PAK ನೆಲದಲ್ಲೇ ಉಗ್ರರ ಹುಟ್ಟಡಗಿಸಿದ ಇಂಡಿಯನ್ ಆರ್ಮಿ


Team Udayavani, Feb 26, 2019, 6:49 AM IST

terrorist-attack.jpg

ಜಮ್ಮು-ಕಾಶ್ಮೀರದ ಪುಲ್ವಾಮಾದಲ್ಲಿ 40 ಮಂದಿ ಸಿಆರ್ ಪಿಎಫ್ ಯೋಧರು ಹುತಾತ್ಮರಾದ ಘಟನೆಯ ಎರಡು ವಾರಗಳ ಬಳಿಕ ಭಾರತ ಪಾಕ್ ಉಗ್ರರ ಮೇಲೆ ಪ್ರತೀಕಾರ ತೀರಿಸಿಕೊಂಡಿದೆ. ಮಂಗಳವಾರ ಮುಂಜಾನೆ 3.30ರ ಸುಮಾರಿಗೆ ಭಾರತೀಯ ವಾಯುಸೇನೆ ಪಡೆಯ ಐಎಎಫ್ ಮಿರಾಜ್ 2000 ಯುದ್ಧ ವಿಮಾನ ಎಲ್ ಒಸಿ ಒಳಗೆ ನುಗ್ಗಿ ಬಾಲಕೋಟ್ ನಲ್ಲಿರುವ ಜೈಶ್ ಎ ಮೊಹಮ್ಮದ್ ಉಗ್ರರ ಶಿಬಿರಗಳ ಮೇಲೆ ಬರೋಬ್ಬರಿ 1000 ಕೆಜಿಯ ಬಾಂಬ್ ಗಳ ಸುರಿಮಳೆಗೈದಿದೆ. ಇದರಿಂದ ಉಗ್ರರ ಅಡಗುತಾಣ ಸಂಪೂರ್ಣ ನಾಶವಾಗಿದ್ದು, 200ರಿಂದ 300 ಉಗ್ರರು ಬಲಿಯಾಗಿದ್ದಾರೆ ಎಂದು ಪ್ರಾಥಮಿಕ ವರದಿ ತಿಳಿಸಿದೆ. ಮತ್ತೊಂದು ದಾಳಿ ನಡೆಸಲು ಪಾಕ್ ಉಗ್ರರು ಸಂಚು ನಡೆಸುತ್ತಿದ್ದಾರೆ ಎಂಬ ಖಚಿತ ಮಾಹಿತಿ ದೊರಕಿತ್ತು. ಉಗ್ರರ ವಿರುದ್ಧ ಕ್ರಮ ಕೈಗೊಳ್ಳಿ ಎಂದು ಪಾಕ್ ಗೆ ಸೂಚಿಸಿದ್ದೇವು. ಆದರೆ ಪಾಕ್ ಆ ಕೆಲಸ ಮಾಡಲಿಲ್ಲ. ಈ ವಿಚಾರದ ಹಿನ್ನೆಲೆಯಲ್ಲಿ ನಾವು ಏರ್ ಸ್ಟ್ರೈಕ್ ನಡೆಸಿದ್ದೇವೆ ಎಂದು ವಿದೇಶಾಂಗ ಕಾರ್ಯದರ್ಶಿ ವಿಜಯ್ ಗೋಖಲೆ ಮಾಹಿತಿ ನೀಡಿದ್ದಾರೆ. ದಾಳಿಯಲ್ಲಿ ಉಗ್ರರು, ಕಮಾಂಡರ್ ಗಳನ್ನು ಹತ್ಯೆಗೈಯಲಾಗಿದೆ. ಪಾಕಿಸ್ತಾನದ ಖೈಬರ್ ಪಖ್ತೂನ್ ವಾ ಪ್ರಾಂತ್ಯಕ್ಕೆ ನುಗ್ಗಿ ಉಗ್ರರ ನೆಲೆಗಳನ್ನು ನಾಶ ಮಾಡಲಾಗಿದೆ. ವಾಯುಸೇನೆ ದಾಳಿಯಲ್ಲಿ ಪಾಕ್ ಪ್ರಜೆಗಳ ಜೀವ ಹಾನಿಯಾಗಿಲ್ಲ. ಜೈಶ್ ಎ ಮೊಹಮ್ಮದ್ ಸಂಘಟನೆಯ ರೂವಾರಿ ಅಜರ್ ಮಸೂದ್ ನ ಭಾವಮೈದ ಮೌಲಾನಾ ಯೂಸೂಫ್ ಅಜರ್ ಹತ್ಯೆಯಾಗಿರುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.ಆದರೆ ಈ ಬಗ್ಗೆ ಇನ್ನಷ್ಟೇ ಖಚಿತ ಮಾಹಿತಿ ಲಭ್ಯವಾಗಬೇಕಾಗಿದೆ. ಭಾರತೀಯ ವಾಯುಸೇನೆ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಪಾಕ್ ವಿದೇಶಾಂಗ ಸಚಿವ ಶಾ ಮಹಮೂದ್ ಕುರೇಶಿ ಇಲಾಖೆಯ ಉನ್ನತ ಅಧಿಕಾರಿಗಳ ಜೊತೆ ಸಭೆ ನಡೆಸಿದ ಬಳಿಕ ಸುದ್ದಿಗಾರರ ಜೊತೆ ಮಾತನಾಡುತ್ತ, ಭಾರತ ಎಲ್ ಓಸಿ ಉಲ್ಲಂಘನೆಗೈದು ಪಾಕಿಸ್ತಾನದ ಮೇಲೆ ಆಕ್ರಮಣ ನಡೆಸಿದೆ. ಆದುದರಿಂದ ಈ ಆಕ್ರಮಣಕ್ಕೆ ಅತ್ಯಂತ ಪರಿಣಾಮಕಾರಿ ಉತ್ತರ ನೀಡುವ ಹಕ್ಕು ಪಾಕಿಸ್ತಾನಕ್ಕೆ ಇದೆ. ಮತ್ತು ಇದು ಆತ್ಮರಕ್ಷಣೆಗಾಗಿ ನಡೆಸುವ ಪ್ರತಿ ದಾಳಿಯಾಗಲಿದೆ ಎಂದು ತಿಳಿಸಿದ್ದಾರೆ.

ಟಾಪ್ ನ್ಯೂಸ್

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

1-siddu

Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?

1-mahayu

Mahayuti ಗೆಲುವು: ಆ್ಯಕ್ಸಿಸ್‌ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ

High Court: ನಕ್ಸಲ್‌ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್‌ ಮನವಿ ಮರು ಪರಿಶೀಲನೆಗೆ ನಿರ್ದೇಶ

High Court: ನಕ್ಸಲ್‌ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್‌ ಮನವಿ ಮರು ಪರಿಶೀಲನೆಗೆ ನಿರ್ದೇಶ

Khalisthan

Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ

rahul gandhi

Adani ಬಂಧಿಸಿ, ಸೆಬಿ ಮುಖ್ಯಸ್ಥೆ ವಜಾ ಮಾಡಿ: ರಾಹುಲ್‌ ಪಟ್ಟು

ಕನ್ನಡ ಅನ್ನ ನೀಡುವ ಭಾಷೆಯಾಗಿ ಬೆಳೆಯಬೇಕು

Education: ಕನ್ನಡ ಅನ್ನ ನೀಡುವ ಭಾಷೆಯಾಗಿ ಬೆಳೆಯಬೇಕು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-mahayu

Mahayuti ಗೆಲುವು: ಆ್ಯಕ್ಸಿಸ್‌ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ

Khalisthan

Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ

rahul gandhi

Adani ಬಂಧಿಸಿ, ಸೆಬಿ ಮುಖ್ಯಸ್ಥೆ ವಜಾ ಮಾಡಿ: ರಾಹುಲ್‌ ಪಟ್ಟು

Yasin Malik

Yasin Malik ವಿಚಾರಣೆಗೆ ತಿಹಾರ್‌ ಜೈಲಿನಲ್ಲೇ ಕೋರ್ಟ್‌ ರೂಂ: ಸುಪ್ರೀಂ

train-track

Train ಜನಶತಾಬ್ದಿ ಎಕ್ಸ್‌ಪ್ರೆಸ್‌ನಲ್ಲಿ ಹಾವು ಪ್ರತ್ಯಕ್ಷ: ತನಿಖೆಗೆ ಆದೇಶ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

1-siddu

Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?

1-mahayu

Mahayuti ಗೆಲುವು: ಆ್ಯಕ್ಸಿಸ್‌ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ

High Court: ನಕ್ಸಲ್‌ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್‌ ಮನವಿ ಮರು ಪರಿಶೀಲನೆಗೆ ನಿರ್ದೇಶ

High Court: ನಕ್ಸಲ್‌ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್‌ ಮನವಿ ಮರು ಪರಿಶೀಲನೆಗೆ ನಿರ್ದೇಶ

Khalisthan

Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.