಈಚಿನ ವರ್ಷಗಳಲ್ಲಿ ಬಹುರೂಪಗಳನ್ನು ಪಡೆದಿದೆ; ವಿಶ್ವದ ಕೆಲವೇ ದೇಶಗಳು ಮಾತ್ರವೇ ಇಂದು ಭಯೋತ್ಪಾದನೆಯಿಂದ ಮುಕ್ತವಾಗಿವೆ ಎಂದು ನೇವಿ ಚೀಫ್ ಅಡ್ಮಿರಲ್ ಸುನಿಲ್ ಲಾಂಬಾ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Odisha: ಕಾರಿಗೆ ಟ್ರಕ್ ಢಿಕ್ಕಿ ಹೊಡೆದು ಇಬ್ಬರು ಬಿಜೆಪಿ ನಾಯಕರು ಮೃ*ತ್ಯು
Delhi; ರಸ್ತೆಗಳು ಪ್ರಿಯಾಂಕಾ ಗಾಂಧಿ ಕೆನ್ನೆಯಂತಿರಬೇಕು: ಬಿಜೆಪಿ ನಾಯಕನ ಹೇಳಿಕೆಗೆ ಟೀಕೆ
Gujarat: ಕೋಸ್ಟ್ ಗಾರ್ಡ್ ಹೆಲಿಕಾಪ್ಟರ್ ಪತನ; ಮೂವರು ಮೃ*ತ್ಯು
Oyo Rooms: ಮದುವೆಯಾಗದ ಜೋಡಿಗೆ ಇನ್ಮುಂದೆ ʼಓಯೋʼ ರೂಮ್ ಸಿಗೋದು ಕಷ್ಟ – ವರದಿ
Jammu and Kashmir: ಕಮರಿಗೆ ಬಿದ್ದ ವಾಹನ; ಕನಿಷ್ಠ ನಾಲ್ವರು ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.