ಇಂದು ನೀಟ್ ಪರೀಕ್ಷೆ; 3,843 ಕೇಂದ್ರಗಳಲ್ಲಿ ಸಿದ್ಧತೆ
ಅಭ್ಯರ್ಥಿಗಳಿಗೆ ಮಾರ್ಗಸೂಚಿ
Team Udayavani, Sep 13, 2020, 12:12 AM IST
ಸಾಂದರ್ಭಿಕ ಚಿತ್ರ
ಹೊಸದಿಲ್ಲಿ: ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ನ್ಯಾಶನಲ್ ಎಲಿಜಿಬಿಟಿ – ಕಂ – ಎಂಟ್ರೆನ್ಸ್ ಟೆಸ್ಟ್ (ನೀಟ್) ರವಿವಾರ ದೇಶಾದ್ಯಂತ ನಿಗದಿತ ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದೆ. ಮೇ 3ಕ್ಕೆ ನಿಗದಿಯಾಗಿದ್ದ ಪರೀಕ್ಷೆಯನ್ನು ಕೋವಿಡ್ ಲಾಕ್‌ಡೌನ್‌ನಿಂದಾಗಿ ಜು. 26ಕ್ಕೆ ಮುಂದೂಡಲಾಗಿತ್ತು. ಅನಂತರ ಸೆ. 13ಕ್ಕೆ ಮುಂದೂಡಲಾಗಿತ್ತು.
ಕೋವಿಡ್ ಮುನ್ನೆಚ್ಚರಿಕೆಗಳನ್ನು ಅಳವಡಿಸಿಕೊಂಡು ರಾಷ್ಟ್ರೀಯ ಪರೀಕ್ಷಾ ಪ್ರಾಧಿಕಾರ (ಎನ್‌ಟಿಎ)ವು ಈ ಪರೀಕ್ಷೆಯನ್ನು ಆಯೋಜಿಸಿದ್ದು, ದೇಶಾದ್ಯಂತ 15.97 ಲಕ್ಷ ವಿದ್ಯಾರ್ಥಿಗಳು ಹಾಜರಾಗಲಿದ್ದಾರೆ.
ಸಾಮಾಜಿಕ ಅಂತರ ಕಾಪಾಡಿಕೊಳ್ಳುವ ದೃಷ್ಟಿಯಿಂದ ಪರೀಕ್ಷಾ ಕೇಂದ್ರಗಳನ್ನು ಹೆಚ್ಚಿಸಲಾಗಿದೆ. ಈ ಮೊದಲು 2,546 ಕೇಂದ್ರಗಳನ್ನು ನಿಗದಿಪಡಿಸಲಾಗಿತ್ತು. ಈ ಬಾರಿ ಅದನ್ನು 3,843ಕ್ಕೆ ಹೆಚ್ಚಿಸಲಾಗಿದೆ. ಪರೀಕ್ಷಾ ಕೋಣೆಯಲ್ಲಿ ಕುಳಿತುಕೊಳ್ಳುವ ಅಭ್ಯರ್ಥಿಗಳ ಸಂಖ್ಯೆಯನ್ನು 24ರಿಂದ 12ಕ್ಕೆ ಇಳಿಸಲಾಗಿದೆ.
ಅಭ್ಯರ್ಥಿಗಳಿಗೆ ಮಾರ್ಗಸೂಚಿ
1 ಪರೀಕ್ಷಾರ್ಥಿಗಳು ನೀಟ್ ಅಡ್ಮಿಷನ್ ಕಾರ್ಡ್ ಮತ್ತು ಎ 4 ಕಾಗದ ದಲ್ಲಿ ಬರೆಯಲಾದ ಸ್ವಯಂ ದೃಢೀಕರಣ ಪತ್ರ ತರಬೇಕು.
2 ಪರೀಕ್ಷಾ ಕೇಂದ್ರ ಪ್ರವೇಶಿಸುವಾಗ ಫೇಸ್ ಮಾಸ್ಕ್ ತೆಗೆದು, ಸ್ವತ್ಛ, ಹೊಸ ಮಾಸ್ಕ್ ಧರಿಸಿ ಪ್ರವೇಶಿಸಬೇಕು.
3 ನೀಟ್ ವಸ್ತ್ರ ಸಂಹಿತೆಯ ಪ್ರಕಾರ ಅಭ್ಯರ್ಥಿಗಳು ಪಾದ ಮುಚ್ಚಿರುವ ಪಾದರಕ್ಷೆ, ಶೂ ಧರಿಸುವಂತಿಲ್ಲ. ಚಪ್ಪಲಿ ಅಥವಾ ಸ್ಯಾಂಡಲ್ ಧರಿಸಿರಬೇಕು.
4 ಅಭ್ಯರ್ಥಿಗಳ ಧರ್ಮಕ್ಕನುಗುಣವಾಗಿ ವಿಶೇಷ ಉಡುಪುಗಳನ್ನು ಧರಿಸುವುದೇ ಆದಲ್ಲಿ ಪರೀಕ್ಷೆಗೆ ಮುನ್ನ ಪರೀಕ್ಷಾ ಕೇಂದ್ರಕ್ಕೆ ಬಂದು ತಪಾಸಣೆಗೆ ಒಳಗಾಗಬೇಕು.
5 ಪರೀಕ್ಷೆ ಬರೆದ ಬಳಿಕ ಅಭ್ಯರ್ಥಿ ಗಳು ಪ್ರವೇಶ ಪತ್ರ, ಒಎಂಆರ್ ಶೀಟ್ (ಮೂಲ ಪ್ರತಿ, ದ್ವಿಪತ್ರಿ ಎರಡನ್ನೂ) ಪರಿವೀಕ್ಷಕರಿಗೆ ಒಪ್ಪಿಸಬೇಕು. ಪ್ರಶ್ನೆಪತ್ರಿಕೆಯ ಬುಕ್‌ಲೆಟ್ ಕೊಂಡೊಯ್ಯಬಹುದು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Uttarakhand: ಕಂದಕಕ್ಕೆ ಬಿದ್ದ ಬಸ್ ನಾಲ್ವರು ಮೃ*ತ್ಯು; 20ಕ್ಕೂ ಅಧಿಕ ಮಂದಿಗೆ ಗಾಯ
Uttar Pradesh: 16 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾ*ಚಾರ; ಇಬ್ಬರ ಬಂಧನ
Atul Subhash Case: ಮೊಮ್ಮಗನನ್ನು ನೀಡದಿದ್ದರೆ ಆತ್ಮಹತ್ಯೆ; ಅತುಲ್ ತಂದೆ
Delhi: ನಕಲಿ ಕೇಸ್ ನಲ್ಲಿ ಸಿಎಂ ಅತಿಶಿ ಬಂಧನಕ್ಕೆ ಇ.ಡಿ, ಸಿಬಿಐಗೆ ಬಿಜೆಪಿ ಆದೇಶ: ಕೇಜ್ರಿ!
Jammu and Kashmir: ಕಂದಕಕ್ಕೆ ಉರುಳಿದ ಸೇನಾ ವಾಹನ; ಕುಂದಾಪುರದ ಯೋಧ ಅನೂಪ್ ಹುತಾತ್ಮ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಕಾಲ್ತುಳಿತ ಪ್ರಕರಣ: ಅಲ್ಲು, ʼಪುಷ್ಪ-2ʼ ತಂಡದಿಂದ ರೇವತಿ ಕುಟುಂಬಕ್ಕೆ 2 ಕೋಟಿ ರೂ. ಪರಿಹಾರ
Madikeri: ಹುಲಿ ದಾಳಿ; ವ್ಯಕ್ತಿಗೆ ಗಂಭೀರ ಗಾಯ
Egg Thrown: ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ; ಮೂವರ ಬಂಧನ
Living together; ವಿಚ್ಛೇದನ ತಡೆಯಲು ಲಿವಿಂಗ್ ಟುಗೆದರ್ ಸಹಕಾರಿಯೇ?
Uttarakhand: ಕಂದಕಕ್ಕೆ ಬಿದ್ದ ಬಸ್ ನಾಲ್ವರು ಮೃ*ತ್ಯು; 20ಕ್ಕೂ ಅಧಿಕ ಮಂದಿಗೆ ಗಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.