ಉದ್ಯೋಗ ಸೃಷ್ಟಿಗಾಗಿ ಹೊಸ ಸಾಲ ಯೋಜನೆ
Team Udayavani, Jul 2, 2019, 6:00 AM IST
ನವದೆಹಲಿ: ಉದ್ಯೋಗ ಸೃಷ್ಟಿಗೆ ಅನುಕೂಲವಾಗುವಂತೆ ಸಣ್ಣ, ಮಧ್ಯಮ ಪ್ರಮಾಣದ ಉದ್ದಿಮೆಗಳಿಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಹೊಸ ಸಾಲ ಯೋಜನೆ ರೂಪಿಸಲು ಕೇಂದ್ರ ಸರ್ಕಾರ ಮುಂದಾಗಿದೆ.
ಈ ಬಗ್ಗೆ ರಾಜ್ಯಸಭೆಯಲ್ಲಿ ಮಾಹಿತಿ ನೀಡಿರುವ ಕೇಂದ್ರ ಮಧ್ಯಮ, ಸಣ್ಣ ಉದ್ದಿಮೆ ಸಚಿವ ನಿತಿನ್ ಗಡ್ಕರಿ, ಈ ಹೊಸ ಯೋಜನೆಯಲ್ಲಿ ಎಸ್‌ಸಿ- ಎಸ್ಟಿ ಸಮುದಾಯಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದಿದ್ದಾರೆ. ಉದ್ಯೋಗ ಸೃಜಿಸುವ ಕ್ಷೇತ್ರದಲ್ಲಿ ನಿರೀಕ್ಷಿತ ಸಾಧನೆ ಮಾಡಲಾಗಿಲ್ಲ ಎಂದು ಕೇಂದ್ರ ಸರ್ಕಾರದ ಇತ್ತೀಚಿನ ದತ್ತಾಂಶಗಳು ಮಾಹಿತಿ ನೀಡಿರುವಂತೆಯೇ ಸರ್ಕಾರದಿಂದ ಈ ಘೋಷಣೆ ಹೊರಬಿದ್ದಿದೆ.
ಈ ಯೋಜನೆಯನ್ನು ಜಾರಿಗೊಳಿಸುವ ನಿಟ್ಟಿನಲ್ಲಿ ವಿಶ್ವಬ್ಯಾಂಕ್ ಮತ್ತು ಏಷ್ಯನ್ ಅಭಿವೃದ್ಧಿ ಬ್ಯಾಂಕ್‌ಗಳ ಜತೆಗೆ ಮಾತುಕತೆ ನಡೆಸಲಾಗುತ್ತದೆ. ಈ ಮೂಲಕ ಬಡವರಿಗೆ ಉದ್ಯೋಗಾವಕಾಶಗಳ ಸೃಷ್ಟಿಗೆ ಪ್ರಯತ್ನ ಮಾಡಲಾಗುತ್ತದೆ ಎಂದು ಗಡ್ಕರಿ ಹೇಳಿದ್ದಾರೆ.
59 ನಿಮಿಷಗಳಲ್ಲಿ ಸಾಲ: ಸಣ್ಣ ಮತ್ತು ಮಧ್ಯಮ ಪ್ರಮಾಣದ ಉದ್ಯೋಗ ಯೋಜನೆಗಳಿಗೆ 59 ನಿಮಿಷಗಳಲ್ಲಿ ಸಾಲ ನೀಡಲಾಗುತ್ತದೆ. ಅದಕ್ಕಾಗಿ ಎಸ್‌ಐಡಿಬಿಐ ಬ್ಯಾಂಕ್ ಸಹಯೋಗದಲ್ಲಿ www.psbloansin59minutes.com ಎಂಬ ವೆಬ್‌ಸೈಟ್ ರೂಪಿಸಲಾಗಿದೆ. ಅದರಲ್ಲಿ ಸರ್ಕಾರಿ ಸ್ವಾಮ್ಯದ ಇತರ ಬ್ಯಾಂಕ್‌ಗಳೂ ಇವೆ. 1 ಲಕ್ಷ ರೂ.ಗಳಿಂದ 100 ಲಕ್ಷ ರೂ. ವರೆಗೆ ತಾತ್ವಿಕವಾಗಿ ಒಪ್ಪಿಗೆ ನೀಡಿವೆ. ಸರ್ಕಾರಿ ಸ್ವಾಮ್ಯದ 20 ಬ್ಯಾಂಕ್‌ಗಳು ಈ ವೆಬ್‌ಸೈಟ್ ಜತೆಗೂಡಿವೆ ಎಂದು ಗಡ್ಕರಿ ವಿವರಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ
Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು
Gujarat: 700 ಕೆ.ಜಿ. ಡ್ರಗ್ಸ್ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ
Bombay high court: ವಯಸ್ಕಳಲ್ಲದ ಪತ್ನಿ ಜತೆ ಒಪ್ಪಿತ ಲೈಂಗಿಕ ಸಂಬಂಧ ರೇ*ಪ್
Jharkhand; ವಿಮಾನದಲ್ಲಿ ತಾಂತ್ರಿಕ ದೋಷ: 2 ಗಂಟೆ ಕಾದ ಪ್ರಧಾನಿ ಮೋದಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.