ನಾಯಕರಿಗೆ ನಾಲ್ಕೇಟು; ಗಡ್ಕರಿ ಮಾತು ಪ್ರಧಾನಿ ಮೋದಿ ವಿರುದ್ಧ: NCP
Team Udayavani, Jan 28, 2019, 10:30 AM IST
ಮುಂಬಯಿ : ‘ಭರವಸೆ ಈಡೇರಿಸಲು ವಿಫಲರಾಗುವ ನಾಯಕರಿಗೆ ಜನರು ನಾಲ್ಕು ಬಾರಿಸಬೇಕು’ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಈಚೆಗೆ ಹೇಳಿರುವ ಮಾತಿಗೆ ತಿರುಗೇಟು ನೀಡಿರುವ ಎನ್‌ಸಿಪಿ, ‘ಗಡ್ಕರಿ ಅವರ ಈ ಮಾತುಗಳು ಪ್ರಧಾನಿ ನರೇಂದ ಮೋದಿ ಅವರ ವೈಫಲ್ಯದ ಬಗ್ಗೆ ಬಿಜೆಪಿಯೊಳಗಿನ ಧ್ವನಿಯನ್ನು ಪ್ರತಿಬಿಂಬಿಸುತ್ತದೆ ‘ ಎಂದು ಹೇಳಿದೆ.
ಎನ್‌ಸಿಪಿ ವಕ್ತಾರ ನವಾಬ್ ಮಲಿಕ್ ಅವರು ಇಂದು ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡುತ್ತಾ, ‘ನಿತಿನ್ ಗಡ್ಕರಿ ತಾನು ಪ್ರಧಾನಿ ಮೋದಿ ಅವರಿಗೆ ಪರ್ಯಾಯ ನಾಯಕ ಎಂಬುದನ್ನು ಬಿಂಬಿಸಲು ಪ್ರಯತ್ನಿಸಿರುವಂತಿದೆ; ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಸೋಲುವುದೇ ಖಚಿತ ಇರುವುದರಿಂದ ಗಡ್ಕರಿ ಈ ಮಾತನ್ನು ಆಡಿದ್ದಾರೆ’ ಎಂದು ಹೇಳಿದರು.
‘ರಾಜಸ್ಥಾನ, ಮಧ್ಯ ಪ್ರದೇಶ ಮತ್ತು ಛತ್ತೀಸ್‌ಗಢದಲ್ಲಿ ಬಿಜೆಪಿ ಸೋಲನುಭವಿಸಿದ ತರುವಾಯ ಗಡ್ಕರಿ ಈ ಬಿಚ್ಚು ಮನಸ್ಸಿನ ಮಾತನ್ನಾಡಿರುವುದರಿಂದ ಲೋಕಸಭಾ ಚುನಾವಣೆ ಬಳಿಕ ಮೋದಿಯಾಗಲೀ ಬಿಜೆಪಿ ಸರಕಾರವಾಗಲೀ ಇರದು ಎಂಬುದರ ಸುಳಿವು ಇದಾಗಿದೆ’ ಎಂದು ಮಲಿಕ್ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
Mahayuti ಗೆಲುವು: ಆ್ಯಕ್ಸಿಸ್ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ
Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ
Adani ಬಂಧಿಸಿ, ಸೆಬಿ ಮುಖ್ಯಸ್ಥೆ ವಜಾ ಮಾಡಿ: ರಾಹುಲ್ ಪಟ್ಟು
MUST WATCH
ಹೊಸ ಸೇರ್ಪಡೆ
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
BBK11: ಸೆಡೆಗಳನ್ನೆಲ್ಲ ಕಳ್ಸಿಯೇ ನಾನು ಮನೆಗೆ ಹೋಗೋದು- ಮತ್ತೆ ಗುಡುಗಿದ ರಜತ್
Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ
Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ
ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.