NCP Leader; ಗುಂಡಿನ ದಾಳಿಗೈದು ಬಾಬಾ ಸಿದ್ದಿಕಿ ಬರ್ಬರ ಹ*ತ್ಯೆ!!
ಸಿನಿ ರಂಗದಲ್ಲಿ ಭಾರೀ ಪ್ರಭಾವ ಹೊಂದಿದ್ದ ನಾಯಕ.. ಸಲ್ಮಾನ್, ಶಾರುಖ್ ಖಾನ್ ಅವರೊಂದಿಗೂ ಆತ್ಮೀಯತೆ
Team Udayavani, Oct 12, 2024, 10:58 PM IST
ಮುಂಬಯಿ: ನಗರದಲ್ಲಿ ಶನಿವಾರ(ಅ18) ರಾತ್ರಿ ಅಪರಿಚಿತ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿ ಎನ್‌ಸಿಪಿಯ ಹಿರಿಯ ನಾಯಕ ಬಾಬಾ ಸಿದ್ದಿಕಿ(66)ಅವರನ್ನು ಹತ್ಯೆಗೈದಿದ್ದಾರೆ. ಗುಂಡಿನ ದಾಳಿ ನಡೆದ ತತ್ ಕ್ಷಣ ಸಮೀಪದ ಲೀಲಾವತಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಬಾಬಾ ಸಿದ್ದಿಕಿ ಕೊನೆಯುಸಿರೆಳೆದಿದ್ದಾರೆ.
ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ಅವರ NCP ಬಣದಲ್ಲಿ ಗುರುತಿಸಿಕೊಂಡಿದ್ದ ಬಾಬಾ ಸಿದ್ದಿಕಿ ಸಿನಿ ರಂಗದಲ್ಲಿ ಭಾರೀ ಪ್ರಭಾವ ಹೊಂದಿದ್ದ ನಾಯಕರಾಗಿದ್ದರು. ಸಲ್ಮಾನ್, ಶಾರುಖ್ ಖಾನ್ ಅವರೊಂದಿಗೂ ಆತ್ಮೀಯತೆ ಹೊಂದಿದ್ದರು. ಸಲ್ಮಾನ್ ಮತ್ತು ಶಾರುಖ್ ನಡುವೆ ವೈಮನಸ್ಸು ಮೂಡಿದ್ದ ವೇಳೆ ಇಬ್ಬರನ್ನೂ ಒಂದು ಮಾಡಿದ್ದರು.
ವಂಡ್ರೆ ಪೂರ್ವದ ಶಾಸಕರಾಗಿರುವ ಅವರ ಪುತ್ರ ಜೀಶನ್ ಸಿದ್ದಿಕ್ ಅವರ ಕಚೇರಿ ಬಳಿ ಈ ಘಟನೆ ನಡೆದಿದೆ. ದಾಳಿಯ ವಿವರಗಳು ಅಸ್ಪಷ್ಟವಾಗಿದ್ದರೂ, ಕನಿಷ್ಠ ಮೂವರು ದಾಳಿಯಲ್ಲಿ ಭಾಗಿಯಾಗಿದ್ದಾರೆ ಎಂದು ಆರಂಭಿಕ ವರದಿಗಳು ಸೂಚಿಸಿವೆ.ಘಟನೆಗೆ ಸಂಬಂಧಿಸಿ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮುಂಬೈ ಪೊಲೀಸರು ಭಾರೀ ಕಾರ್ಯಾಚರಣೆ ನಡೆಸುತ್ತಿದ್ದಾರೆ.
ವಂಡ್ರೆ ಪಶ್ಚಿಮ ವಿಧಾನಸಭಾ ಕ್ಷೇತ್ರದಿಂಡಾ 1999, 2004 ಮತ್ತು 2009 ರಲ್ಲಿ ಸತತ ಮೂರು ಅವಧಿಗೆ ಶಾಸಕರಾಗಿದ್ದರು.2004-08 ಅವಧಿಗೆ ಆಹಾರ ಮತ್ತು ನಾಗರಿಕ ಸರಬರಾಜು, ಕಾರ್ಮಿಕ ಖಾತೆ ರಾಜ್ಯ ಸಚಿವರಾಗಿಯೂ ಸೇವೆ ಸಲ್ಲಿಸಿದ್ದರು. 1976 ರಿಂದ ಕಾಂಗ್ರೆಸ್ ಪಕ್ಷದಲ್ಲಿದ್ದ ಅವರು 2024 ರಲ್ಲಿ ಸೇರಿದ್ದರು.
ಜೀಶನ್ ಬಾಬಾ ಸಿದ್ದಿಕ್ ಕಾಂಗ್ರೆಸ್‌ನ ಶಾಸಕರಾಗಿದ್ದಾರೆ. ಮುಂಬೈ ಯುವ ಕಾಂಗ್ರೆಸ್ ಅಧ್ಯಕ್ಷರಾಗಿಯೂ ಕೆಲಸ ಮಾಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
Old cars ಬಿಕರಿಗೆ ಶೇ.18 ಜಿಎಸ್‌ಟಿ! ; ವಿತ್ತ ಸಚಿವೆ ನೇತೃತ್ವದ ಜಿಎಸ್‌ಟಿ ಸಭೆ ತೀರ್ಮಾನ
Maharashtra; ಫಡ್ನವೀಸ್ ಬಳಿ ಗೃಹ, ಶಿಂಧೆಗೆ ನಗರಾಭಿವೃದ್ಧಿ ಸೇರಿ 3 ಪ್ರಮುಖ ಖಾತೆ!
Mumbai; ಚುನಾವಣೆಗೆ ಏಕಾಂಗಿ ಸ್ಪರ್ಧೆ: ಉದ್ಧವ್ ಶಿವಸೇನೆ ಇಂಗಿತ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
BGT 2024: ಮೆಲ್ಬೋರ್ನ್ ಪಂದ್ಯಕ್ಕೂ ಟೀಂ ಇಂಡಿಯಾಗೆ ಗಾಯಾಳುಗಳ ಸಮಸ್ಯೆ
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Vijay Hazare Trophy: ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್ ಸೂರ್ಯವಂಶಿ
BBMP Notice: ವಿರಾಟ್ ಕೊಹ್ಲಿ ಸಹ ಮಾಲಿಕತ್ವದ ರೆಸ್ಟೋರೆಂಟ್‌ಗೆ ಬಿಬಿಎಂಪಿ ನೋಟಿಸ್
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.