NCP ಕೋಮು ವಿಭಜಕ ಶಕ್ತಿಗಳ ವಿರುದ್ಧ ಹೋರಾಡಬೇಕಾಗಿದೆ: ಶರದ್ ಪವಾರ್

ಕರಾಡ್ ನಲ್ಲಿ ಹಿರಿಯ ನಾಯಕನ ಶಕ್ತಿ ಪ್ರದರ್ಶನ

Team Udayavani, Jul 3, 2023, 3:10 PM IST

Sharad pawar (2)

ಸತಾರಾ: ಮಹಾರಾಷ್ಟ್ರ ಮತ್ತು ದೇಶದಲ್ಲಿ ಕೋಮು ವಿಭಜನೆಯನ್ನು ಸೃಷ್ಟಿಸುವ ಶಕ್ತಿಗಳ ವಿರುದ್ಧ ಹೋರಾಡುವ ಅಗತ್ಯವಿದೆ ಎಂದು ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಸೋಮವಾರ ಹೇಳಿದ್ದಾರೆ.

ಏಕನಾಥ್ ಶಿಂಧೆ ನೇತೃತ್ವದ ಸರ್ಕಾರದಲ್ಲಿ ಉಪಮುಖ್ಯಮಂತ್ರಿಯಾಗಲು ಅಜಿತ್ ಪವಾರ್ ಪಕ್ಷವನ್ನು ವಿಭಜಿಸಿದ ಒಂದು ದಿನದ ನಂತರ ಕರಾಡ್‌ನಲ್ಲಿ ಎನ್‌ಸಿಪಿ ಕಾರ್ಯಕರ್ತರು ಮತ್ತು ಬೆಂಬಲಿಗರನ್ನು ಉದ್ದೇಶಿಸಿ ಮಾತನಾಡಿದ ಅವರು, ಇತರ ಪಕ್ಷಗಳನ್ನು ಒಡೆಯುವ ಬಿಜೆಪಿಯ ತಂತ್ರಗಳಿಗೆ ನಮ್ಮ ಕೆಲವರು ಬಲಿಯಾಗಿದ್ದಾರೆ ಎಂದರು.

ಶರದ್ ಪವಾರ್ ಅವರು ಕರಾಡ್ ನಲ್ಲಿರುವ ತಮ್ಮ ಆಪ್ತ ಮತ್ತು ಮಹಾರಾಷ್ಟ್ರದ ಮೊದಲ ಮುಖ್ಯಮಂತ್ರಿ ಯಶವಂತರಾವ್ ಚವಾಣ್ ಅವರ ಸ್ಮಾರಕಕ್ಕೆ ಭೇಟಿ ನೀಡಿ ಅವರಿಗೆ ಪುಷ್ಪ ನಮನ ಸಲ್ಲಿಸಿದರು.ಗುರು ಪೂರ್ಣಿಮೆಯ ಸಂದರ್ಭದಲ್ಲಿ ದಿವಂಗತ ಚವಾಣ್ ಅವರ ಸ್ಮಾರಕ ‘ಪ್ರೀತಿಸಂಗಮ್’ಗೆ 82 ವರ್ಷದ ಹಿರಿಯ ನಾಯಕ ಪವಾರ್ ಅವರ ಈ ಭೇಟಿಯನ್ನು ಶಕ್ತಿಯ ಪ್ರದರ್ಶನವೆಂದು ಪರಿಗಣಿಸಲಾಗಿದೆ.

ನಾವು ಉದ್ಧವ್ ಠಾಕ್ರೆಯವರ ನೇತೃತ್ವದಲ್ಲಿ ಮಹಾರಾಷ್ಟ್ರಕ್ಕೆ ಸೇವೆ ಸಲ್ಲಿಸುತ್ತಿದ್ದೇವು ಆದರೆ ನಮ್ಮ ಸರ್ಕಾರವನ್ನು ಕೆಲವು ಜನರು ಉರುಳಿಸಿದರು. ರಾಷ್ಟ್ರದ ಇತರ ಕೆಲವು ಭಾಗಗಳಲ್ಲಿಯೂ ಇದೇ ಸಂಭವಿಸಿದೆ. ಮಹಾರಾಷ್ಟ್ರದಲ್ಲಿ ಜಾತಿ, ಧರ್ಮದ ಹೆಸರಿನಲ್ಲಿ ಕೆಲವು ಗುಂಪುಗಳಿಂದ ಜನರಲ್ಲಿ ಬಿರುಕು ಮೂಡಿಸಲಾಗುತ್ತಿದೆ. ನಾವು ದೇಶದಲ್ಲಿ ಪ್ರಜಾಪ್ರಭುತ್ವವನ್ನು ರಕ್ಷಿಸಬೇಕಾಗಿದೆ ಎಂದರು.

ಸೋಮವಾರ ಬೆಳಗ್ಗೆ ಪುಣೆಯಿಂದ ಕರಾಡ್ ಗೆ ಹೊರಟ ಶರದ್ ಪವಾರ್, ದಾರಿಯುದ್ದಕ್ಕೂ ರಸ್ತೆಬದಿಯಲ್ಲಿ ಸಾಲುಗಟ್ಟಿ ನಿಂತಿದ್ದ ಬೆಂಬಲಿಗರನ್ನು ಭೇಟಿ ಮಾಡಿದರು.

ತಮಿಳುನಾಡು ಸಿಎಂ ಎಂಕೆ ಸ್ಟಾಲಿನ್ ಎನ್‌ಸಿಪಿ ಅಧ್ಯಕ್ಷ ಶರದ್ ಪವಾರ್ ಅವರೊಂದಿಗೆ ಮಾತನಾಡಿ ರಾಜಕೀಯ ಹೋರಾಟಕ್ಕೆ ತಮ್ಮ ಬೆಂಬಲವನ್ನು ಸೂಚಿಸಿದ್ದಾರೆ.

ಟಾಪ್ ನ್ಯೂಸ್

Formula E race corruption case: ಜ.6ರಂದು ಕೆಟಿಆರ್‌ ವಿಚಾರಣೆ

Bangladesh ಸುಧಾರಿಸುವವರೆಗೂ ಪ್ರಾರ್ಥನೆ ನಿಲ್ಲದು: ಇಸ್ಕಾನ್‌

ಸನಾತನ ಅರ್ಥ ತಿಳಿಯದೆ ತಪ್ಪು ದಾರಿಗೆ ಸಮಾಜ: ಧನಕರ್‌

Arvind Kejriwal: ಕೇಂದ್ರ ಸರಕಾರ‌ ದಿಲ್ಲಿಯಲ್ಲಿ ಏನೂ ಮಾಡಿಲ್ಲ

RSS; ಶಿಸ್ತು, ಧೈರ್ಯ ತುಂಬಲು ಆರೆಸ್ಸೆಸ್‌ನಲ್ಲಿ ಲಾಠಿ ಬಳಕೆ: ಮೋಹನ್‌ ಭಾಗವತ್‌

ಸಾವರ್ಕರ್‌ ಹೆಸರಿನ ಕಾಲೇಜು: ಕಾಂಗ್ರೆಸ್‌, ಬಿಜೆಪಿ ಜಟಾಪಟಿ

Rajkot: ವಕ್ಫ್ ಆದೇಶವೆಂದು ಅಂಗಡಿಗಳ ತೆರವು: 9 ಮಂದಿ ಬಂಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Formula E race corruption case: ಜ.6ರಂದು ಕೆಟಿಆರ್‌ ವಿಚಾರಣೆ

Formula E race corruption case: ಜ.6ರಂದು ಕೆಟಿಆರ್‌ ವಿಚಾರಣೆ

Bangladesh ಸುಧಾರಿಸುವವರೆಗೂ ಪ್ರಾರ್ಥನೆ ನಿಲ್ಲದು: ಇಸ್ಕಾನ್‌

Bangladesh ಸುಧಾರಿಸುವವರೆಗೂ ಪ್ರಾರ್ಥನೆ ನಿಲ್ಲದು: ಇಸ್ಕಾನ್‌

ಸನಾತನ ಅರ್ಥ ತಿಳಿಯದೆ ತಪ್ಪು ದಾರಿಗೆ ಸಮಾಜ: ಧನಕರ್‌

ಸನಾತನ ಅರ್ಥ ತಿಳಿಯದೆ ತಪ್ಪು ದಾರಿಗೆ ಸಮಾಜ: ಧನಕರ್‌

Arvind Kejriwal: ಕೇಂದ್ರ ಸರಕಾರ‌ ದಿಲ್ಲಿಯಲ್ಲಿ ಏನೂ ಮಾಡಿಲ್ಲ

Arvind Kejriwal: ಕೇಂದ್ರ ಸರಕಾರ‌ ದಿಲ್ಲಿಯಲ್ಲಿ ಏನೂ ಮಾಡಿಲ್ಲ

RSS; ಶಿಸ್ತು, ಧೈರ್ಯ ತುಂಬಲು ಆರೆಸ್ಸೆಸ್‌ನಲ್ಲಿ ಲಾಠಿ ಬಳಕೆ: ಮೋಹನ್‌ ಭಾಗವತ್‌

RSS; ಶಿಸ್ತು, ಧೈರ್ಯ ತುಂಬಲು ಆರೆಸ್ಸೆಸ್‌ನಲ್ಲಿ ಲಾಠಿ ಬಳಕೆ: ಮೋಹನ್‌ ಭಾಗವತ್‌

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Formula E race corruption case: ಜ.6ರಂದು ಕೆಟಿಆರ್‌ ವಿಚಾರಣೆ

Formula E race corruption case: ಜ.6ರಂದು ಕೆಟಿಆರ್‌ ವಿಚಾರಣೆ

Bangladesh ಸುಧಾರಿಸುವವರೆಗೂ ಪ್ರಾರ್ಥನೆ ನಿಲ್ಲದು: ಇಸ್ಕಾನ್‌

Bangladesh ಸುಧಾರಿಸುವವರೆಗೂ ಪ್ರಾರ್ಥನೆ ನಿಲ್ಲದು: ಇಸ್ಕಾನ್‌

Kambala

Kambala; ದೇವರ ಕಂಬಳ ಖ್ಯಾತಿಯ ಹೊಕ್ಕಾಡಿಗೋಳಿ ಕಂಬಳ 

ಸನಾತನ ಅರ್ಥ ತಿಳಿಯದೆ ತಪ್ಪು ದಾರಿಗೆ ಸಮಾಜ: ಧನಕರ್‌

ಸನಾತನ ಅರ್ಥ ತಿಳಿಯದೆ ತಪ್ಪು ದಾರಿಗೆ ಸಮಾಜ: ಧನಕರ್‌

1-deeee

Udupi; ಮಕ್ಕಳ ರಕ್ಷಣೆ ಕಾಯ್ದೆ ಅನುಷ್ಠಾನ ಅಗತ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.