ಎನ್ ಡಿಎ ಸರ್ಕಾರ ಸಾವರ್ಕರ್ ಬದಲಿಗೆ ಗೋಡ್ಸೆಗೆ ಭಾರತ ರತ್ನ ನೀಡಬೇಕು: ಮನೀಶ್ ತಿವಾರಿ
Team Udayavani, Oct 17, 2019, 9:40 AM IST
ನಾಗ್ಪುರ: ಮುಂಬರುವ ಮಹಾರಾಷ್ಟ್ರ ಚುನಾವಣೆಯಲ್ಲಿ ವೀರ್ ಸಾವರ್ಕರ್ ಗೆ ಭಾರತ ರತ್ನ ನೀಡುವುದಾಗಿ ತನ್ನ ಪ್ರಣಾಳಿಕೆಯಲ್ಲಿ ಘೋಷಿಸಿಕೊಂಡಿದ್ದ ಬಿಜೆಪಿಯ ವಿರುದ್ಧ ಕಿಡಿಕಾರಿದ ಕಾಂಗ್ರೆಸ್ ನಾಯಕ ಮನೀಷ್ ತಿವಾರಿ ನಾಥುರಾಮ್ ಗೋಡ್ಸೆಗೂ ಅತ್ಯುನ್ನತ ನಾಗರಿಕ ಪ್ರಶಸ್ತಿಯನ್ನು ನೀಡಿ ಎಂದು ವ್ಯಂಗ್ಯವಾಡಿದ್ದಾರೆ.
ಸಾವರ್ಕರ್ ಗಾಂಧೀಜಿಯನ್ನು ಹತ್ಯೆ ಮಾಡಲು ಸಂಚು ರೂಪಿಸಿದ್ದಾರೆ ಎಂಬ ಆರೋಪವಿದೆ. ಆದರೇ ನಾಥೂರಾಮ್ ಗೋಡ್ಸೆ ಗಾಂಧೀಜಿಯನ್ನು ಗುಂಡಿಕ್ಕಿ ಹತ್ಯೆಗೈದಿದ್ದರು. ಈ ವರ್ಷ ಗಾಂಧೀಜಿಯವರ 150 ನೇ ಜನ್ಮ ವರ್ಷಾಚರಣೆಯಿದೆ. ಆದ ಕಾರಣ ಎನ್ ಡಿ ಎ ಸರ್ಕಾರ ಭಾರತ ರತ್ನವನ್ನು ಸಾವರ್ಕರ್ ಬದಲಾಗಿ ಗೋಡ್ಸೆಗೆ ನೀಡಬೇಕು ಎಂದು ವ್ಯಂಗ್ಯವಾಡಿದ್ದಾರೆ.
ಕಾಂಗ್ರೆಸ್ ನಾಯಕ ರಷೀದ್ ಅಲ್ವಿ ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿ ಈ ಬಾರಿ ಸಾವರ್ಕರ್ ಹೆಸರು ಭಾರತ ರತ್ನ ಪಟ್ಟಿಯಲ್ಲಿದ್ದು ಮುಂದಿನ ಹೆಸರು ನಾಥೂರಾಮ್ ಗೋಡ್ಸೆಯದ್ದು ಎಂದು ಈಗಲೇ ಖಚಿತವಾಗಿದೆ. ಪ್ರತಿಯೊಬ್ಬರಿಗೂ ಸಾವರ್ಕರ್ ಇತಿಹಾಸ ತಿಳಿದಿದ್ದು ಗಾಂಧಿ ಹತ್ಯೆಗೆ ಸಂಚು ರೂಪಿಸಿದವರಲ್ಲಿ ಪ್ರಮುಖರು. ಇದಕ್ಕೆ ಸಾಕಷ್ಟು ಸಾಕ್ಷ್ಯಗಳಿವೆ. ಮುಂದಿನ ಬಾರಿ ಗೊಡ್ಸೆಗೆ ಬಿಜೆಪಿ ಸರ್ಕಾರ ಭಾರತ ರತ್ನ ನೀಡುವುದರಲ್ಲಿ ಯಾವುದೇ ಅನುಮಾನವಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇತ್ತೀಚಿಗೆ ಬಿಜೆಪಿ ಕಾರ್ಯನಿರತ ಅಧ್ಯಕ್ಷ ಜೆ.ಪಿ ನಡ್ಡಾ ಮತ್ತು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೆಂದ್ರ ಫಢ್ನವೀಸ್ ಮುಂಬರುವ ರಾಜ್ಯ ಚುನಾವಣಗೆ ಪಕ್ಷದ ಪ್ರಣಾಳಿಕೆಯನ್ನು ಬಿಡುಗಡೆಗೊಳಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Supreme Court: ತುರ್ತು ಪರಿಸ್ಥಿತಿ ವೇಳೆ ಸಂಸತ್ತು ಮಾಡಿದ್ದೆಲ್ಲ ತಪ್ಪಲ್ಲ
Delhi: ಕೇಜ್ರಿವಾಲ್ಗಿಂತ ಆತಿಶಿ ಸಾವಿರಪಟ್ಟು ಉತ್ತಮ: ಲೆ.ಗ.ಸಕ್ಸೇನಾ!
Uttar Pradesh ಈಗ ರಾಜಕಾರಣಿಗಳಿಂದ “ಬಿಳಿಟವಲ್’ ರಾಜಕೀಯ!
Andhra Pradesh: ಲಡ್ಡು ಪ್ರಸಾದ ವಿವಾದ: ತಿರುಪತಿಗೆ ಎಸ್ಐಟಿ ಭೇಟಿ
Choreographer ರೆಮೋ ಡಿಸೋಜಾ ವಿರುದ್ಧದ ಪ್ರಕರಣ ದೆಹಲಿ ಕೋರ್ಟ್ ಗೆ ವರ್ಗಾಯಿಸಿದ ಸುಪ್ರೀಂ
MUST WATCH
ಹೊಸ ಸೇರ್ಪಡೆ
ಮೆಜೆಂಟಾ ಮೊಬಿಲಿಟಿ ಸಂಸ್ಥೆ ವಾಹನ ಬಳಗಕ್ಕೆ ಟಾಟಾ ಏಸ್ ಇವಿ ಸೇರ್ಪಡೆ
Supreme Court: ತುರ್ತು ಪರಿಸ್ಥಿತಿ ವೇಳೆ ಸಂಸತ್ತು ಮಾಡಿದ್ದೆಲ್ಲ ತಪ್ಪಲ್ಲ
Gold Prices India:ಚಿನ್ನ ಮತ್ತೆ ದುಬಾರಿ: ದರ 870ರೂ. ಏರಿಕೆ: ಈಗ 10 ಗ್ರಾಂಗೆ 78,820 ರೂ.
Ullala: ದೇರಳಕಟ್ಟೆ: ರಸ್ತೆಯನ್ನು ಅತಿಕ್ರಮಿಸಿದ್ದ ಕಟ್ಟಡಗಳ ತೆರವು
Adani; ಆಸೀಸ್ ಕಲ್ಲಿದ್ದಲು ಗಣಿಯಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಆರೋಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.