Maharashtra ಸ್ಥಳೀಯ ಸಂಸ್ಥೆ ಎಲೆಕ್ಷನ್‌ನಲ್ಲಿ ಸ್ವತಂತ್ರ ಸ್ಪರ್ಧೆ: ಅಜಿತ್ ಪವಾರ್
ಮಹಾರಾಷ್ಟ್ರದ ಆಡಳಿತ ಕೂಟದಲ್ಲಿ ಬಿರುಕು? ; ಕುತೂಹಲ ಕೆರಳಿಸಿದ ಶರದ್-ಶಿಂಧೆ ಭೇಟಿ
Team Udayavani, Jul 22, 2024, 10:01 PM IST
ಪುಣೆ: ವಿಧಾನಸಭೆ ಚುನಾವಣೆ ಹತ್ತಿರವಾಗುತ್ತಿದ್ದಂತೆಯೇ ಮಹಾರಾಷ್ಟ್ರ ರಾಜಕಾರಣದಲ್ಲಿ ಹೊಸ ಸಮೀಕರಣಗಳು ಸೃಷ್ಟಿಯಾಗುವ ಲಕ್ಷಣಗಳು ಗೋಚರಿಸುತ್ತಿವೆ. ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎನ್‌ಸಿಪಿ ಏಕಾಂಗಿಯಾಗಿ ಸ್ಪರ್ಧಿಸಲಿದೆ ಎಂದು “ಮಹಾಯುತಿ’ ಪಾಲುದಾರ ನಾಯಕ, ಡಿಸಿಎಂ ಅಜಿತ್ ಪವಾರ್ ಹೇಳಿದ್ದರೆ, ಮಿತ್ರಕೂಟದ ಪಕ್ಷಗಳು ಏಕಾಂಗಿಯಾಗಿ ಸ್ಪರ್ಧಿಸಲು ಸ್ವತಂತ್ರರು ಎಂದು ಬಿಜೆಪಿ ನಾಯಕ ದೇವೇಂದ್ರ ಫಡ್ನವೀಸ್ ಹೇಳಿದ್ದಾರೆ. ಈ ಮಧ್ಯೆ, ಸಿಎಂ ಏಕನಾಥ ಶಿಂಧೆಯನ್ನು ಶರದ್ ಪವಾರ್ ಭೇಟಿಯಾಗಿರುವುದು ಕುತೂಹಲಕ್ಕೆ ಕಾರಣವಾಗಿದೆ.
ಪಿಂಪ್ರಿ ಚಿಂಚ್‌ವಾಡ್ ನಗರದಲ್ಲಿ ಭಾನುವಾರ ಎನ್‌ಸಿಪಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಅಜಿತ್, ಲೋಕಸಭೆ, ವಿಧಾನಸಭೆಯಲ್ಲಿ ಮಹಾಯುತಿ ಮೈತ್ರಿಕೂಟದ ಭಾಗವಾಗಿದ್ದರೂ, ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎನ್‌ಸಿಪಿ ಸೇರಿದಂತೆ ಮಹಾ ಯುತಿಯ ಮಿತ್ರ ಪಕ್ಷಗಳು ಸ್ವತಂತ್ರವಾಗಿ ಸ್ಪರ್ಧಿಸಬಹುದು ಎಂದರು.
ಶಿಂಧೆ-ಪವಾರ್ ಭೇಟಿ:
ಎನ್‌ಸಿಪಿ(ಎಸ್‌ಪಿ) ನಾಯಕ ಶರದ್ ಪವಾರ್ ಸೋಮವಾರ ಶಿವಸೇನೆ ನಾಯಕ, ಮುಖ್ಯಮಂತ್ರಿ ಏಕನಾಥ ಶಿಂಧೆಯನ್ನು ಭೇಟಿ ಮಾಡಿದ್ದಾರೆ.
ರಾಜಕೀಯ ಹೊರತಾದ ಭೇಟಿಯೆಂದು ಹೇಳಿಕೊಂಡರೂ ನಾನಾ ಲೆಕ್ಕಾಚಾರಗಳು ಶುರುವಾಗಿವೆ. ಇತ್ತೀಚೆಗೆ ಆರ್‌ಎಸ್‌ಎಸ್‌ನೊಂದಿಗೆ ಗುರುತಿಸಿಕೊಂಡಿರುವ ಮರಾಠಿ ವಾರಪತ್ರಿಕೆಯೊಂದು, ಲೋಕಸಭೆ ಚುನಾವಣೆಯಲ್ಲಿ ಮಹಾರಾಷ್ಟ್ರದಲ್ಲಿ ಬಿಜೆಪಿ ಮುಗ್ಗರಿಸಲು ಅಜಿತ್ ಪವಾರ್ ಜತೆಗಿನ ಸಖ್ಯವೇ ಕಾರಣ ಎಂದು ಹೇಳಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Filmmaker Died: ಖ್ಯಾತ ಸಿನಿಮಾ ನಿರ್ದೇಶಕ ಶ್ಯಾಂ ಬೆನಗಲ್ ವಿಧಿವಶ
Rule; 5, 8ನೇ ತರಗತಿಯಲ್ಲಿ ಫೈಲ್ ಆದರೆ ಭಡ್ತಿ ನೀಡುವಂತಿಲ್ಲ; ಅದೇ ಕ್ಲಾಸಲ್ಲಿ ಮುಂದುವರಿಕೆ!
Manipur; ಪೊಲೀಸ್ ಇಲಾಖೆಯಲ್ಲಿ ಮೈತೇಯಿ ಮತ್ತು ಕುಕಿಗಳು ಒಟ್ಟಾಗಿ ಕೆಲಸ ಮಾಡಬೇಕು
Kerala; ಸರಕಾರಿ ಶಾಲೆಯಲ್ಲಿ ಕ್ರಿಸ್ಮಸ್ ಆಚರಣೆಗೆ ಅಡ್ಡಿ,ಗೋದಲಿ ಧ್ವಂಸ: ವ್ಯಾಪಕ ಆಕ್ರೋಶ
Mahakumbh 2025: 45 ಕೋಟಿ ಯಾತ್ರಾರ್ಥಿಗಳ ನಿರೀಕ್ಷೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಕರಾವಳಿಯಲ್ಲಿ “ಕರ್ನಾಟಕ ಕೂಟ’: ಜ. 17-23ರ ವರೆಗೆ ಮಂಗಳೂರು, ಉಡುಪಿಯಲ್ಲಿ
Uppinangady; ಕಾಡಾನೆ ಸಂಚಾರದಿಂದ ಹಿರೇಬಂಡಾಡಿ ಗ್ರಾಮಸ್ಥರು ಭಯಭೀತ
Vijay Hazare Trophy: ಕರ್ನಾಟಕಕ್ಕೆ ಸತತ 2ನೇ ಗೆಲುವಿನ ಸಿಹಿ
Udupi- Mangaluru; ವರ್ಷಾಂತ್ಯಕ್ಕೆ ಹೆಚ್ಚಿದ ಪ್ರವಾಸಿಗರು: ಟ್ರಾಫಿಕ್ ಜಾಮ್
Pro Kabaddi League: ಗುಜರಾತ್ ಜೈಂಟ್ಸ್ ವಿರುದ್ಧದಬಾಂಗ್ ಡೆಲ್ಲಿಗೆ ಗೆಲುವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.