ಡೋಕ್ಲಾಂನಲ್ಲಿ ಹೊಸ ಕ್ಯಾತೆ
Team Udayavani, Dec 13, 2017, 7:55 AM IST
ನವದೆಹಲಿ/ಬೀಜಿಂಗ್: ಡೋಕ್ಲಾಂನಲ್ಲಿ ಚೀನಾ ಸೈನಿಕರು ಬೀಡು ಬಿಟ್ಟಿರುವಂತೆಯೇ ಮತ್ತೂಂದು ಆತಂಕಕಾರಿ ವಿಚಾರ ಬಹಿರಂಗವಾಗಿದೆ. ಒಂದೂವರೆ ವರ್ಷಗಳ ಅವಧಿಯಲ್ಲಿ ಡೋಕ್ಲಾಂನಲ್ಲಿ ಚೀನಾ ಸೈನಿಕರು ನಿರಂತರವಾಗಿ ರಸ್ತೆ ನಿರ್ಮಾಣ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದರು. ಇದೀಗ ಹೊಸ ರಸ್ತೆ ಕಾಮಗಾರಿಗಳನ್ನು ಫೆ.9ರ ಬಳಿಕ ಕೈಗೊಳ್ಳಲಾಗಿದೆ. ಎರಡು ಹೊಸ ರಸ್ತೆಗಳನ್ನು ತೀರಾ ಇತ್ತೀಚೆಗಷ್ಟೇ ನಿರ್ಮಿಸಲಾಗಿದೆ. ಈ ಬಗ್ಗೆ ಮಂಗಳವಾರ ಹೊಸ ಉಪಗ್ರಹ ಚಿತ್ರಗಳು ಬಿಡುಗಡೆಯಾಗಿವೆ ಎಂದು “ಎನ್‌ಡಿಟಿವಿ’ ವರದಿ ಮಾಡಿದೆ.
ಈ ಬಗ್ಗೆ ಹಳೆಯ ಮತ್ತು ಹೊಸ ಸ್ಯಾಟಲೈಟ್ ಫೋಟೋಗಳನ್ನು ಹೋಲಿಕೆ ಮಾಡಿದಾಗ ಡೋಕ್ಲಾಂನಲ್ಲಿ ಗಣನೀಯ ಪ್ರಮಾಣದಲ್ಲಿ ರಸ್ತೆ ಕಾಮಗಾರಿಯಲ್ಲಿ ಪ್ರಗತಿಯಾಗಿರುವುದು ಕಂಡುಬಂದಿದೆ. ಭಾರತದ ವ್ಯಾಪ್ತಿ ಯಲ್ಲಿರುವ ಡೋಕ್ಲಾಂನಿಂದ 4.5 ಕಿ.ಮೀ ಪೂರ್ವದಲ್ಲಿ 1 ಕಿ.ಮೀನಷ್ಟು ಹೊಸ ರಸ್ತೆ ನಿರ್ಮಿಸಲಾಗಿದೆ. 2ನೇ ರಸ್ತೆಯನ್ನು ವಿವಾದಕ್ಕೆ ಎಡೆ ಮಾಡಿಕೊಟ್ಟ ಸ್ಥಳದಿಂದ 7.3 ಕಿ.ಮೀ ದೂರದಲ್ಲಿ ನಿರ್ಮಿಸಲಾಗಿದೆ. ಜತೆಗೆ ಹೆಚ್ಚು ವರಿಯಾಗಿ ರಸ್ತೆ ಕಾಮಗಾರಿ ಕೈಗೊಳ್ಳಲಾಗಿದೆ.
ಹಳೆಯ ಮತ್ತು ಹೊಸ ಫೋಟೋಗಳನ್ನು ನೋಡಿದಾಗ ಹೊಸ ರಸ್ತೆಗಳನ್ನು ಅ.17 ಮತ್ತು ಡಿ.8ರ ನಡುವೆ ನಿರ್ಮಿಸಲಾಗಿದೆ ಎಂದು ವರದಿ ಹೇಳಿದೆ. ಜೂನ್‌ನಲ್ಲಿ ಸಿಕ್ಕಿಂನಲ್ಲಿ ಗಡಿ ದಾಟಿದ್ದ ಭಾರತೀಯ ಸೈನಿಕರು ರಸ್ತೆ ಕಾಮಗಾರಿಯನ್ನು ನಿಲ್ಲಿಸುವಂತೆ ಚೀನಾಕ್ಕೆ ಸೂಚಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Odisha: ಕಾರಿಗೆ ಟ್ರಕ್ ಢಿಕ್ಕಿ ಹೊಡೆದು ಇಬ್ಬರು ಬಿಜೆಪಿ ನಾಯಕರು ಮೃ*ತ್ಯು
Delhi; ರಸ್ತೆಗಳು ಪ್ರಿಯಾಂಕಾ ಗಾಂಧಿ ಕೆನ್ನೆಯಂತಿರಬೇಕು: ಬಿಜೆಪಿ ನಾಯಕನ ಹೇಳಿಕೆಗೆ ಟೀಕೆ
Gujarat: ಕೋಸ್ಟ್ ಗಾರ್ಡ್ ಹೆಲಿಕಾಪ್ಟರ್ ಪತನ; ಮೂವರು ಮೃ*ತ್ಯು
Oyo Rooms: ಮದುವೆಯಾಗದ ಜೋಡಿಗೆ ಇನ್ಮುಂದೆ ʼಓಯೋʼ ರೂಮ್ ಸಿಗೋದು ಕಷ್ಟ – ವರದಿ
Jammu and Kashmir: ಕಮರಿಗೆ ಬಿದ್ದ ವಾಹನ; ಕನಿಷ್ಠ ನಾಲ್ವರು ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.