NCP ಯಲ್ಲಿ ಬದಲಾವಣೆಯಾಗಬೇಕಾಗಿತ್ತು ಆದರೆ… ;ಶಾಕ್ ನಲ್ಲಿ ಶರದ್ ಪವಾರ್
ಭ್ರಷ್ಟಾಚಾರದ ಎಲ್ಲಾ ಆರೋಪಗಳನ್ನು ತೆರವುಗೊಳಿಸಿರುವುದು ಸ್ಪಷ್ಟವಾಗಿದೆ...
Team Udayavani, Jul 2, 2023, 4:56 PM IST
ಮುಂಬಯಿ : ಎನ್ ಸಿಪಿಯಲ್ಲಿ ಕೆಲವು ಬದಲಾವಣೆಗಳನ್ನು ಮಾಡಬೇಕಾಗಿತ್ತು ಆದರೆ ಅದಕ್ಕೂ ಮೊದಲು ಕೆಲವು ನಾಯಕರು ವಿಭಿನ್ನ ನಿಲುವು ತಳೆದಿದ್ದಾರೆ ಎಂದು ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಭಾನುವಾರ ಹೇಳಿಕೆ ನೀಡಿದ್ದಾರೆ.
ಎನ್ ಸಿಪಿ ನಾಯಕ ಅಜಿತ್ ಪವಾರ್ ಅವರು ಎನ್ ಡಿಎ ಪಾಳಯಕ್ಕೆ ಬೆಂಬಲ ನೀಡಿ ಡಿಸಿಎಂ ಮತ್ತು ಇತರ ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ ಬೆನ್ನಲ್ಲೇ ಸುದ್ದಿಗಾರರೊಂದಿಗೆ ಮಾತನಾಡಿದ ಪವಾರ್ “ನನ್ನ ಕೆಲವು ಸಹೋದ್ಯೋಗಿಗಳು ವಿಭಿನ್ನ ನಿಲುವು ತಳೆದಿದ್ದಾರೆ. ಜುಲೈ 6 ರಂದು ನಾನು ಎಲ್ಲಾ ನಾಯಕರ ಸಭೆಯನ್ನು ಕರೆದಿದ್ದೆ, ಅಲ್ಲಿ ಕೆಲವು ಪ್ರಮುಖ ವಿಷಯಗಳ ಬಗ್ಗೆ ಚರ್ಚಿಸಿ ಪಕ್ಷದೊಳಗೆ ಕೆಲವು ಬದಲಾವಣೆಗಳನ್ನು ಮಾಡಬೇಕಾಗಿತ್ತು ಆದರೆ ಅದಕ್ಕೂ ಮೊದಲು ಕೆಲವು ನಾಯಕರು ಈ ರೀತಿಯ ನಿಲುವು ತಳೆದಿದ್ದಾರೆ” ಎಂದು ಹೇಳಿದರು.
ಎರಡು ದಿನಗಳ ಹಿಂದೆ ಎನ್‌ಸಿಪಿ ಬಗ್ಗೆ ಪ್ರಧಾನಿ ಮೋದಿ ಹೇಳಿಕೆ ನೀಡಿದ್ದರು.ಎನ್‌ಸಿಪಿ ಮುಗಿದ ಪಕ್ಷ ಎಂದು ಎರಡು ವಿಷಯಗಳನ್ನು ಹೇಳಿದ್ದರು. ನೀರಾವರಿ ದೂರು ಹಾಗೂ ಭ್ರಷ್ಟಾಚಾರದ ಆರೋಪಗಳನ್ನು ಪ್ರಸ್ತಾಪಿಸಿದರು. ನನ್ನ ಕೆಲವು ಸಹೋದ್ಯೋಗಿಗಳು ಪ್ರಮಾಣ ವಚನ ಸ್ವೀಕರಿಸಿರುವುದು ಸಂತಸ ತಂದಿದೆ. ಎನ್‌ಡಿಎ ಸರ್ಕಾರಕ್ಕೆ ಸೇರ್ಪಡೆಯಾಗುವ ಮೂಲಕ ಎಲ್ಲಾ ಆರೋಪಗಳನ್ನು ತೆರವುಗೊಳಿಸಿರುವುದು ಸ್ಪಷ್ಟವಾಗಿದೆ. ನಾನು ಅವರಿಗೆ ಕೃತಜ್ಞನಾಗಿದ್ದೇನೆ ಎಂದು ಶರದ್ ಪವಾರ್ ಆಕ್ರೋಶ ಹೊರ ಹಾಕಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Mysuru:’ಕರ್ನಾಟದಲ್ಲಿ “ಗ್ಯಾರಂಟಿ’ ಹೆಸರಲ್ಲಿ ಲೂಟಿ, ಮಹಾರಾಷ್ಟ್ರದಲ್ಲಿ ನೀವು ಘೋಷಿಸಬೇಡಿ’
By Election: ಚನ್ನಪಟ್ಟಣದಲ್ಲಿ ಎಚ್.ಡಿ.ದೇವೇಗೌಡ Vs ಡಿ.ಕೆ.ಶಿವಕುಮಾರ್ ಮೇಕೆದಾಟು ಜಟಾಪಟಿ
Active Politics: ನಾನು ಎಂದೂ ಮಂಡ್ಯ ಕ್ಷೇತ್ರ ಬಿಡುವುದಿಲ್ಲ: ಮಾಜಿ ಸಂಸದೆ ಸುಮಲತಾ
Golden Jubliee: ಪತ್ರಿಕೆಯ ಓದು ಪ್ರತಿಯೊಬ್ಬರಿಗೂ ಆಹಾ! ಎನಿಸುವಂತಿರಲಿ
By Election: ಸಿದ್ದರಾಮಯ್ಯ ಸರಕಾರ ಕಿತ್ತೊಗೆಯುವವರೆಗೂ ಹೋರಾಟ ನಿಲ್ಲಲ್ಲ: ಎಚ್.ಡಿ.ದೇವೇಗೌಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.