ನೀಟ್ ವಿರುದ್ಧ ಪ್ರತಿಭಟನೆಗೆ ಸುಪ್ರೀಂ ಕೋರ್ಟ್ ಬ್ರೇಕ್
Team Udayavani, Sep 9, 2017, 9:20 AM IST
ಹೊಸದಿಲ್ಲಿ: ನೀಟ್ ಪ್ರತಿಭಟನೆಗೆ ಸುಪ್ರೀಂ ಕೋರ್ಟ್ ಬ್ರೇಕ್ ಹಾಕಿದೆ. ನೀಟ್ ಪರೀಕ್ಷೆಗೆ ಸಂಬಂಧಿಸಿ ಯಾವುದೇ ಪ್ರತಿಭಟನೆ ನಡೆಯದಂತೆ ನೋಡಿಕೊಳ್ಳಿ ಎಂದು ತಮಿಳುನಾಡು ಸರಕಾರಕ್ಕೆ ಸುಪ್ರೀಂಕೋರ್ಟ್ ಶುಕ್ರವಾರ ಆದೇಶಿಸಿದೆ. ಜತೆಗೆ, ನಿಯಮವನ್ನು ಉಲ್ಲಂಘಿಸಿ ಪ್ರತಿಭಟನೆ ನಡೆಸಿದರೆ ಹಾಗೂ ಕಾನೂನು ಸುವ್ಯವಸ್ಥೆಗೆ ಧಕ್ಕೆ ತಂದರೆ ಅಂಥವರ ವಿರುದ್ಧ ಕಠಿನ ಕ್ರಮ ಕೈಗೊಳ್ಳುವಂತೆಯೂ ಸೂಚಿಸಿದೆ.
ನೀಟ್ ಪರೀಕ್ಷೆ ವಿರುದ್ಧ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದ ವಿದ್ಯಾರ್ಥಿನಿ ಅನಿತಾ ಕಳೆದ ವಾರವಷ್ಟೇ ನೇಣಿಗೆ ಶರಣಾಗಿದ್ದಳು. ತದನಂತರ ರಾಜ್ಯಾದ್ಯಂತ ನೀಟ್ ಪರೀಕ್ಷೆಯನ್ನು ರದ್ದುಗೊಳಿಸುವಂತೆ ಆಗ್ರಹಿಸಿ ನಿರಂತರ ಪ್ರತಿಭಟನೆ ನಡೆಯುತ್ತಿತ್ತು. ಈ ಹಿನ್ನೆಲೆಯಲ್ಲಿ ಶುಕ್ರವಾರ ಸಿಜೆಐ ದೀಪಕ್ ಮಿಶ್ರಾ ನೇತೃತ್ವದ ನ್ಯಾಯಪೀಠ ಪ್ರತಿಭಟನೆಗೆ ನಿರ್ಬಂಧ ಹೇರಿ ಆದೇಶ ಹೊರಡಿಸಿದೆ. ಜತೆಗೆ, ಅನಿತಾ ಸಾವು ಖಂಡಿಸಿ ನಡೆಯುವ ಪ್ರತಿಭಟನೆ ಜನಜೀವನ ಅಸ್ತವ್ಯಸ್ತಗೊಳಿಸದಂತೆ ಸರಕಾರಕ್ಕೆ ಸೂಚಿಸಿ ಎಂದು ಕೋರಿ ಸಲ್ಲಿಸಲಾಗಿದ್ದ ಅರ್ಜಿಗೆ ಸಂಬಂಧಿಸಿಯೂ ನ್ಯಾಯಪೀಠ ಪ್ರತಿಕ್ರಿಯಿಸಿದೆ. ಈ ಕುರಿತು ತಮಿಳುನಾಡು ಸರಕಾರಕ್ಕೆ ನೋಟಿಸ್ ನೀಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Police Nabs: 930 “ಡಿಜಿಟಲ್ ಅರೆಸ್ಟ್’ ಪ್ರಕರಣಗಳ ರೂವಾರಿ ಬೆಂಗಳೂರಿನಲ್ಲಿ ಬಂಧನ!
PM-Kisan Samman; ರೈತರಿಗೆ 6000 ರೂ. ಸಿಗುವ ಯೋಜನೆಗೆ ಐ.ಡಿ. ಕಡ್ಡಾಯ : ಏನಿದು ರೈತ ಚೀಟಿ?
Ayodhya ರಾಮಮಂದಿರಕ್ಕೆ ಇಂದು ವರ್ಷಪೂರ್ಣ: ಹೇಗಿರಲಿದೆ ಕಾರ್ಯಕ್ರಮ?
Sambhal ಬಾವಿ ಬಗ್ಗೆ ಯಾವ ಕ್ರಮವೂ ಬೇಡ: ಸುಪ್ರೀಂಕೋರ್ಟ್
Maha Kumbh; ಜಾಗ ಕೇಳಿದರೆ ಹುಷಾರ್: ವಕ್ಫ್ ಬೋರ್ಡ್ಗೆ ಎಚ್ಚರಿಕೆ ನೀಡಿದ ಯೋಗಿ
MUST WATCH
ಹೊಸ ಸೇರ್ಪಡೆ
Protest Happy Ending: “ಆಶಾ’ ಕಾರ್ಯಕರ್ತೆಯರ ಗೌರವಧನ 2 ಸಾವಿರ ರೂ. ಏರಿಕೆ
Daily Horoscope: ಬಹುದಿನದ ಅಪೇಕ್ಷೆಯೊಂದು ಕೈಗೂಡಿದ ಆನಂದ, ಶುಭ ಸಮಾಚಾರ
New Method: ಕಾಣೆಯಾದ ಹೋರಿ ಹುಡುಕಲು “ಜಿಪಿಎಸ್’!
ಪಾರ್ಟಿಯಲ್ಲಿ ಯುವತಿಯ ಮೇಲೆ ಅತ್ಯಾ*ಚಾರ: 10 ವರ್ಷ ಕಠಿನ ಕಾರಾಗೃಹ; 10 ಸಾವಿರ ರೂ. ದಂಡ
Police Nabs: 930 “ಡಿಜಿಟಲ್ ಅರೆಸ್ಟ್’ ಪ್ರಕರಣಗಳ ರೂವಾರಿ ಬೆಂಗಳೂರಿನಲ್ಲಿ ಬಂಧನ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.