ಬಂಗಾಳದಲ್ಲಿಯೂ ಸ್ಪರ್ಧೆ-ಚುನಾವಣೆಯಲ್ಲಿ ಸ್ಪರ್ಧಿಸಲು ಕಾಂಗ್ರೆಸ್ ಅಪ್ಪಣೆ ಬೇಕಾ?ಒವೈಸಿ ಆಕ್ರೋಶ
ನೀವು(ಕಾಂಗ್ರೆಸ್) ಹೋಗಿ ಶಿವಸೇನಾದ (ಮಹಾರಾಷ್ಟ್ರದ) ತೊಡೆಯ ಮೇಲೆ ಕುಳಿತಿದ್ದೀರಿ.
Team Udayavani, Nov 11, 2020, 6:27 PM IST
ಹೈದರಾಬಾದ್: ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಅಖಾಡಕ್ಕಿಳಿದಿದ್ದ ಅಸಾದುದ್ದೀನ್ ಒವೈಸಿಯ ಆಲ್ ಇಂಡಿಯಾ ಮಜ್ಲಿಸ್ ಎ ಇತ್ತೆಹಾದುಲ್ ಮುಸ್ಲಿಮೀನ್ (ಎಐಎಂಐಎಂ) ಪಕ್ಷ ಐದು ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ್ದು, ಇದೀಗ ಉತ್ತರಪ್ರದೇಶ ಮತ್ತು ಪಶ್ಚಿಮಬಂಗಾಳದಲ್ಲಿಯೂ ಪಕ್ಷದ ಅಭ್ಯರ್ಥಿಗಳನ್ನು ಕಣಕ್ಕಿಳಿಸುವುದಾಗಿ ತಿಳಿಸಿದೆ.
ಹೈದರಾಬಾದ್ ನಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಒವೈಸಿ, ಬಿಹಾರ ಸೀಮಾಂಚಲ್ ಪ್ರದೇಶದ ನ್ಯಾಯಕ್ಕಾಗಿ ನಮ್ಮ ಪಕ್ಷ ಹೋರಾಟ ನಡೆಸಲಿದೆ ಎಂದು ಹೇಳಿದರು.
ಬಿಹಾರ ಚುನಾವಣೆಯಲ್ಲಿ ಒವೈಸಿ ಪಕ್ಷ ಬಿಜೆಪಿ ವಿರೋಧಿ ಮತಗಳನ್ನು ವಿಭಜಿಸಿದೆ ಎಂಬ ಆರೋಪಕ್ಕೆ ಪ್ರತಿಕ್ರಿಯೆ ನೀಡಿದ ಅವರು, ನಮ್ಮ ಸ್ವ ಇಚ್ಛೆಯಿಂದ ಸ್ಪರ್ಧಿಸುವ ಹಕ್ಕಿಗಾಗಿ ರಾಜಕೀಯ ಪಕ್ಷವನ್ನು ಸ್ಥಾಪಿಸಿರುವುದಾಗಿ ಹೇಳಿದರು.
“ನಿಮ್ಮ ಅರ್ಥದ ಪ್ರಕಾರ ನಾವು ಚುನಾವಣೆಯಲ್ಲಿ ಸ್ಪರ್ಧಿಸಬಾರದು. ನೀವು(ಕಾಂಗ್ರೆಸ್) ಹೋಗಿ ಶಿವಸೇನಾದ (ಮಹಾರಾಷ್ಟ್ರದ) ತೊಡೆಯ ಮೇಲೆ ಕುಳಿತಿದ್ದೀರಿ. ಒಂದು ವೇಳೆ ಯಾರಾದರು ಯಾಕೆ ನೀವು ಚುನಾವಣೆಯಲ್ಲಿ ಸ್ಪರ್ಧಿಸುತ್ತೀರಿ ಎಂದು ಕೇಳಿದರೆ, ನಾವು ಪಶ್ಚಿಮಬಂಗಾಳದಲ್ಲಿ, ಉತ್ತರಪ್ರದೇಶದಲ್ಲಿಯೂ ಸ್ಪರ್ಧಿಸುತ್ತೇವೆ. ನಾವು ದೇಶದ ಪ್ರತಿಯೊಂದು ಚುನಾವಣೆಯಲ್ಲಿಯೂ ಸ್ಪರ್ಧಿಸುತ್ತೇವೆ ಎಂದು ಒವೈಸಿ ತಿರುಗೇಟು ನೀಡಿದ್ದಾರೆ.
ಇದನ್ನೂ ಓದಿ:ನಕಲಿ ವೋಟರ್ ಐಡಿ ಪ್ರಕರಣ: ಶಾಸಕ ಮುನಿರತ್ನಗೆ ಮತ್ತಷ್ಟು ಸಂಕಷ್ಟ?
ದೇಶದ ಚುನಾವಣೆಯಲ್ಲಿ ಸ್ಪರ್ಧಿಸಬೇಕಾದರೆ ನಾನು ಯಾರದ್ದಾದರು ಅನುಮತಿ ಪಡೆಯಬೇಕಾದ ಅಗತ್ಯವಿದೆಯೇ ಎಂದು ಪ್ರಶ್ನಿಸಿದರು. ಎಐಎಂಐಎಂ ಪಕ್ಷ ದೇಶದ ಇತರ ರಾಜ್ಯಗಳಲ್ಲಿಯೂ ಸ್ಪರ್ಧಿಸಲಿದೆಯೇ ಎಂಬ ಪ್ರಶ್ನೆಗೆ ಅವರು ಈ ಪ್ರತಿಕ್ರಿಯೆ ನೀಡಿರುವುದಾಗಿ ವರದಿ ತಿಳಿಸಿದೆ.
ಎಐಎಂಐಎಂ 2022ರಲ್ಲಿ ಉತ್ತರಪ್ರದೇಶದ ವಿಧಾನಸಭಾ ಚುನಾವಣೆಯಲ್ಲಿಯೂ ಸ್ಪರ್ಧಿಸಲಿದೆ. ನಾವು ಯಾರ ಜತೆ ಮೈತ್ರಿ ಮಾಡಿಕೊಳ್ಳುತ್ತೇವೆ ಎಂಬುದು ಸಮಯ ಮಾತ್ರ ನಿರ್ಧರಿಸಲಿದೆ ಎಂದು ಒವೈಸಿ ಹೇಳಿದರು.
ಬಿಹಾರ ಚುನಾವಣೆಯಲ್ಲಿ ಎಐಎಂಐಎಂ ಮತ ವಿಭಜನೆಗೆ ಕಾರಣವಾಗಿದೆ ಎಂಬ ಪಶ್ಚಿಮಬಂಗಾಳದ ಅಧೀರ್ ರಂಜನ್ ಚೌಧುರಿ ಆರೋಪಕ್ಕೆ ಪ್ರತಿಕ್ರಿಯೆ ನೀಡಿರುವ ಒವೈಸಿ, ಚೌಧುರಿ ತಮ್ಮ ಕ್ಷೇತ್ರದಲ್ಲಿ ಮುಸ್ಲಿಮರ ಅಭಿವೃದ್ಧಿಗೆ ಏನು ಮಾಡಿದ್ದಾರೆ ಎಂಬುದನ್ನು ತಿಳಿಸಲಿ ಎಂದು ಹೇಳಿದರು. ಅವರು ಮುಸ್ಲಿಮರಿಗಾಗಿ ಏನು ಮಾಡಿದ್ದಾರೆ ಎಂಬುದು ತೋರಿಸಲಿ ಎಂದು ಸವಾಲು ಹಾಕಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Manipur; ಪೊಲೀಸ್ ಇಲಾಖೆಯಲ್ಲಿ ಮೈತೇಯಿ ಮತ್ತು ಕುಕಿಗಳು ಒಟ್ಟಾಗಿ ಕೆಲಸ ಮಾಡಬೇಕು
Kerala; ಸರಕಾರಿ ಶಾಲೆಯಲ್ಲಿ ಕ್ರಿಸ್ಮಸ್ ಆಚರಣೆಗೆ ಅಡ್ಡಿ,ಗೋದಲಿ ಧ್ವಂಸ: ವ್ಯಾಪಕ ಆಕ್ರೋಶ
Mahakumbh 2025: 45 ಕೋಟಿ ಯಾತ್ರಾರ್ಥಿಗಳ ನಿರೀಕ್ಷೆ
Drama ಬಿಟ್ಟು ಅಂಬೇಡ್ಕರ್ ಅವರಿಗೆ ನಿರಂತರ ಅವಮಾನ ಮಾಡಿದ್ದಕ್ಕೆ ಕಾಂಗ್ರೆಸ್ ಕ್ಷಮೆ ಕೇಳಲಿ
UPSC ವಂಚನೆ ಪ್ರಕರಣ: ಪೂಜಾ ಖೇಡ್ಕರ್ ನಿರೀಕ್ಷಣಾ ಜಾಮೀನಿಗೆ ಹೈಕೋರ್ಟ್ ನಕಾರ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Manipur; ಪೊಲೀಸ್ ಇಲಾಖೆಯಲ್ಲಿ ಮೈತೇಯಿ ಮತ್ತು ಕುಕಿಗಳು ಒಟ್ಟಾಗಿ ಕೆಲಸ ಮಾಡಬೇಕು
Team India; ಅಶ್ವಿನ್ ಬದಲಿಯಾಗಿ ಟೀಂ ಇಂಡಿಯಾ ಸೇರಿದ ಕರ್ನಾಟಕ ಕರಾವಳಿ ಮೂಲದ ಸ್ಪಿನ್ನರ್
Kerala; ಸರಕಾರಿ ಶಾಲೆಯಲ್ಲಿ ಕ್ರಿಸ್ಮಸ್ ಆಚರಣೆಗೆ ಅಡ್ಡಿ,ಗೋದಲಿ ಧ್ವಂಸ: ವ್ಯಾಪಕ ಆಕ್ರೋಶ
Kambli Health: ಮಾಜಿ ಕ್ರಿಕೆಟಿಗ ವಿನೋದ್ ಕಾಂಬ್ಳಿ ಆರೋಗ್ಯ ಸ್ಥಿತಿ ಗಂಭೀರ!
Unlock Raghava Movie: ರಾಘವನ ಮೇಲೆ ಕಣ್ಣಿಟ್ಟ ರಚೆಲ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.