ಪ್ರೇಮಸೌಧದಲ್ಲಿ ನೆತನ್ಯಾಹು ದಂಪತಿ
Team Udayavani, Jan 17, 2018, 6:00 AM IST
ನವದೆಹಲಿ: ಆರು ದಿನಗಳ ಭಾರತ ಭೇಟಿಯಲ್ಲಿರುವ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಮಂಗಳವಾರ ಆಗ್ರಾದ ತಾಜ್‌ಮಹಲ್‌ಗೆ ಭೇಟಿ ನೀಡಿದರು. ಇವರೊಂದಿಗೆ ಇವರ ಪತ್ನಿ ಸಾರಾ ಕೂಡ ಇದ್ದರು. ನೆತನ್ಯಾಹು ದಂಪತಿಯನ್ನು ಉ.ಪ್ರ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು ವಿಮಾನ ನಿಲ್ದಾಣದಲ್ಲಿ ಬರಮಾಡಿಕೊಂಡರು. ಖೇರಿಯಾ ವಿಮಾನ ನಿಲ್ದಾಣಕ್ಕೆ ಆಗಮಿಸುತ್ತಿದ್ದಂತೆಯೇ, ಬ್ರಜ್ ನೃತ್ಯದಿಂದ ಅವರನ್ನು ಸ್ವಾಗತಿಸಲಾಯಿತು.
ಪ್ರಧಾನಿ ನರೇಂದ್ರ ಮೋದಿಯವರೊಂದಿಗೆ ನೆತನ್ಯಾಹು ಬುಧವಾರ ಗುಜರಾತ್‌ಗೆ ತೆರಳಲಿದ್ದು, ಅಹಮದಾಬಾದ್‌ನಲ್ಲಿ ಭರ್ಜರಿ ತಯಾರಿ ನಡೆಸಲಾಗಿದೆ. ವಿಮಾನ ನಿಲ್ದಾಣದಿಂದ ಸಬರಮತಿ ಆಶ್ರಮದವರೆಗೆ ಎಂಟು ಕಿ.ಮೀ ವರೆಗೆ ಇಬ್ಬರೂ ನಾಯಕರು ರೋಡ್‌ಶೋ ನಡೆಸಲಿದ್ದಾರೆ. ಈ ರಸ್ತೆಗುಂಟ 50 ವೇದಿಕೆಗಳನ್ನು ನಿರ್ಮಿಸಲಾಗಿದ್ದು, ದೇಶದ ವಿವಿಧ ರಾಜ್ಯದ ಜನರು ಸಾಂಸ್ಕೃತಿಕ ಕಾರ್ಯಕ್ರಮಗಳ ಮೂಲಕ ನೆತನ್ಯಾಹುರನ್ನು ಆಹ್ವಾನಿಸಲಿದ್ದಾರೆ. ಭಾರತದ ಯಹೂದಿ ಸಮುದಾಯದ ಜನರೂ ಇರಲಿದ್ದಾರೆ. ಎರಡು ಪರಿಣಿತಿ ಕೇಂದ್ರಕ್ಕೆ ಭೇಟಿ ನೀಡಿ ಒಂದು ಪರಿಣಿತಿ ಕೇಂದ್ರವನ್ನು ಅನಾವರಣಗೊಳಿಸಲಿದ್ದಾರೆ. ಅಲ್ಲದೆ ಸಬರಮತಿ ಆಶ್ರಮಕ್ಕೂ ಅವರು ಭೇಟಿ ನೀಡಲಿದ್ದಾರೆ. ಕಳೆದ ಸೆಪ್ಟೆಂಬರ್‌ನಲ್ಲಿ ಜಪಾನ್ ಪ್ರಧಾನಿ ಶಿಂಜೋ ಅಬೆಗೆ ಇದೇ ರೀತಿಯ ಸ್ವಾಗತ ಕೋರಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Divorce: 29 ವರ್ಷಗಳ ದಾಂಪತ್ಯಕ್ಕೆ ಅಂತ್ಯ ಹಾಡಿದ ಎ.ಆರ್.ರೆಹಮಾನ್
ಮಣಿಪುರವನ್ನು ರಕ್ಷಿಸಿ: ರಾಷ್ಟ್ರಪತಿಗೆ ಖರ್ಗೆ ಪತ್ರ
Chennai: ಕೃಷ್ಣಗೆ ಎಂ.ಎಸ್.ಸುಬ್ಬುಲಕ್ಷ್ಮಿಪ್ರಶಸ್ತಿ ನೀಡಿಕೆಗೆ ಮದ್ರಾಸ್ ಹೈಕೋರ್ಟ್ ತಡೆ
Savarkar defamation case:: ಡಿ.2ರಂದು ಖುದ್ದು ಹಾಜರಾಗಲು ರಾಹುಲ್‌ಗೆ ಆದೇಶ
Flight: ಭಾರತ, ಚೀನಾ ನಡುವೆ ನೇರ ವಿಮಾನಯಾನ ಸೌಲಭ್ಯ ಪುನಾರಂಭ?
MUST WATCH
ಹೊಸ ಸೇರ್ಪಡೆ
Mangaluru: ಅಕಾಡೆಮಿ ಯಕ್ಷಗಾನ ಕಲಾವಿದರಿಗೆ ಶಕ್ತಿ ತುಂಬುವ ಕೆಲಸ ಮಾಡಲಿ: ಡಾ.ಶಿವರಾಮ ಶೆಟ್ಟಿ
Kaup: ಉದ್ಯಾವರ: ಮಹಿಳೆ ಮಲಗಿದ ಸ್ಥಿತಿಯಲ್ಲೇ ಸಾವು
Udupi: ಗೀತಾರ್ಥ ಚಿಂತನೆ-99: ತಿಳಿದುಕೊಂಡವರ ಹಾಗಿದ್ದ ಅರ್ಜುನ
Puttur: ಕಾಸರಗೋಡು ಮೂಲದ ಅಪ್ರಾಪ್ತೆಗೆ ಲೈಂಗಿಕ ಕಿರುಕುಳ; ಪೋಕ್ಸೊ ಕೇಸು
Bengaluru: ಇವಿ ಬೈಕ್ ಶೋ ರೂಮ್‌ನಲ್ಲಿ ಬೆಂಕಿ: ಯುವತಿ ದಾರುಣ ಸಾ*ವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.