ಗೋಮಾಂಸ,ಹಂದಿ ಮಾಂಸ ಭಕ್ಷಿಸುತ್ತಿದ್ದ ನೆಹರು ಪಂಡಿತ ಹೇಗೆ:ಬಿಜೆಪಿ ಶಾಸಕ
Team Udayavani, Aug 11, 2018, 10:40 AM IST
ಹೊಸದಿಲ್ಲಿ: ‘ಗೋಮಾಂಸ ಮತ್ತು ಹಂದಿಮಾಂಸವನ್ನು ಭಕ್ಷಿಸುತ್ತಿದ್ದ ದೇಶದ ಪ್ರಥಮ ಪ್ರಧಾನಿ ಜವಹಾರ್ ಲಾಲ್ ನೆಹರು ಅವರನ್ನು ಪಂಡಿತ ಎಂದು ಕರೆಯುವುದು ಹೇಗೆ’ ಎಂದು ರಾಜಸ್ಥಾನದ ಬಿಜೆಪಿ ಶಾಸಕ ಜ್ಞಾನ್ ದೇವ್ ಅಹುಜಾ ಪ್ರಶ್ನಿಸಿದ್ದಾರೆ.
ಸದಾ ಆಕ್ರಮಣಕಾರಿ ಹೇಳಿಕೆಗಳನ್ನು ನೀಡುವ ಮೂಲಕ ಸುದ್ದಿಯಾಗುವ ರಾಜಸ್ಥಾನದ ಅಲ್ವಾರ್ ಕ್ಷೇತ್ರದ ಬಿಜೆಪಿ ಶಾಸಕ ಜ್ಞಾನ್ ದೇವ್ ‘ನೆಹರು ಪಂಡಿತರಲ್ಲವೇ ಅಲ್ಲ. ಆ ಪೂರ್ವ ಪ್ರತ್ಯಯವನ್ನು ಕಾಂಗ್ರೆಸ್ ಪಕ್ಷ ಅವರ ಹೆಸರಿನಲ್ಲಿ ಸೇರಿಸಿದ್ದು’ ಎಂದಿದ್ದಾರೆ.
ಶುಕ್ರವಾರ ದೆಹಲಿಯ ಬಿಜೆಪಿ ಕಚೇರಿಗೆ ಆಗಮಿಸಿದ್ದ ಜ್ಞಾನ್ ದೇವ್ ಈ ಹೇಳಿಕೆ ನೀಡಿ ವಿವಾದವನ್ನು ಮೈ ಮೇಲೆ ಎಳೆದುಕೊಂಡಿದ್ದಾರೆ.
‘ರಾಹುಲ್ ಗಾಂಧಿ ಎಂದಿಗೂ ಅಜ್ಜಿ ಇಂದಿರಾ ಗಾಂಧಿ ಅವರೊಂದಿಗೆ ದೇಗುಲಗಳಿಗೆ ಭೇಟಿ ನೀಡಿಲ್ಲ. ಕಾಂಗ್ರೆಸ್ ನಾಯಕ ಸಚಿನ್ ಪೈಲಟ್ ಹೇಳಿಕೆ ಸುಳ್ಳು. ಅದನ್ನು ನಿಜ ಮಾಡಿದಲ್ಲಿ ನಾನು ರಾಜಕೀಯ ಸನ್ಯಾಸ ಪಡೆಯುತ್ತೇನೆ,ನಿಜವಾಗಿಸಲು ಸಾಧ್ಯವಾದಲ್ಲಿ ಸಚಿನ್ ಪೈಲಟ್ ರಾಜಕೀಯ ಕ್ಷೇತ್ರ ಬಿಡಬೇಕು’ ಎಂದು ಸವಾಲೆಸೆದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
RJD ಜೊತೆ ಮೈತ್ರಿ ಮಾಡಿಕೊಂಡು 2 ಬಾರಿ ತಪ್ಪೆಸಗಿದ್ದೆ: ನಿತೀಶ್ ಕುಮಾರ್
Odisha: ಕಾರಿಗೆ ಟ್ರಕ್ ಢಿಕ್ಕಿ ಹೊಡೆದು ಇಬ್ಬರು ಬಿಜೆಪಿ ನಾಯಕರು ಮೃ*ತ್ಯು
Delhi; ರಸ್ತೆಗಳು ಪ್ರಿಯಾಂಕಾ ಗಾಂಧಿ ಕೆನ್ನೆಯಂತಿರಬೇಕು: ಬಿಜೆಪಿ ನಾಯಕನ ಹೇಳಿಕೆಗೆ ಟೀಕೆ
Gujarat: ಕೋಸ್ಟ್ ಗಾರ್ಡ್ ಹೆಲಿಕಾಪ್ಟರ್ ಪತನ; ಮೂವರು ಮೃ*ತ್ಯು
Oyo Rooms: ಮದುವೆಯಾಗದ ಜೋಡಿಗೆ ಇನ್ಮುಂದೆ ʼಓಯೋʼ ರೂಮ್ ಸಿಗೋದು ಕಷ್ಟ – ವರದಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.