ತೆರಿಗೆ ವಂಚಕರ ವಿರುದ್ಧ ಇಡಿ ಕಠಿನ ಕ್ರಮ ಕೈಗೊಳ್ಳಲಿ: ಜೇಟ್ಲಿ

Team Udayavani, Apr 30, 2017, 11:30 AM IST

Arun-Jaitley-800-B.jpg

ಹೊಸದಿಲ್ಲಿ: ತೆರಿಗೆ ವಂಚಕರು ಮತ್ತು ಅಕ್ರಮ ಹಣಕಾಸು ವರ್ಗಾವಣೆಯಂತಹ ಕೃತ್ಯಗಳಲ್ಲಿ ತೊಡಗಿದವರ ವಿರುದ್ಧ ಜಾರಿ ನಿರ್ದೇಶನಾಲಯ ತನ್ನ ಕಾನೂನಾತ್ಮಕ ಎಲ್ಲಾ ಅಧಿಕಾರಗಳನ್ನು ಬಳಸಿಕೊಂಡು ಕಠಿನ ಕ್ರಮಕೈಗೊಳ್ಳಬೇಕು ಎಂದು ಹಣಕಾಸು ಸಚಿವ ಅರುಣ್‌ ಜೇಟ್ಲಿ ಹೇಳಿದ್ದಾರೆ. 

ಈ ಮೂಲಕ ಅಪನಗದೀಕರಣದ ಬಳಿಕ ತೆರಿಗೆ ವಂಚಕರು ಮತ್ತು ಹಣಕಾಸು ಅಕ್ರಮಗಳಲ್ಲಿ ಭಾಗಿಯಾದವರನ್ನು ಸುಮ್ಮನೆ ಬಿಡಕೂಡದು ಎಂಬ ಎಚ್ಚರಿಕೆ ರವಾನಿಸಿದ್ದಾರೆ. 

ಜಾರಿ ನಿರ್ದೇಶನಾಲಯ ದಿನ ಪ್ರಯುಕ್ತ ಮಾತನಾಡಿದ ಅವರು ಕಠಿನವಾಗಿ ಕಾನೂನುಗಳನ್ನು ಜಾರಿಗೊಳಿಸುವುದರ ಮೂಲಕ ಕಾನೂನು ಬದ್ಧವಾಗಿ ಖಜಾನೆ ತುಂಬಿಸಲು ನೆರವಾಗಬೇಕು ಎಂದು ಹೇಳಿದರು. ಅಲ್ಲದೇ ತೆರಿಗೆ ಕಾನೂನುಗಳ ಪಾಲನೇ ಮಾಡದಿರುವುದರಿಂದ ದೊಡ್ಡ ಪ್ರಮಾಣದಲ್ಲಿ ಜನತೆ ಮತ್ತು ರಾಷ್ಟ್ರೀಯ ಹಿತಾಸಕ್ತಿಗೆ ಮಾರಕವಾಗುತ್ತದೆ. ಆದ್ದರಿಂದ ಈ ದಿಶೆಯಲ್ಲಿ ದೇಶಕ್ಕಾಗಿ ಜಾರಿ ನಿರ್ದೇಶನಾಲಯದ ಪಾಲು ದೊಡ್ಡದಿದೆ. ಕಾನೂನು ಅನುಸರಣೆ ಮತ್ತು ತೆರಿಗೆ ಪದ್ಧತಿ, ಕರೆನ್ಸಿ ಕಾನೂನು ಅಭಿವೃದ್ಧಿ ಹೊಂದಿದ ರಾಷ್ಟ್ರಗಳ ಲಕ್ಷಣಗಳು. ಅಭಿವೃದ್ಧಿ ಹೊಂದಿದ ರಾಷ್ಟ್ರಗಳಲ್ಲಿ ಕಾನೂನು ಉಲ್ಲಂಘನೆ ಕಡಿಮೆ. ಅಲ್ಲದೇ ನಗದು ಆರ್ಥಿಕತೆ ಹೆಚ್ಚಿನ ಕಾನೂನಿನ ಅನುಸರಣೆ ಇಲ್ಲದ್ದಕ್ಕೆ ಕಾರಣವಾಗುತ್ತದೆ. ಇದನ್ನು ಕಡಿಮೆಗೊಳಿಸಬೇಕು ಎಂಬ ಮಾತುಗಳನ್ನು ಜೇಟ್ಲಿ ಹೇಳಿದ್ದಾರೆ. 

9 ಲಕ್ಷ ಕಂಪೆನಿಗಳು ರಿಟರ್ನ್ ಸಲ್ಲಿಸಿಲ್ಲ
ದೇಶದಲ್ಲಿ ಸುಮಾರು 8ರಿಂದ 9 ಲಕ್ಷ ನೋಂದಾಯಿತ ಕಂಪೆನಿಗಳು ಅಕ್ರಮ ಹಣ ವರ್ಗಾವಣೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತಿವೆ ಎಂದು ಕಂದಾಯ ಕಾರ್ಯದರ್ಶಿ ಹಸು¾ಖ್‌ ಅಧಿಯಾ ಹೇಳಿದ್ದಾರೆ.ದೇಶದಲ್ಲಿ ಒಟ್ಟು 15 ಲಕ್ಷ ನೋಂದಾಯಿತ ಕಂಪೆನಿಗಳು ಕಾರ್ಯನಿರ್ವಹಿಸುತ್ತಿದ್ದು, ಇವುಗಳ ಪೈಕಿ 8ರಿಂದ 9 ಲಕ್ಷ ಕಂಪೆನಿಗಳು ತೆರಿಗೆ ಮಾಹಿತಿಯನ್ನು ಕಾಲಕಾಲಕ್ಕೆ ಸಲ್ಲಿಕೆ ಮಾಡುತ್ತಿಲ್ಲ. 

ಈ ಕಂಪೆನಿಗಳು ಅಕ್ರಮ ಹಣ ವರ್ಗಾವಣೆಯಲ್ಲಿ ತೊಡಗಿರುವ ಸಾಧ್ಯತೆ ಹೆಚ್ಚಿದೆ. ಪ್ರತಿ 15 ದಿನಗಳಿಗೆ ಒಮ್ಮೆ ಪ್ರಧಾನಿ ಕಾರ್ಯಾಲಯ ಈ ಕಂಪೆನಿಗಳ ಕಾರ್ಯ ನಿರ್ವಹಣೆಯ ಮೇಲೆ ನಿಗಾ ವಹಿಸುತ್ತಿದೆ. ಇವುಗಳ ಕಾರ್ಯ ಚಟುವಟಿಕೆ ಪರಿಶೀಲಿಸಲು ಪಿಎಂಒ ಕಚೇರಿಯಲ್ಲಿ ವಿಶೇಷ ಕಾರ್ಯಪಡೆ ರಚನೆ ಮಾಡಲಾಗಿದೆ. ಅಲ್ಲದೆ, ಈಗಾಗಲೇ ಇಂತಹ ಕೆಲವು ಕಂಪೆನಿಗಳಿಗೆ ನೋಟಿಸ್‌ ಅನ್ನೂ ಜಾರಿ ಮಾಡಲಾಗಿದೆ ಎಂದಿದ್ದಾರೆ ಅಧಿಯಾ.
 
ಟಾಪ್ ನ್ಯೂಸ್

India’s first case of HMPV infection detected in Bangalore

HMPV Virus: ಭಾರತದ ಮೊದಲ ಎಚ್‌ಎಂಪಿವಿ ಸೋಂಕು ಪ್ರಕರಣ ಬೆಂಗಳೂರಿನಲ್ಲಿ ಪತ್ತೆ

Toxic: ಯಶ್‌ ಬರ್ತ್‌ ಡೇಗೆ ʼಟಾಕ್ಸಿಕ್‌ʼನಿಂದ ಸಿಗಲಿದೆ ಬಿಗ್‌ ಅಪ್ಡೇಟ್; ಫ್ಯಾನ್ಸ್‌ ಥ್ರಿಲ್

Toxic: ಯಶ್‌ ಬರ್ತ್‌ ಡೇಗೆ ʼಟಾಕ್ಸಿಕ್‌ʼನಿಂದ ಸಿಗಲಿದೆ ಬಿಗ್‌ ಅಪ್ಡೇಟ್; ಫ್ಯಾನ್ಸ್‌ ಥ್ರಿಲ್

Hunasuru: ಬೊಲೆರೋ ವಾಹನಕ್ಕೆ ಡಿಕ್ಕಿ ಹೊಡೆದು ನದಿಗೆ ಬಿದ್ದ ಬೈಕ್ ಸವಾರ ಮೃತ್ಯು

Hunasuru: ಬೊಲೆರೋ ವಾಹನಕ್ಕೆ ಡಿಕ್ಕಿ ಹೊಡೆದು ನದಿಗೆ ಬಿದ್ದ ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

Chhattisgarh: ಪತ್ರಕರ್ತ ಮುಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಹೈದರಾಬಾದ್‌ನಲ್ಲಿ ಬಂಧನ

Chhattisgarh: ಪತ್ರಕರ್ತ ಮುಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಹೈದರಾಬಾದ್‌ನಲ್ಲಿ ಬಂಧನ

Honnavara: ಲಾರಿ ಪಲ್ಟಿಯಾಗಿ ಇಬ್ಬರು ಸಾವು; ಮೂವರಿಗೆ ಗಾಯ

Honnavara: ಲಾರಿ ಪಲ್ಟಿಯಾಗಿ ಇಬ್ಬರು ಸಾವು; ಮೂವರಿಗೆ ಗಾಯ

ಅಪ್ಪನನ್ನೇ ಬದಲಿಸಿದ ಅತಿಶಿ: ಪ್ರಿಯಾಂಕಾ ಬೆನ್ನಲ್ಲೇ ವಿವಾದಾತ್ಮಕ ಹೇಳಿಕೆ ನೀಡಿದ ಬಿಧುರಿ

ಅಪ್ಪನನ್ನೇ ಬದಲಿಸಿದ ಅತಿಶಿ: ಪ್ರಿಯಾಂಕಾ ಬೆನ್ನಲ್ಲೇ ವಿವಾದಾತ್ಮಕ ಹೇಳಿಕೆ ನೀಡಿದ ಬಿಧುರಿ

India Cricket: The star all-rounder announced his retirement from limited over cricket

India Cricket: ಸೀಮಿತ ಓವರ್‌ ಕ್ರಿಕೆಟ್‌ ಗೆ ನಿವೃತ್ತಿ ಘೋಷಿಸಿದ ಸ್ಟಾರ್‌ ಆಲ್‌ ರೌಂಡರ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chhattisgarh: ಪತ್ರಕರ್ತ ಮುಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಹೈದರಾಬಾದ್‌ನಲ್ಲಿ ಬಂಧನ

Chhattisgarh: ಪತ್ರಕರ್ತ ಮುಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಹೈದರಾಬಾದ್‌ನಲ್ಲಿ ಬಂಧನ

ಅಪ್ಪನನ್ನೇ ಬದಲಿಸಿದ ಅತಿಶಿ: ಪ್ರಿಯಾಂಕಾ ಬೆನ್ನಲ್ಲೇ ವಿವಾದಾತ್ಮಕ ಹೇಳಿಕೆ ನೀಡಿದ ಬಿಧುರಿ

ಅಪ್ಪನನ್ನೇ ಬದಲಿಸಿದ ಅತಿಶಿ: ಪ್ರಿಯಾಂಕಾ ಬೆನ್ನಲ್ಲೇ ವಿವಾದಾತ್ಮಕ ಹೇಳಿಕೆ ನೀಡಿದ ಬಿಧುರಿ

Prashant Kishor

Prashant Kishor: ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಪ್ರಶಾಂತ್‌ ಕಿಶೋರ್‌ ಬಂಧನ

supreme-Court

Protect: ಹೆತ್ತವರನ್ನು ಸಾಕದಿದ್ದರೆ ಗಿಫ್ಟ್ ಡೀಡ್‌ ರದ್ದು: ಸುಪ್ರೀಂ ಕೋರ್ಟ್‌

ವಲಸೆ ನಿಯಮ ಸಡಿಲಿಸಿದ ನ್ಯೂಜಿಲ್ಯಾಂಡ್‌ ಸರಕಾರ‌; ಭಾರತೀಯರಿಗೆ ಹೆಚ್ಚಿನ ಅವಕಾಶ ಸಾಧ್ಯತೆ

ವಲಸೆ ನಿಯಮ ಸಡಿಲಿಸಿದ ನ್ಯೂಜಿಲ್ಯಾಂಡ್‌ ಸರಕಾರ‌; ಭಾರತೀಯರಿಗೆ ಹೆಚ್ಚಿನ ಅವಕಾಶ ಸಾಧ್ಯತೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

India’s first case of HMPV infection detected in Bangalore

HMPV Virus: ಭಾರತದ ಮೊದಲ ಎಚ್‌ಎಂಪಿವಿ ಸೋಂಕು ಪ್ರಕರಣ ಬೆಂಗಳೂರಿನಲ್ಲಿ ಪತ್ತೆ

Toxic: ಯಶ್‌ ಬರ್ತ್‌ ಡೇಗೆ ʼಟಾಕ್ಸಿಕ್‌ʼನಿಂದ ಸಿಗಲಿದೆ ಬಿಗ್‌ ಅಪ್ಡೇಟ್; ಫ್ಯಾನ್ಸ್‌ ಥ್ರಿಲ್

Toxic: ಯಶ್‌ ಬರ್ತ್‌ ಡೇಗೆ ʼಟಾಕ್ಸಿಕ್‌ʼನಿಂದ ಸಿಗಲಿದೆ ಬಿಗ್‌ ಅಪ್ಡೇಟ್; ಫ್ಯಾನ್ಸ್‌ ಥ್ರಿಲ್

Hunasuru: ಬೊಲೆರೋ ವಾಹನಕ್ಕೆ ಡಿಕ್ಕಿ ಹೊಡೆದು ನದಿಗೆ ಬಿದ್ದ ಬೈಕ್ ಸವಾರ ಮೃತ್ಯು

Hunasuru: ಬೊಲೆರೋ ವಾಹನಕ್ಕೆ ಡಿಕ್ಕಿ ಹೊಡೆದು ನದಿಗೆ ಬಿದ್ದ ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

Koppala: ಬಂದ್ ಕರೆಗೆ ಅಂಗಡಿ- ಮುಂಗಟ್ಟು ಬಂದ್

Koppala: ಬಂದ್ ಕರೆಗೆ ಅಂಗಡಿ- ಮುಂಗಟ್ಟು ಬಂದ್

Chhattisgarh: ಪತ್ರಕರ್ತ ಮುಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಹೈದರಾಬಾದ್‌ನಲ್ಲಿ ಬಂಧನ

Chhattisgarh: ಪತ್ರಕರ್ತ ಮುಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಹೈದರಾಬಾದ್‌ನಲ್ಲಿ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.