“ಗೋಲಿ ಮಾರ್ ದೂಂಗಾ..”: ಎನ್ ಸಿಪಿ ಅಧ್ಯಕ್ಷ ಶರದ್ ಪವಾರ್ ಗೆ ಜೀವ ಬೆದರಿಕೆ
Team Udayavani, Dec 13, 2022, 4:10 PM IST
ಮುಂಬೈ: ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ (ಎನ್ ಸಿಪಿ) ಅಧ್ಯಕ್ಷ ಶರದ್ ಪವಾರ್ ಅವರ ನಿವಾಸಕ್ಕೆ ಅಪರಿಚಿತ ವ್ಯಕ್ತಿಯಿಂದ ಕರೆ ಬಂದಿದ್ದು, ಕೊಲೆ ಬೆದರಿಕೆ ಹಾಕಲಾಗಿದೆ. ಪವಾರ್ ಅವರ ಸಿಲ್ವರ್ ಓಕ್ಸ್ ಮನೆಗೆ ಕರೆ ಮಾಡಿದ ವ್ಯಕ್ತಿ, ಮುಂಬೈಗೆ ಬಂದು ಕಂಟ್ರಿಮೇಡ್ ಪಿಸ್ತೂಲ್ ನಿಂದ ಶೂಟ್ ಮಾಡುವುದಾಗಿ ಹಿಂದಿಯಲ್ಲಿ ಬೆದರಿಕೆ ಹಾಕಿದ್ದಾನೆ.
“ಮುಂಬೈ ಆಯುಂಗಾ ಔರ್ ದೇಸಿ ಪಿಸ್ತೂಲ್ ಸೆ ಗೋಲಿ ಮಾರ್ ದೂಂಗಾ” ಎಂದು ಅಪರಿಚಿತ ವ್ಯಕ್ತಿಯೊಬ್ಬ ದೂರವಾಣಿ ಕರೆಯಲ್ಲಿ ಬೆದರಿಕೆ ಹಾಕಿದ್ದಾನೆ ಎಂದು ಮೂಲಗಳು ತಿಳಿಸಿದೆ.
ಈ ಬಗ್ಗೆ ಶರದ್ ಪವಾರ್ ಅವರ ರಕ್ಷಣಾ ತಂಡ ಗಂದೇವಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದೆ. ಈ ನಿಟ್ಟಿನಲ್ಲಿ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಅಪರಿಚಿತ ವ್ಯಕ್ತಿಯ ವಿರುದ್ಧ ಐಪಿಸಿ ಸೆಕ್ಷನ್ 294, 506(2) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಇದನ್ನೂ ಓದಿ:ಗ್ರಾಮದ ಜನರಿಗೆ ಸೇತುವೆ ನಿರ್ಮಿಸಲು ಪತ್ನಿಯ ಬಂಗಾರವನ್ನೇ ಗಿರವಿಟ್ಟ ಪತಿ.! 100 ಕುಟುಂಬಕ್ಕೆ ಆಸರೆಯಾಯಿತು ಸೇತುವೆ
ಘಟನೆಯ ಬಗ್ಗೆ ಎನ್ಸಿಪಿಯ ಮುಖ್ಯ ವಕ್ತಾರ ಮಹೇಶ್ ತಾಪಸೆ ಮಾತನಾಡಿ, ಕರೆ ಮಾಡಿದ ವ್ಯಕ್ತಿ ಮಾನಸಿಕ ಅಸ್ವಸ್ಥನಂತೆ ತೋರುತ್ತಿದ್ದು, ಅವರು ಪವಾರ್ ಅವರ ನಿವಾಸಕ್ಕೆ ಹಲವು ಬಾರಿ ಕರೆ ಮಾಡಿ ಇಂತಹ ಬೆದರಿಕೆಗಳನ್ನು ಹಾಕುತ್ತಿದ್ದ” ಎಂದಿದ್ದಾರೆ.
ಕಳೆದ ಕೆಲವು ದಿನಗಳಲ್ಲಿ ಈ ರೀತಿ ಹಲವು ಬಾರಿ ಕರೆ ಮಾಡಿ ಬೆದರಿಕೆ ಹಾಕಿದ್ದಾನೆ. ಇದರ ಬಗ್ಗೆ ಪೊಲೀಸರಿಗೆ ತಿಳಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Train ಜನಶತಾಬ್ದಿ ಎಕ್ಸ್ಪ್ರೆಸ್ನಲ್ಲಿ ಹಾವು ಪ್ರತ್ಯಕ್ಷ: ತನಿಖೆಗೆ ಆದೇಶ
Himachal Pradesh;ನಷ್ಟದಲ್ಲಿರುವ ಹೊಟೇಲ್ ಮುಚ್ಚಲು ಹೈಕೋರ್ಟ್ ಆದೇಶ
Waqf ಮಸೂದೆ ಕರಡು ವರದಿ ಸಿದ್ಧ: ಜೆಪಿಸಿ ಅಧ್ಯಕ್ಷ ಪಾಲ್ ಘೋಷಣೆ
Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!
Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.