ಒಡಿಶಾ: ತರುಣನಿಂದ ಅತ್ಯಾಚಾರ, 4ರ ಹರೆಯದ ಬಾಲಕಿ ಗಂಭೀರ
Team Udayavani, Apr 16, 2018, 3:57 PM IST
ಬಾಲಸೋರ್, ಒಡಿಶಾ : ದೇಶದಲ್ಲಿ ಹೆಣ್ಣು ಮಕ್ಕಳ ಮೇಲಿನ ಅತ್ಯಾಚಾರ, ಹಿಂಸೆಗೆ ಕೊನೆಯೇ ಇಲ್ಲವೇನೋ ಎನ್ನುವುದಕ್ಕೆ ತಾಜಾ ಉದಾಹರಣೆಯಾಗಿ ಒಡಿಶಾದ ಬಾಲಸೋರ್ ಜಿಲ್ಲೆಯಲ್ಲಿ 24 ವರ್ಷ ಪ್ರಾಯದ ತರುಣನೋರ್ವ ತನ್ನ ನೆರೆಮನೆಯ ನಾಲ್ಕು ವರ್ಷ ಪ್ರಾಯದ ಬಾಲಕಿಗೆ ಚಾಕಲೇಟ್ ಆಸೆ ತೋರಿಸಿ ತನ್ನ ಮನೆಗೆ ಕರೆದೊಯ್ದು ಆಕೆಯ ಮೇಲೆ ಅತ್ಯಾಚಾರ ಎಸಗಿ ಗಂಭೀರವಾಗಿ ಗಾಯಗೊಳಿಸಿದ್ದಾನೆ.
ಬಾಲಕಿಯು ತನ್ನ ಮನೆಯ ಹೊರಗೆ ಆಟವಾಡುತ್ತಿದ್ದಾಗ ನೆರೆಮನೆಯ ತರುಣನು ಆಕೆಗೆ ಚಾಕಲೇಟ್ ಆಸೆ ತೋರಿಸಿ ಕರೆದೊಯ್ದು ಆಕೆಯ ಮೇಲೆ ರೇಪ್ ಎಸಗಿದ್ದಾನೆ.
ನೋವಿನಿಂದ ನರಳುತ್ತಿದ್ದ ಬಾಲಕಿಯು ನಡೆದ ಘಟನೆಯನ್ನು ತನ್ನ ತಾಯಿಗೆ ತಿಳಿಸಿದಾಗಲೇ ವಿಷಯ ಗೊತ್ತಾಗಿತ್ತು. ಹೆತ್ತವರು ಬಾಲಕಿಯನ್ನು ಕೂಡಲೇ ನೀಲಗಿರಿ ಆಸ್ಪತ್ರೆಗೆ ಒಯ್ದು ಅಲ್ಲಿ ಚಿಕಿತ್ಸ ಕೊಡಿಸಿದರಾದರೂ ಬಾಲಕಿ ಸ್ಥಿತಿ ಹದಗೆಡುತ್ತಲೇ ಇದೆ ಎಂದು ವರದಿಯಾಗಿದೆ.
ಬಾಲಕಿಯ ಹೆತ್ತವರು ಘಟನೆ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದಾರೆ. ವೈದ್ಯಕೀಯ ಪರೀಕ್ಷೆಯಲ್ಲಿ ರೇಪ್ ನಡೆದಿರುವುದು ಗೊತ್ತಾಗಿದೆ. ಅತ್ಯಾಚಾರ ಎಸಗಿದ ತರುಣನು ನಾಪತ್ತೆಯಾಗಿದ್ದಾನೆ; ಆತನಿಗಾಗಿ ಹುಡುಕಾಟ ನಡೆದಿದೆ ಎಂದು ನೀಲಗಿರಿ ಪೊಲೀಸ್ ಠಾಣೆ ಪ್ರಭಾರಾಧಿಕಾರಿ ರಮೇಶ್ ಸಿಂಗ್ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Joe Biden “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್ ಕ್ಷಮೆಗೆ ವೈದ್ಯರ ಪಟ್ಟು
Defamation notice:ಮತಕ್ಕಾಗಿ ಹಣ ಆರೋಪ: ಖರ್ಗೆ,ರಾಹುಲ್ ವಿರುದ್ಧ ತಾಬ್ಡೆ 100 ಕೋಟಿ ದಾವೆ!
Adani: ಲಂಚ ಕೇಸ್; ಜಗನ್ ವಿರುದ್ಧ ಕ್ರಮಕ್ಕೆ ಸಿಎಂ ನಾಯ್ಡು ಚಿಂತನೆ
Supreme Court: ದಿಲ್ಲಿಯ 113 ಚೆಕ್ಪೋಸ್ಟ್ನಲ್ಲಿ ಪೊಲೀಸರನ್ನು ನೇಮಿಸಿ
Delhi Elections: ಆಪ್ನಿಂದ 7 ಉಚಿತ ಯೋಜನೆ ಘೋಷಣೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.