ಮೈತ್ರಿ ರಚನೆ ಅಸಂಭವ


Team Udayavani, Oct 24, 2018, 3:43 PM IST

sharad.jpg

ಭೋಪಾಲ್‌/ಮುಂಬಯಿ: ಮುಂದಿನ ಲೋಕಸಭೆ ಚುನಾವಣೆಗೆ ಮುನ್ನ ಬಿಜೆಪಿ ವಿರುದ್ಧದ ಮೈತ್ರಿಕೂಟ ರಚನೆಯಾಗಲಾರದು ಎಂದಿದ್ದಾರೆ ಎನ್‌ಸಿಪಿ ಮುಖ್ಯಸ್ಥ ಶರದ್‌ ಪವಾರ್‌. ಇದರ ಹೊರತಾಗಿಯೂ ಬಿಜೆಪಿಯೇತರ ಪಕ್ಷಗಳನ್ನು ಮೈತ್ರಿಗಾಗಿ ಕರೆ ತರುವ ಪ್ರಯತ್ನ ನಡೆಯುತ್ತಿದೆ ಎಂದಿದ್ದಾರೆ.

ಮುಂಬಯಿಯಲ್ಲಿ “ಆಜ್‌ತಕ್‌’ ಸುದ್ದಿ ವಾಹಿನಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಒಂದು ವೇಳೆ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರಕಾರ ಚುನಾವಣೆಯಲ್ಲಿ ಸೋತರೆ, ಹೆಚ್ಚಿನ ಸ್ಥಾನಗಳನ್ನು ಪಡೆಯುವ ಪಕ್ಷ ಪ್ರಧಾನಿ ಹುದ್ದೆ ತನಗೆ ಎಂದು ಘೋಷಿಸಿಕೊಳ್ಳಬಹುದು ಎಂದಿದ್ದಾರೆ. 

ಕೇಂದ್ರದ ಮಾಜಿ ಸಚಿವ ಶರದ್‌ ಪವಾರ್‌ ಮುಂದಿನ ಲೋಕಸಭೆ ಚುನಾವಣೆ ಒಳಗಾಗಿ ಬಿಜೆಪಿ ವಿರುದ್ಧದ ವಿಪಕ್ಷಗಳ ಮೈತ್ರಿಕೂಟ ರಚನೆಯಾಗಲಾರದು ಎಂದು ಎರಡನೇ ಬಾರಿಗೆ ಪುನರುಚ್ಚರಿಸಿದ್ದಾರೆ.  2004ರ ಚುನಾವಣೆ ವೇಳೆ ದೇಶದಲ್ಲಿ ಯಾವ ಪರಿಸ್ಥಿತಿ ಇತ್ತೋ ಅದುವೇ ಮರುಕಳಿಸಿದೆ. ಹೊಸದಿಲ್ಲಿ, ಮಹಾರಾಷ್ಟ್ರದಲ್ಲಿನ ಸರಕಾರಗಳು ಬದಲಾಗಲಿವೆ. ಲೋಕಸಭೆ ಚುನಾವಣೆ ಬಳಿಕ ಮೋದಿ ಪ್ರಧಾನಿಯಾಗಿ ಇರಲಾರರು ಎಂದಿದ್ದಾರೆ ಪವಾರ್‌. 

ಪಕ್ಷ ಹಾಳಾಗಲಿ: ಮಧ್ಯಪ್ರದೇಶದಲ್ಲಿ ಕಾಂಗ್ರೆಸ್‌ ಪರ ಬಿರುಸಿನ ಪ್ರಚಾರ ನಡೆಯುತ್ತಿರುವ ನಡುವೆಯೇ, ಪಕ್ಷದ ಶಾಸಕನೇ ಪಕ್ಷಕ್ಕೆ ಇರುಸು ಮುರುಸು ಉಂಟು ಮಾಡಿದ್ದಾರೆೆ. ರೌ ಕ್ಷೇತ್ರದ ಶಾಸಕ ಜಿತು ಪಟ್ವಾರಿ ಚುನಾವಣೆ ಪ್ರಚಾರದ ವೇಳೆ “ಪಕ್ಷ ಹಾಳಾಗಿ ಹೋಗಲಿ; ಕ್ಷೇತ್ರದ ಜನರಾದ ನೀವು ನನ್ನ ಗೌರವ ಕಾಪಾಡಬೇಕು’ ಎಂದು ಮನವಿ ಮಾಡಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ. ಕೂಡಲೇ ಟ್ವೀಟ್‌ ಮಾಡಿರುವ ಕಾಂಗ್ರೆಸ್‌ ನಾಯಕ ಜಿತು ಪಟ್ವಾರಿ, ರೌ ವಿಧಾನಸಭಾ ಕ್ಷೇತ್ರದಲ್ಲಿರುವ ಪ್ರತಿಯೊಬ್ಬನೂ ನನ್ನ ಕುಟುಂಬ ಸದಸ್ಯನಂತೆ. ನಾನು ಸಾಮಾನ್ಯ ವ್ಯಕ್ತಿಯಂತೆ ಮತ್ತು ಪಕ್ಷದ ಪರವಾಗಿ ಎಲ್ಲರ ಜತೆಯೂ ಮಾತನಾಡುತ್ತೇನೆ ಎಂದು ಬರೆದುಕೊಂಡಿದ್ದಾರೆ. ಇದು ಬಿಜೆಪಿಯ ಸಂಚು ಎಂದೂ ಆರೋಪಿಸಿದ್ದಾರೆ.

ಬಿಜೆಪಿಗೆ ರಾಜೀನಾಮೆ: ಮಧ್ಯ ಪ್ರದೇಶದ ಮಂಡ್‌ಸೌರ್‌ನಲ್ಲಿ ರೈತರ ಪ್ರತಿಭಟನೆ ವೇಳೆ ಸಿಎಂ ಶಿವರಾಜ್‌ ಸಿಂಗ್‌ ಚೌಹಾಣ್‌ ಪರ ಮಾತನಾಡಿದ್ದ ಗುಣವರ್ಧನ್‌ ಪಟಿದಾರ್‌ ಬಿಜೆಪಿಗೆ ರಾಜೀನಾಮೆ ನೀಡಿದ್ದಾರೆ.

ರಮಣ್‌ಸಿಂಗ್‌ ನಾಮಪತ್ರ
ಛತ್ತೀಸ್‌ಗಢದ ರಾಜನಂದಗಾಂವ್‌ ಕ್ಷೇತ್ರದಿಂದ ಮುಖ್ಯಮಂತ್ರಿ ಡಾ.ರಮಣ್‌ ಸಿಂಗ್‌ ಮಂಗಳವಾರ ನಾಮಪತ್ರ ಸಲ್ಲಿಸಿದ್ದಾರೆ. ಪತ್ನಿ ವೀಣಾ ಸಿಂಗ್‌, ಉ.ಪ್ರ. ಸಿಎಂ ಯೋಗಿ ಆದಿತ್ಯನಾಥ್‌ ಸೇರಿದಂತೆ ಗಣ್ಯರು ಈ ಸಂದರ್ಭದಲ್ಲಿದ್ದರು. ನಾಮಪತ್ರ ಸಲ್ಲಿಕೆಗೆ ಮುನ್ನ ಅವರು ತಮಗಿಂತ 20 ವರ್ಷ ಕಿರಿಯರಾದ ಯೋಗಿ ಆದಿತ್ಯನಾಥ್‌ರ ಪಾದಮುಟ್ಟಿ ಆಶೀರ್ವಾದ ಪಡೆದರು.

ಟಾಪ್ ನ್ಯೂಸ್

MUDA CASE: ತನಿಖೆಗೂ ಮುನ್ನವೇ ದಾಖಲೆ ನಾಪತ್ತೆ?

MUDA CASE: ತನಿಖೆಗೂ ಮುನ್ನವೇ ದಾಖಲೆ ನಾಪತ್ತೆ?

1-chali

Dakshina Kannada and Udupi: ಮುಂಜಾನೆ ಚುಮುಚುಮು ಚಳಿ

1-deee

Udupi; ಪೊಲೀಸ್‌ ಇಲಾಖೆ ವಿರುದ್ಧ ಹಿಂದೂ ಸಂಘಟನೆಗಳ ಪ್ರತಿಭಟನೆ

Shiralakoppa: ಹೋರಿ ತಿವಿದು ಬೈಕ್‌ ಸವಾರ ಸಾವು

Shiralakoppa: ಹೋರಿ ತಿವಿದು ಬೈಕ್‌ ಸವಾರ ಸಾವು

Kamsale-kumaraswami

Mysuru: ‘ಕೋಲು ಮಂಡೆ ಜಂಗಮ’ ಹಾಡು ನೃತ್ಯ ಸಂಯೋಜಕ ಕಂಸಾಳೆ ಕಲಾವಿದ ಕುಮಾರಸ್ವಾಮಿ ನಿಧನ

Khadri–cm

Gift: ಶಿಗ್ಗಾವಿಯಲ್ಲಿ ನಾಮಪತ್ರ ವಾಪಸ್‌ ಪಡೆದ ಖಾದ್ರಿಗೆ ಹೆಸ್ಕಾಂ ಅಧ್ಯಕ್ಷಗಿರಿ ಹುದ್ದೆ!

DVG-Tagaru

Davanagere: ʼಸೋಲಿಲ್ಲದ ಸರದಾರʼ ಎನಿಸಿದ್ದ ʼಬೆಳ್ಳೂಡಿ ಕಾಳಿʼ ಟಗರು ಅನಾರೋಗ್ಯದಿಂದ ನಿಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kharge

JPC on Adani issue;ನಿಯಮ 267 ಅಡಿಯಲ್ಲಿ ಪ್ರಸ್ತಾಪಿಸಲು ಅವಕಾಶ ನೀಡದ್ದಕ್ಕೆ ಖರ್ಗೆ ಆಕ್ರೋಶ

chetah

Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ

1-adani

Adani funding; 100 ಕೋಟಿ ನಿಧಿಯನ್ನು ಸ್ವೀಕರಿಸುವುದಿಲ್ಲ ಎಂದ ರೇವಂತ್ ರೆಡ್ಡಿ

Andaman: ಮೀನುಗಾರಿಕಾ ದೋಣಿಯಲ್ಲಿದ್ದ 5 ಟನ್ ಮಾದಕ ವಸ್ತು ವಶಕ್ಕೆ ಪಡೆದ ಕೋಸ್ಟ್ ಗಾರ್ಡ್

Andaman: ಕೋಸ್ಟ್ ಗಾರ್ಡ್ ಕಾರ್ಯಾಚರಣೆ… ಮೀನುಗಾರಿಕಾ ದೋಣಿಯಲ್ಲಿದ್ದ 5ಟನ್ ಮಾದಕ ವಸ್ತು ವಶ

Maharashtra: ಕಾಂಗ್ರೆಸ್‌ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ

Maharashtra: ಕಾಂಗ್ರೆಸ್‌ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

UTK

Speaker ಯು.ಟಿ.ಖಾದರ್‌ ವ್ಯಾಟಿಕನ್‌ ಸಿಟಿಗೆ

MUDA CASE: ತನಿಖೆಗೂ ಮುನ್ನವೇ ದಾಖಲೆ ನಾಪತ್ತೆ?

MUDA CASE: ತನಿಖೆಗೂ ಮುನ್ನವೇ ದಾಖಲೆ ನಾಪತ್ತೆ?

1-chali

Dakshina Kannada and Udupi: ಮುಂಜಾನೆ ಚುಮುಚುಮು ಚಳಿ

1-deee

Udupi; ಪೊಲೀಸ್‌ ಇಲಾಖೆ ವಿರುದ್ಧ ಹಿಂದೂ ಸಂಘಟನೆಗಳ ಪ್ರತಿಭಟನೆ

Shikaripur: ಊಟ ಮಾಡುತ್ತಿದ್ದ ತಂದೆಯ ಕೊಂದ ಮಗ

Shikaripur: ಊಟ ಮಾಡುತ್ತಿದ್ದ ತಂದೆಯ ಕೊಂದ ಮಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.